ಡಿ.1ರೊಳಗೆ ಜಿಬಿಎ ಪಾಲಿಕೆಗಳ ಚುನಾವಣೆಗೆ ಸಿದ್ಧತೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ವ್ಯಾಪ್ತಿಯಲ್ಲಿ ಐದು ಪಾಲಿಕೆಗಳು ಬರಲಿದ್ದು, ಡಿಸೆಂಬರ್ 1ರೊಳಗಾಗಿ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಹೀಗಾಗಿ ಮತದಾರರ ಪಟ್ಟಿ ಸೇರಿದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಮುಖಂಡರಿಗೆ ಸೂಚನೆ ನೀಡಿದ್ದಾರೆ.
ಬುಧವಾರ ಭಾರತ ಜೋಡೊ ಭವನದಲ್ಲಿ ನಡೆದ ಬೆಂಗಳೂರು ವಲಯದ ಕಾಂಗ್ರೆಸ್ ನಾಯಕರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆದಿದ್ದು, ಬೆಂಗಳೂರು ಪಾಲಿಕೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಡಿ.1ರ ಒಳಗೆ ವಾರ್ಡ್‌ಗಳ ಮರುವಿಂಗಡಣೆ, ಸಾರ್ವಜನಿಕರ ಆಕ್ಷೇಪ ಸೇರಿದಂತೆ ಎಲ್ಲ ಪ್ರಕ್ರಿಯೆ ಮುಗಿಸಲು ಸೂಚಿಸಿದ್ದೇನೆ. ಇದಕ್ಕೆ ಮತದಾರರ ಪಟ್ಟಿ ಕೂಡ ಸಿದ್ಧವಾಗಲಿದೆ. ಹೀಗಾಗಿ ವಿಧಾನಸಭಾ ಕ್ಷೇತ್ರ, ವಾರ್ಡ್ ಹಾಗೂ ಬೂತ್‌ಗಳಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
Next Story





