ರಾಜ್ಯದಲ್ಲಿ ಮತ್ತೆ ಹೊಸದಾಗಿ 9 ಮಂದಿಗೆ ಕೋವಿಡ್ ದೃಢ

ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯದಲ್ಲಿ ನಿಧಾನವಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 9 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.
ಈ ಕುರಿತು ರವಿವಾರ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, 9 ಮಂದಿಗೆ ಸೋಂಕು ದೃಢಪಟ್ಟಿದ್ದು, ಎಲ್ಲ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಜತೆಗೆ, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 47 ಇದೆ ಎಂದು ಹೇಳಿದೆ.
ಕಳೆದ 24 ಗಂಟೆಯಲ್ಲಿ 104 ಮಂದಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದೂ ಉಲ್ಲೇಖಿಸಲಾಗಿದೆ.
Next Story





