Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಜಾ ದಿನವೂ ಬೆಸ್ಕಾಂನಿಂದ ಮುಂದುವರಿದ...

ರಜಾ ದಿನವೂ ಬೆಸ್ಕಾಂನಿಂದ ಮುಂದುವರಿದ ಸ್ವಚ್ಛತಾ ಆಂದೋಲನ; ಶೇ.80ರಷ್ಟು ತೆರವು, ಸ್ವಚ್ಛತಾ ಕಾರ್ಯ ಪೂರ್ಣ: ಬೆಸ್ಕಾಂ ಎಂ.ಡಿ ಡಾ.ಶಿವಶಂಕರ

ವಾರ್ತಾಭಾರತಿವಾರ್ತಾಭಾರತಿ23 Aug 2026 9:33 PM IST
share
ರಜಾ ದಿನವೂ ಬೆಸ್ಕಾಂನಿಂದ ಮುಂದುವರಿದ ಸ್ವಚ್ಛತಾ ಆಂದೋಲನ; ಶೇ.80ರಷ್ಟು ತೆರವು, ಸ್ವಚ್ಛತಾ ಕಾರ್ಯ ಪೂರ್ಣ: ಬೆಸ್ಕಾಂ ಎಂ.ಡಿ ಡಾ.ಶಿವಶಂಕರ

ಬೆಂಗಳೂರು : ಪಾದಚಾರಿಗಳು ಸುರಕ್ಷಿತ ನಡಿಗೆಯ ಗ್ಯಾರಂಟಿಯೊಂದಿಗೆ ‘ಕ್ಲೀನ್ ಅಪ್ ಬೆಂಗಳೂರು ಅಭಿಯಾನ’ಕ್ಕೆ ಕೈಜೋಡಿಸಿರುವ ಬೆಸ್ಕಾಂ, ರವಿವಾರ ಇಡೀ ದಿನ ನಗರದ ವಿವಿಧೆಡೆ ಪಾದಚಾರಿ ಮಾರ್ಗಗಳಲ್ಲಿ ಸ್ಥಗಿತಗೊಂಡ ಅಥವಾ ಬಳಕೆಯಲ್ಲಿಲ್ಲದ ವಿದ್ಯುತ್ ಪರಿವರ್ತಕ ಕೇಂದ್ರಗಳು ಸೇರಿದಂತೆ ಇತರೆ ಅನುಪಯುಕ್ತ ಪರಿಕರಗಳನ್ನು ತೆರವುಗೊಳಿಸುವುದರ ಜತೆಗೆ ಸ್ವಚ್ಛತೆಯ ಕಾರ್ಯ ನಡೆಸಿದೆ.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್ ಮುಂದಾಳತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಶನಿವಾರ ತಡರಾತ್ರಿಯೇ ಬೆಸ್ಕಾಂ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದರು. ರವಿವಾರ ಬೆಳಗ್ಗೆ 6 ಗಂಟೆಯಿಂದ ಮತ್ತೆ ಮಲ್ಲೇಶ್ವರ, ರಾಜಾಜಿನಗರ, ಹೆಬ್ಬಾಳ, ರಾಜರಾಜೇಶ್ವರಿ ನಗರ, ಕೆಎಚ್‍ಬಿ ಕಾಲನಿ ಮುಖ್ಯರಸ್ತೆ, ಕೋರಮಂಗಲ, ನಾಗವಾರ, ಬಂಗಾರಪ್ಪನಗರ ಮುಖ್ಯರಸ್ತೆ, ಥಣಿಸಂದ್ರ, ಕೊತ್ತನೂರು, ಸುಂಕದಕಟ್ಟೆ, ನಗರಬಾವಿ, ಕೊಮ್ಮಘಟ್ಟ ಮುಖ್ಯರಸ್ತೆ, ಉತ್ತರಹಳ್ಳಿ ಮುಖ್ಯರಸ್ತೆ, ಕತ್ರಿಗುಪ್ಪೆ, ವೈಟ್‍ಫೀಲ್ಡ್, ಮಹದೇವಪುರ ಸೇರಿದಂತೆ ವಿವಿಧೆಡೆ ತೆರವು ಮತ್ತು ಸ್ವಚ್ಛತಾ ಆಂದೋಲನ ನಡೆಸಲಾಯಿತು.

ಜಿಒಎಸ್ ರಾಡ್‍ಗಳನ್ನು ನೆಲಮಟ್ಟದಿಂದ ಏಳು ಅಡಿ ಎತ್ತರಿಸುವ ಕಾರ್ಯವನ್ನು ನಡೆಸಲಾಯಿತು. ಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದ ಕ್ಲೀನ್ ಅಪ್ ಬೆಂಗಳೂರು ಅಭಿಯಾನದ ಭಾಗವಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್, ಆ.1ರಂದು ಅಭಿಯಾನಕ್ಕೆ ಚಾಲನೆ ನೀಡಿ, ಈ ಕಾರ್ಯವನ್ನು ಮುಂದುವರಿಸುವಂತೆ ಸೂಚಿಸಿದ್ದರು. ಅಂದರಂತೆ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಆಂದೋಲನ ಮಾದರಿಯಲ್ಲಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಶೇ.80ರಷ್ಟು ಪೂರ್ಣ: ರವಿವಾರ ನಗರದ ವಿವಿಧೆಡೆ ತೆರವು ಕಾರ್ಯ ವೀಕ್ಷಿಸಿದ ಬೆಸ್ಕಾಂ ವ್ವಸ್ಥಾಪಕ ನಿರ್ದೇಶಕ ಡಾ.ಶಿವಶಂಕರ್ ಮಾತನಾಡಿ, ‘ಪಾದಚಾರಿ ಮಾರ್ಗಗಳಲ್ಲಿ ಸ್ಥಗಿತಗೊಂಡ ಅಥವಾ ಬಳಕೆಯಲ್ಲಿಲ್ಲದ ವಿದ್ಯುತ್ ಪರಿವರ್ತಕ ಕೇಂದ್ರಗಳು ಸೇರಿದಂತೆ ಇತರ ಪರಿಕರಗಳನ್ನು ತೆರವುಗೊಳಿಸುವ ಕಾರ್ಯವನ್ನು ಬೆಸ್ಕಾಂ ಮೂರು ತಿಂಗಳ ಹಿಂದೆಯೇ ಆರಂಭಿಸಿತ್ತು.

ಆಗಸ್ಟ್ ಒಂದರಿಂದ ಸಿಎಂ ನೇತೃತ್ವ ಹಾಗೂ ಇಂಧನ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರ ಮಾರ್ಗದರ್ಶನದಲ್ಲಿ ಆಂದೋಲನ ರೂಪದಲ್ಲಿ ಈ ಕೆಲಸ ಮಾಡಲಾಗುತ್ತಿದೆ. ಪ್ರಸ್ತುತ ಸ್ಥಗಿತಗೊಂಡ ಅಥವಾ ಬಳಕೆಯಲ್ಲಿಲ್ಲದ ವಿದ್ಯುತ್ ಪರಿವರ್ತಕ ಕೇಂದ್ರಗಳು ಸೇರಿದಂತೆ ಇತರೆ ಅನುಪಯುಕ್ತ ಪರಿಕರಗಳನ್ನು ತೆರವುಗೊಳಿಸುವ ಕಾರ್ಯ ಶೇ.80ರಷ್ಟು ಪೂರ್ಣಗೊಂಡಿದೆ. ಮುಂದಿನ ದಿನಗಳಲ್ಲಿ ನಮ್ಮ ಲೈನ್‍ಮೆನ್‍ಗಳು ಪ್ರತಿ ವಾರ ಅಥವಾ 15 ದಿನಕ್ಕೊಮ್ಮೆ ಪರಿವರ್ತಕದ ಸುತ್ತ ಸ್ವಚ್ಛಗೊಳಿಸುವ ಕಾರ್ಯ ನೆರವೇರಿಸಲಿದ್ದಾರೆ ಎಂದರು.

ಆ.1ರಿಂದ ರವಿವಾರದ ವರೆಗೆ (ಆ.23ರ ವರೆಗೆ) ಬೆಸ್ಕಾಂ ಕೈಗೊಂಡ ಕ್ಲೀನ್‍ಅಪ್ ಬೆಂಗಳೂರು ಅಭಿಯಾನದಲ್ಲಿ 1,535 ವಿದ್ಯುತ್ ಕಂಬಗಳು, 6 ಟ್ರಾನ್ಸ್‌ ಫಾರ್ಮರ್ ಕೇಂದ್ರಗಳು, 9 ಇತರೆ ಅನುಪಯುಕ್ತ ಮೂಲಸೌಕರ್ಯ ತೆರವುಗೊಳಿಸಲಾಗಿದ್ದು, 1758 ಜಿಎಸ್ ಆಪರೇಟಿಂಗ್ ರಾಡ್‍ಗಳ ಮಾರ್ಪಾಡು ಮಾಡಲಾಗಿದೆ.

ಜತೆಗೆ 4836 ಡಿಟಿಸಿ ಯಾರ್ಡ್‍ಗಳು, 1368 ಆರ್‌ ಎಂಯು ಯಾರ್ಡ್‍ಗಳು ಹಾಗೂ 1207 ಸ್ಪನ್ ಪೋಲ್/ಡಿಪಿ ಯಾರ್ಡ್‍ಗಳ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದ್ದು, 151 ಫೀಡರ್ ಪಿಲ್ಲರ್ ಬಾಕ್ಸ್ ರಿವೈರಿಂಗ್ ಮತ್ತು ಯಾರ್ಡ್ ಸ್ವಚ್ಛತಾ ಕಾಮಗಾರಿಗಳು ಹಾಗೂ 401 ಕಂಬಗಳ ರಿವೈರಿಂಗ್ ಮತ್ತು ಯಾರ್ಡ್ ಸ್ವಚ್ಛತಾ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

‘ಸ್ವಚ್ಛ ಮತ್ತು ಸುರಕ್ಷಿತ ಬೆಂಗಳೂರಿನ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಜಿಬಿಎಗೆ ಬೆಸ್ಕಾಂ ಎಲ್ಲ ರೀತಿಯಲ್ಲಿ ಸಹಕಾರ ನೀಡುತ್ತಿದೆ. ಲೈನ್‍ಮೆನ್‍ಗಳು, ಅಧಿಕಾರಿಗಳು, ಸಿಬ್ಬಂದಿ ರಜಾದಿನವಾದರೂ ಅನುಪಯುಕ್ತ ಸಲಕಲರಣೆಗಳ ತೆರವು ಕಾರ್ಯ ಮತ್ತು ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ’

-ಕೆ.ಜೆ.ಜಾರ್ಜ್, ಇಂಧನ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X