Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ...

ರಾಜ್ಯದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು

ವಾರ್ತಾಭಾರತಿವಾರ್ತಾಭಾರತಿ27 Nov 2025 12:47 AM IST
share
ರಾಜ್ಯದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು

ಹೊಸದಿಲ್ಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಈ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌ ಗೋಯಲ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂಭತ್ತು ಕೈಗಾರಿಕಾ ಪಾರ್ಕ್ ಗಳನ್ನು ಸ್ಥಾಪಿಸುವ ಬಗ್ಗೆ ಒಲವು ತೋರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

ನ.13ರಂದು ಪಿಯೂಷ್‌ ಗೋಯಲ್ ಅವರನ್ನು ಭೇಟಿಯಾಗಿದ್ದ ಕುಮಾರಸ್ವಾಮಿ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಮಾಡಬೇಕೆಂದು ಕೋರಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದ್ದರು.

ಕುಮಾರಸ್ವಾಮಿ ಅವರ ಪ್ರಸ್ತಾವನೆಯನ್ನು ರಾಜ್ಯದ ಅಭಿವೃದ್ಧಿಗೆ ಪರಿವರ್ತನಾತ್ಮಕ ಪರಿಕಲ್ಪನೆ ಎಂದು ಶ್ಲಾಘಿಸಿದ್ದ ಗೋಯಲ್, ಈ ಬಗ್ಗೆ ಉತ್ತರವನ್ನು ಬರೆದಿದ್ದಾರೆ. ಕರ್ನಾಟಕದ ಪ್ರಾದೇಶಿಕ ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಇದು ಪೂರಕವಾಗಿದೆ. ಇಂಥ ಆಕಾಂಕ್ಷೆಗಳನ್ನು ಈಡೇರಿಸುವ ಕೇಂದ್ರದ ರಚನಾತ್ಮಕ ಕೇಂದ್ರ ನೀತಿಯನ್ನು ಕಾರ್ಯರೂಪಕ್ಕೆ ತರುವಲ್ಲಿ ಈ ಕ್ರಮವು ಒಂದು ಪ್ರಮುಖ ಆರಂಭಿಕ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನಡಿಯಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸುವ ಕುರಿತಂತೆ ಗೋಯಲ್ ಅವರನ್ನು ಕುಮಾರಸ್ವಾಮಿ ಮನವೊಲಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ದೃಢ ಸಂಕಲ್ಪದಂತೆ ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯವನ್ನು ಅಧಿಕವಾಗಿ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶವನ್ನು ಗೋಯಲ್ ಅವರ ಜತೆ ಕುಮಾರಸ್ವಾಮಿ ಚರ್ಚಿಸಿದ್ದರು.

ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಕರ್ನಾಟಕದಲ್ಲಿ ಸರಕು, ಕೈಗಾರಿಕೆ ಉತ್ಪನ್ನಗಳ ಸಾಗಣೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಬಂದರೆ ಇಡೀ ರಾಜ್ಯಕ್ಕೆ ನಾಲ್ಕು ದಿಕ್ಕುಗಳ್ಳಿಯೂ ಅನುಕೂಲ ಆಗುತ್ತದೆ.

ಈ ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ ಚೌಕಟ್ಟಿನ ಅಡಿಯಲ್ಲಿ ಪರಿಗಣಿಸಬೇಕೆಂದು ವಿನಂತಿಸಿದ ಕುಮಾರಸ್ವಾಮಿ, ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‍ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದರು.

ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ:

ಪ್ರಸ್ತಾವಿತ ಈ ಕೈಗಾರಿಕಾ ಪಾರ್ಕುಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ ಎಂದು ಪ್ರಕಟಣೆ ತಿಳಿಸಿದೆ.

ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಚರ್ಚೆ ಉತ್ತಮವಾಗಿತ್ತು. ಅವರು ಈ ಪ್ರಸ್ತಾವನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಸಾಕಾರಕ್ಕೆ ಈ ಯೋಜನೆ ಪೂರಕವಾಗಿದೆ. ಉತ್ಪಾದನೆ ಮತ್ತು ಕೈಗಾರಿಕಾ ಸ್ಪರ್ಧಾತ್ಮಕತೆಯನ್ನು ಬಲಪಡಿಸುವ ಕೇಂದ್ರ ಸರ್ಕಾರದ ವಿಶಾಲ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ.

ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಬೃಹತ್ ಮತ್ತು ಉಕ್ಕು ಖಾತೆ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X