ಎಸೆಸೆಲ್ಸಿ ಪರೀಕ್ಷೆಯಲ್ಲಿ 818 ತುಳು ಭಾಷಾ ವಿದ್ಯಾರ್ಥಿಗಳು ತೇರ್ಗಡೆ

ಬೆಂಗಳೂರು: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ 818 ವಿದ್ಯಾರ್ಥಿಗಳು ತುಳು ಭಾಷಾ ವಿಷಯದಲ್ಲಿ ತೇರ್ಗಡೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಪ್ರೌಢಶಾಲೆಗಳಲ್ಲಿ ತೃತೀಯ ಭಾಷೆಯಾಗಿ ತುಳು ಭಾಷೆಯನ್ನು ಆಯ್ದಕೊಂಡು 847 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 818 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 317 ವಿದ್ಯಾರ್ಥಿಗಳು 100ಕ್ಕೆ 100 ಅಂಕವನ್ನು ಪಡೆದಿರುತ್ತಾರೆ.
ಎಸೆಸೆಲ್ಸಿ ಪರೀಕ್ಷೆಯಲ್ಲಿ ತುಳು ಪಠ್ಯವನ್ನು ಆಯ್ದುಕೊಂಡ ವಿದ್ಯಾರ್ಥಿಗಳಿಗೆ ಹಾಗೂ ಅವರಿಗೆ ಪಾಠ ಹೇಳಿದ ಶಿಕ್ಷಕರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿನಂದನೆ ಸಲ್ಲಿಸಿದ್ದಾರೆ.
Next Story





