ಆಶಾ ಕಾರ್ಯಕರ್ತೆಯರ ವೇತನ ಪಾವತಿಗೆ 61.50 ಕೋಟಿ ರೂ. ಬಿಡುಗಡೆ

ಸಾಂದರ್ಭಿಕ ಚಿತ್ರ | PC : PTI
ಬೆಂಗಳೂರು, ಅ.17: ರಾಜ್ಯ ಸರಕಾರವು 2025-26ನೇ ಸಾಲಿನ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು 61.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು ರಾಜ್ಯದ 41000 ಆಶಾ ಕಾರ್ಯಕರ್ತೆಯರಿಗೆ ಗೌರವಧನ ವಿತರಣೆ ಮಾಡಲು ಪ್ರಸಕ್ತ ಸಾಲಿನಲ್ಲಿ 271 ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ. ಇದರಲ್ಲಿ ಅನುದಾನದಲ್ಲಿ ಮೂರನೇ ತ್ರೈಮಾಸಿಕ ಅನುದಾನ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು.
Next Story





