ಬೀದಿ ನಾಯಿ ದಾಳಿಯಿಂದ ವ್ಯಕ್ತಿ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ : ರಾಜ್ಯ ಸರಕಾರ ಆದೇಶ

ಸಾಂದರ್ಭಿಕ ಚಿತ್ರ (Photo: PTI)
ಬೆಂಗಳೂರು : ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ.
ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ನೀಡುವ ಪರಿಹಾರ ಹಣದಲ್ಲಿ ಚಿಕಿತ್ಸೆ ವೆಚ್ಚವಾಗಿ 1,500 ರೂ. ಹಾಗೂ ಗಾಯಗೊಂಡ ಸಂತ್ರಸ್ತರಿಗೆ 3,500 ರೂ. ಪಾವತಿಯಾಗಲಿದೆ. ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ ಅಥವಾ ರೇಬೀಸ್ನಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ.
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ
Next Story





