ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವ್ಯಾಪ್ತಿಯ ಸಿಬಿಎಸ್ಇ ಶಾಲೆಗಳಲ್ಲಿ ಶೇ.97 ಫಲಿತಾಂಶ

ಸಾಂದರ್ಭಿಕ ಚಿತ್ರ | PTI
ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಸಿಬಿಎಸ್ಇ ಶಾಲೆಗಳಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಶೇ.97ರಷ್ಟು ಫಲಿತಾಂಶ ದಾಖಲಾಗಿದೆ. ರಾಜ್ಯದಲ್ಲಿ ಇರುವ ಒಟ್ಟು 29 ಶಾಲೆಗಳಲ್ಲಿ 13,004 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 12065 ವಿದ್ಯಾರ್ಥಿಗಳು ಉತ್ತೀರ್ಣ ರಾಗುವ ಮೂಲಕ ಶೇ.97.25 ಫಲಿತಾಂಶ ಬಂದಿದೆ.
ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಮಾತ್ರ ಸಿಬಿಎಸ್ಇ ಶಾಲೆಗಳು ಇದ್ದು, ಎರಡು ವರ್ಷಗಳಿಂದ ಆರಂಭವಾಗಿವೆ. ಕಳೆದ ವರ್ಷ ಶೇ. 96 ರಷ್ಟು ಫಲಿತಾಂಶ ಬಂದಿತ್ತು ಎಂದು ಪ್ರಕಟಣೆ ತಿಳಿಸಿದೆ.
Next Story





