Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಕ್ಷಿಣ ಭಾಗದ ಕಬ್ಬು ಬೆಳೆಗಾರರಿಗೆ ಪ್ರತಿ...

ದಕ್ಷಿಣ ಭಾಗದ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‍ಗೆ 50 ರೂ. ಶೀಘ್ರದಲ್ಲೇ ಜಮೆ : ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ12 May 2026 11:42 PM IST
share
ದಕ್ಷಿಣ ಭಾಗದ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‍ಗೆ 50 ರೂ. ಶೀಘ್ರದಲ್ಲೇ ಜಮೆ : ಮುಖ್ಯಮಂತ್ರಿ

ಬೆಂಗಳೂರು, ಮೇ 12: ದಕ್ಷಿಣ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸಕ್ಕರೆ ನಿರ್ದೇಶನಾಲಯದ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಇದರ ಬೆನ್ನಲ್ಲೇ 7 ಸಕ್ಕರೆ ಕಾರ್ಖಾನೆಗಳು ರೈತರ ಖಾತೆ ವಿವರವನ್ನು ನೀಡಿದ್ದು, ಶೀಘ್ರದಲ್ಲೇ ರೈತರಿಗೆ ಸರಕಾರದ ಪಾಲಿನ 50 ರೂ. ಪ್ರೋ ತ್ಸಾಹ ಧನ ಜಮೆಯಾಗಲಿದೆ. ಇನ್ನು ರೈತರ ಖಾತೆಗಳಿಗೆ ಹಣ ಜಮೆ ಮಾಡುವಂತೆ ಖಜಾನೆಗೆ ಜಿಲ್ಲಾಧಿಕಾರಿಗಳು ವಿವರಗಳನ್ನು ನೀಡಿದ್ದಾರೆ.

2025-26ನೆ ಹಂಗಾಮಿನ ಕಬ್ಬು ಬೆಳೆಗಾರರ ಬಾಕಿ ಪ್ರೋ ತ್ಸಾಹಧನ ಪಾವತಿ, ರೈತರ ಬ್ಯಾಂಕ್ ಖಾತೆ ವಿವರಗಳನ್ನು ನೀಡಲು ನಿರಾಕರಿಸುತ್ತಿರುವ ಹಾಗೂ ಸರಕಾರದ ಆದೇಶ ಉಲ್ಲಂಘಿಸುತ್ತಿರುವ ದಕ್ಷಿಣ ಕರ್ನಾಟಕದ 7 ಸಕ್ಕರೆ ಕಾರ್ಖಾನೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಬಗ್ಗೆ ದಿನೇಶ್ ಗೂಳಿಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಇದರ ಬೆನ್ನಲ್ಲೇ ಸಕ್ಕರೆ ಕಾರ್ಖಾನೆಗಳು ರೈತರ ಖಾತೆ ವಿವರವನ್ನು ನೀಡಿವೆ. ಆದರೆ, ತಮ್ಮ ಪಾಲಿನ 50 ರೂ. ನೀಡಲು ಹಿಂದೇಟು ಹಾಕಿದ್ದು, ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದು, ಸದ್ಯ ಪ್ರಕರಣ ವಿಚಾರಣಾ ಹಂತದಲ್ಲಿದೆ.

ಲೈಸೆನ್ಸ್ ರದ್ದುಗೊಳಿಸಲೂ ಮನವಿ: ರೈತರಿಗೆ ಬಾಕಿ ನೀಡದ ಹಾಗೂ ಸರಕಾರದ ನಿಯಮ ಪಾಲಿಸದ ಈ 7 ಕಾರ್ಖಾನೆಗಳ ‘ಕ್ರಶಿಂಗ್ ಲೈಸೆನ್ಸ್’ ಅನ್ನು ಮುಂಬರುವ ಹಂಗಾಮಿಗೆ ನವೀಕರಿಸಬಾರದು. ಸರಕಾರವು ಹೈಕೋರ್ಟ್‍ನಲ್ಲಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಅಡ್ವೊಕೇಟ್ ಜನರಲ್ ಅವರ ಮೂಲಕ ಬಲವಾದ ವಾದ ಮಂಡಿಸಬೇಕು ಎಂದು ದಿನೇಶ್ ಗೂಳಿಗೌಡ ಕೋರಿದ್ದರು.

ಅಲ್ಲದೆ, ಮುಂಗಾರು ಹಂಗಾಮು ಆರಂಭವಾಗುವ ಮುನ್ನವೇ ಮುಖ್ಯಮಂತ್ರಿ ನೇತೃತ್ವದಲ್ಲಿ ಈ ಕಾರ್ಖಾನೆ ಮಾಲಕರ ತುರ್ತು ಸಭೆ ಕರೆದು, ರೈತರ ಹಣ ಬಿಡುಗಡೆ ಮಾಡದಿದ್ದರೆ ಕಾರ್ಖಾನೆಗಳನ್ನು ಸರಕಾರದ ವಶಕ್ಕೆ ಪಡೆಯುವ ಬಗ್ಗೆ ಎಚ್ಚರಿಕೆ ನೀಡಬೇಕು ಎಂದು ಅವರು ಮನವಿ ಮಾಡಿದ್ದರು.

ರೈತರಿಗೆ 50 ರೂ. ನೀಡದ ದಕ್ಷಿಣ ಕರ್ನಾಟಕದ 7 ಸಕ್ಕರೆ ಕಾರ್ಖಾನೆಗಳು: ಬನ್ನಾರಿ ಅಮ್ಮನ್ ಶುಗರ್ಸ್, ಕುಂತೂರು, ಕೊಳ್ಳೇಗಾಲ ತಾಲೂಕು, ಚಾಮರಾಜನಗರ ಜಿಲ್ಲೆ, ಚಾಮುಂಡೇಶ್ವರಿ ಶುಗರ್ಸ್ ಲಿ. ಚನ್ನರಾಯಪಟ್ಟಣ, ಹಾಸನ ಜಿಲ್ಲೆ, ಕೋರಮಂಡಲ ಶುಗರ್ಸ್, ಕೆ.ಆರ್.ಪೇಟೆ ತಾಲೂಕು, ಮಂಡ್ಯ ಜಿಲ್ಲೆ, ಚಾಮುಂಡೇಶ್ವರಿ ಶುಗರ್ಸ್ ಲಿ. ಮದ್ದೂರು ತಾಲೂಕು, ಮಂಡ್ಯ ಜಿಲ್ಲೆ, ಎಂಆರ್ ಎನ್ ಕೇನ್ ಪವರ್ ಅಂಡ್ ಬೈಯೋರಿಪೈನರಿಸ್ ಪ್ರೈ.ಲಿ. ಪಾಂಡವಪುರ ತಾಲೂಕು, ಮಂಡ್ಯ ಜಿಲ್ಲೆ, ಎನ್ ಎಸ್ ಎಲ್ ಶುಗರ್ಸ್ ಲಿ. ಮದ್ದೂರು ತಾಲೂಕು, ಮಂಡ್ಯ ಜಿಲ್ಲೆ ಹಾಗೂ ಬನ್ನಾರಿ ಅಮ್ಮನ್ ಶುಗರ್ಸ್ ಲಿ. ನಂಜನಗೂಡು ತಾಲೂಕು, ಮೈಸೂರು ಜಿಲ್ಲೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X