Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಿಬಿಎ ನಗರ ಪಾಲಿಕೆಗಳಲ್ಲಿ 650ಕ್ಕೂ...

ಜಿಬಿಎ ನಗರ ಪಾಲಿಕೆಗಳಲ್ಲಿ 650ಕ್ಕೂ ಹೆಚ್ಚು ನಾಮ ನಿರ್ದೇಶಿತ ಸದಸ್ಯರ ನೇಮಕಾತಿ ಆರೋಪ ಆಧಾರ ರಹಿತ: ನಗರಾಭಿವೃದ್ಧಿ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ15 Dec 2025 12:50 PM IST
share
ಜಿಬಿಎ ನಗರ ಪಾಲಿಕೆಗಳಲ್ಲಿ 650ಕ್ಕೂ ಹೆಚ್ಚು ನಾಮ ನಿರ್ದೇಶಿತ ಸದಸ್ಯರ ನೇಮಕಾತಿ ಆರೋಪ ಆಧಾರ ರಹಿತ: ನಗರಾಭಿವೃದ್ಧಿ ಇಲಾಖೆ

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ (2ನೇ ತಿದ್ದುಪಡಿ) ವಿಧೇಯಕದ ಪ್ರಕರಣ 30ಕ್ಕೆ ಪ್ರಸ್ತಾಪಿಸಲಾಗಿರುವ ತಿದ್ದುಪಡಿಯಿಂದ ಜಿಬಿಎನ ಐದು ನಗರ ಪಾಲಿಕೆಗಳ ಚುನಾವಣೆ ನಡೆಯುವುದಿಲ್ಲ ಎಂಬುದು ಆಧಾರ ರಹಿತವಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಸ್ಪಷ್ಟನೆ ನೀಡಿದೆ.

ರವಿವಾರ ಇಲಾಖೆಯು ಪ್ರಕಟನೆ ಹೊರಡಿಸಿದ್ದು, ಗ್ರೇಟರ್ ಬೆಂಗಳೂರು ಆಡಳಿತ(2ನೇ ತಿದ್ದುಪಡಿ) ವಿಧೇಯಕದ ಪ್ರಕರಣ 30ಕ್ಕೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಡಿ.11ರಂದು ಮಂಡಿಸಲಾಗಿದೆ. ಇದರಿಂದ ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿನ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಯುವುದಿಲ್ಲ ಎಂಬುದು ಆಧಾರ ರಹಿತವಾಗಿದೆ ಎಂದಿದೆ.

ನಗರ ಪಾಲಿಕೆಗಳ ಕುರಿತ ಆರೋಪವು ಜಿಬಿಎ ಕಾಯ್ದೆ ತಿದ್ದುಪಡಿಯ ಉದ್ದೇಶವನ್ನು ಅರ್ಥ ಮಾಡಿಕೊಳ್ಳದೇ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯವನ್ನು ಮೂಡಿಸುವ ದುರುದ್ದೇಶದಿಂದ ಕೂಡಿರುತ್ತದೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತದೆ.

ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಅನುಸಾರ ಕಾಲ ಕಾಲಕ್ಕೆ ಗ್ರೇಟರ್ ಬೆಂಗಳೂರು ಪ್ರದೇಶದ ಭೂ ಪ್ರದೇಶದ ಮಿತಿಗಳನ್ನು ಮಾರ್ಪಾಡು ಮಾಡಲು ಅವಕಾಶವನ್ನು ಕಲ್ಪಿಸಲಾಗಿದ್ದು, ನಿಯಮಾನುಸಾರ ಕ್ರಮವಹಿಸಿ ಸ್ಥಳೀಯ ಪ್ರಾಧಿಕಾರಗಳನ್ನು ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಗೆ ಸೇರ್ಪಡಿಸಿಕೊಳ್ಳಬಹುದಾಗಿದೆ. ಈ ರೀತಿ ಸೇರ್ಪಡಿಸಿಕೊಳ್ಳಲಾದ ಪ್ರದೇಶವನ್ನು ಪುನರ್ ವಿಂಗಡಿಸಿ ಚುನಾವಣೆ ನಡೆಸುವವರೆವಿಗೂ ನೂತನ ಪ್ರದೇಶಕ್ಕೆ ಯಾವುದೇ ಜನಪ್ರತಿನಿಧಿ ಇಲ್ಲದಂತಾಗುತ್ತದೆ. ಹೀಗಾಗಿ ಪ್ರದೇಶದ ಆಡಳಿತ ನಿರ್ವಹಣೆ ಮತ್ತು ಬೆಳವಣಿಗೆಗೆ ಆಡಚಣೆ ಉಂಟಾಗುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ, ಪ್ರಕರಣ 30ಕ್ಕೆ ತಿದ್ದುಪಡಿಯನ್ನು ಪ್ರಸ್ತಾಪಿಸಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ ಸೇರ್ಪಡಿಸಲಾಗುವ ಸ್ಥಳಿಯ ಪ್ರದೇಶದ ಸಾಮಾನ್ಯ ನಿವಾಸಿಯನ್ನು ಪ್ರತಿ 20 ಸಾವಿರ ಜನ ಸಂಖ್ಯೆಗೆ ಕನಿಷ್ಟ ಒಬ್ಬ ವ್ಯಕ್ತಿಯಂತೆ ಆ ನಿರ್ದಿಷ್ಟ ನಗರ ಪಾಲಿಕೆಗೆ ಹೆಚ್ಚುವರಿ ಸದಸ್ಯನಾಗಿ ನಾಮ ನಿರ್ದೇಶನ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ.

ಅಂತಹ ನಾಮ ನಿರ್ದೇಶಿತ ವ್ಯಕ್ತಿಯು ಚುನಾಯಿತ ಪ್ರತಿನಿಧಿಯಾಗಿಲ್ಲದ ಕಾರಣ ಆ ನಗರ ಪಾಲಿಕೆಯಲ್ಲಿ ಮತದಾನ ಮಾಡುವ ಅಧಿಕಾರವನ್ನು ಹೊಂದಿರುವುದಿಲ್ಲ ಹಾಗೂ ಆ ಸ್ಥಳೀಯ ಪ್ರದೇಶಕ್ಕೆ ಚುನಾವಣೆ ನಡೆಸುವವರೆವಿಗೆ ಮಾತ್ರ ನಾಮ ನಿರ್ದೇಶಿತ ಸದಸ್ಯನಾಗಿ ಮುಂದುವರಿಯಲು ಅವಕಾಶವಿರುತ್ತದೆ.

ಯಾವುದಾದರೂ ಪಂಚಾಯತ್ ಪ್ರದೇಶದ ಭಾಗವನ್ನು ಚಿಕ್ಕ ನಗರ ಪ್ರದೇಶದಲ್ಲಿ ವಿಲೀನಗೊಳಿಸಿದ ಸಂದರ್ಭದಲ್ಲಿ, ಮುನಿಸಿಪಲ್ ಕೌನ್ಸಿಲ್‍ನ್ನು ಪುನರ್ ರಚಿಸುವವರೆಗೆ ಅಂತಹ ಪ್ರದೇಶದ ಸಾಮಾನ್ಯ ನಿವಾಸಿಯಾಗಿರುವ ವ್ಯಕ್ತಿಯನ್ನು ಹೆಚ್ಚುವರಿ ಕೌನ್ಸಿಲರ್ ಆಗಿ ಸರಕಾರವು ನಾಮ ನಿರ್ದೇಶನಗೊಳಿಸುವ ಬಗ್ಗೆ ಕರ್ನಾಟಕ ಮುನಿಸಿಪಾಲಿಟಿ ಅಧಿನಿಯಮ, 1964ರ ಪ್ರಕರಣ 360 (ಡಿ)ರಲ್ಲಿಯೂ ಅವಕಾಶವನ್ನು ಕಲ್ಪಿಸಲಾಗಿದೆ.

ನಾಮ ನಿರ್ದೇಶಿತ ವ್ಯಕ್ತಿಯು ಅನಿರ್ದಿಷ್ಟ ಅವಧಿಗೆ ಆ ನಗರ ಪಾಲಿಕೆಯ ಸದಸ್ಯರಾಗಿ ಮುಂದುವರಿಯುವುದು ಸೂಕ್ತವಲ್ಲ ಎಂಬ ಉದ್ದೇಶದಿಂದ ಪ್ರಕರಣ 29ಕ್ಕೆ ಸಹ ತಿದ್ದುಪಡಿಯನ್ನು ಪ್ರಸ್ತಾಪಿಸಿದ್ದು, ಹೊಸದಾಗಿ ಸೇರಿಸಲಾದ ಸ್ಥಳೀಯ ಪ್ರದೇಶಕ್ಕಾಗಿ ಪುನರ್ ವಿಂಗಡನೆಯನ್ನು 3 ತಿಂಗಳುಗಳ ಅವಧಿಯೊಳಗೆ ಮಾಡತಕ್ಕದ್ದು ಎಂದು ನಿರ್ದಿಷ್ಟ ಪಡಿಸಲು ಪ್ರಸ್ತಾಪಿಸಲಾಗಿದೆ.

ಪ್ರಕರಣ 33ಕ್ಕೆ ತಿದ್ದುಪಡಿಯನ್ನು ಪ್ರಸ್ತಾಪಿಸಿ, ಹೊಸದಾಗಿ ಸೇರಿಸಲಾದ ಸ್ಥಳೀಯ ಪ್ರದೇಶಕ್ಕಾಗಿ ಪುನರ್ ವಿಂಗಡನೆಯ ತರುವಾಯ ಆ ಪ್ರದೇಶದ ಸೇರ್ಪಡೆಯ ದಿನಾಂಕದಿಂದ 6 ತಿಂಗಳಿಗಿಂತ ತಡವಾಗದಂತೆ ಚುನಾವಣೆಯನ್ನು ನಡೆಸತಕ್ಕದ್ದು ಎಂದು ಸೇರ್ಪಡಿಸಲು ಪ್ರಸ್ತಾಪಿಸಲಾಗಿದೆ.

ಪ್ರಸ್ತಾಪಿತ ನಾಮ ನಿರ್ದೇಶಿತ ವ್ಯಕ್ತಿಯು ಆ ನಗರ ಪಾಲಿಕೆಯ ಹೆಚ್ಚುವರಿ ಸದಸ್ಯರಾಗಿ ಮುಂದುವರಿಯಲು ಕಾಲಮಿತಿಯನ್ನು ಕಲ್ಪಿಸಲಾಗಿದೆ. ಚುನಾವಣೆಯಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರು ಆ ನಗರ ಪಾಲಿಕೆಯ ಉಳಿದ ಅವಧಿಯವರೆಗೆ ಮಾತ್ರ ಸದಸ್ಯತ್ವವನ್ನು ಹೊಂದಿರುತ್ತಾರೆ. ಎಲ್ಲ ಅಂಶಗಳನ್ನು ಪ್ರಸ್ತಾಪಿತ ತಿದ್ದುಪಡಿ ವಿಧೇಯಕದಲ್ಲಿ ಗಮನಿಸಬಹುದಾಗಿದ್ದು, ಅವುಗಳನ್ನು ಸಂಪೂರ್ಣವಾಗಿ ಗಮನಿಸದೇ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲು ಪ್ರಯತ್ನಿಸಿರುವುದು ಸೂಕ್ತ ಕ್ರಮವಲ್ಲ.

ನೂತನವಾಗಿ ರಚಿಸಲಾದ ನಗರ ಪಾಲಿಕೆಗಳ ವಾರ್ಡ್‍ಗಳ ಚುನಾವಣೆ ನಡೆಸಲು ರಾಜ್ಯ ಸರಕಾರವು ಬದ್ಧವಾಗಿದೆ. ಅದಕ್ಕೆ ಪೂರಕವಾಗಿ ಈಗಾಗಲೇ ಸೆ.2ರ ಪ್ರತ್ಯೇಕ ಅಧಿಸೂಚನೆಗಳಲ್ಲಿ ಗ್ರೇಟರ್ ಬೆಂಗಳೂರು ಪ್ರದೇಶದ 5 ನಗರ ಪಾಲಿಕೆಗಳ ಗಡಿ ಪ್ರದೇಶಗಳನ್ನು ನಿರ್ದಿಷ್ಟಪಡಿಸಿ ನಗರ ಪಾಲಿಕೆಗಳನ್ನು ಸ್ಥಾಪಿಸಿ ಆದೇಶಿಸಲಾಗಿದೆ.

ನ.19 ಮತ್ತು ಡಿ.1ರಂದು ಪ್ರತ್ಯೇಕವಾಗಿ ಹೊರಡಿಸಿರುವ ಅಧಿಸೂಚನೆಗಳ ಮೂಲಕ 5 ನಗರ ಪಾಲಿಕೆಗಳಲ್ಲಿ ಒಟ್ಟು 369 ವಾರ್ಡ್‍ಗಳ ಪುನರ್ ವಿಂಗಡಣೆಯನ್ನು ಮಾಡಲಾಗಿದೆ. ಈ ರೀತಿ 369 ವಾರ್ಡ್‍ಗಳ ಪುನರ್ ವಿಂಗಡಣೆ ಈಗಾಗಲೇ ಆಗಿರುವುದರಿಂದ, ಸದರಿ ವಾರ್ಡ್‍ಗಳಿಗೆ ನಾಮ ನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ಅವಕಾಶವಿರುವುದಿಲ್ಲ.

ಈ ವಾರ್ಡ್‍ಗಳಿಗೆ ಚುನಾವಣೆ ನಡೆಸಿ, ಚುನಾಯಿತ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಪೂರಕವಾಗಿ ಸೆ.1ರ ಅಧಿಸೂಚನೆಯ ಮೂಲಕ ಗ್ರೇಟರ್ ಬೆಂಗಳೂರು ಆಡಳಿತ (ಚುನಾವಣೆ) ನಿಯಮಗಳು, 2025 ಮತ್ತು ಸೆ.15ರ ಅಧಿಸೂಚನೆಯ ಮೂಲಕ ಗ್ರೇಟರ್ ಬೆಂಗಳೂರು ಆಡಳಿತ (ಮತದಾರರ ನೋಂದಣಿ) ನಿಯಮಗಳು, 2025 ಗಳನ್ನು ಅಂತಿಮಗೊಳಿಸಿ ಹೊರಡಿಸಲಾಗಿರುತ್ತದೆ.

ರಾಜ್ಯ ಚುನಾವಣಾ ಆಯೋಗವು ಗ್ರೇಟರ್ ಬೆಂಗಳೂರು ಪ್ರದೇಶದ 5 ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ವಾರ್ಡ್‍ವಾರು ಮತದಾರರ ಪಟ್ಟಿಯನ್ನು ತಯಾರಿಸುವ ಬಗ್ಗೆ ಕಾರ್ಯಕ್ರಮ ಪಟ್ಟಿಯನ್ನು ನಿಗದಿಪಡಿಸಿ, ಆ ನಿಟ್ಟಿನಲ್ಲಿ ಕಾಲಮಿತಿಯಲ್ಲಿ ಕ್ರಮವಹಿಸುತ್ತಿದೆ.

ಹೀಗೆ ಗ್ರೇಟರ್ ಬೆಂಗಳೂರು ಪ್ರದೇಶದ 5 ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಸರಕಾರವು ಎಲ್ಲಾ ಅಗತ್ಯ ಕ್ರಮವಹಿಸುತ್ತಿರುವ ಈ ಸಂದರ್ಭದಲ್ಲಿ ತಪ್ಪು ಮಾಹಿತಿಯನ್ನು ಸಾರ್ವಜನಿಕರಿಗೆ ನೀಡುವುದು ಸಮಂಜಸವಲ್ಲ ಎಂದು ಪ್ರಕಟನೆ ತಿಳಿಸಿದೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X