Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 10 ವರ್ಷಗಳಿಂದ ನ್ಯಾಯಾಂಗದ ಸ್ವಾತಂತ್ರ್ಯ...

10 ವರ್ಷಗಳಿಂದ ನ್ಯಾಯಾಂಗದ ಸ್ವಾತಂತ್ರ್ಯ ಕುಸಿಯುತ್ತಿರುವುದನ್ನು ಕಾಣುತ್ತಿದ್ದೇವೆ: ಪ್ರಶಾಂತ್ ಭೂಷಣ್

ವಾರ್ತಾಭಾರತಿವಾರ್ತಾಭಾರತಿ19 July 2025 11:24 PM IST
share
10 ವರ್ಷಗಳಿಂದ ನ್ಯಾಯಾಂಗದ ಸ್ವಾತಂತ್ರ್ಯ ಕುಸಿಯುತ್ತಿರುವುದನ್ನು ಕಾಣುತ್ತಿದ್ದೇವೆ: ಪ್ರಶಾಂತ್ ಭೂಷಣ್

ಬೆಂಗಳೂರು : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಕಳೆದ 10 ವರ್ಷಗಳಿಂದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸ್ವಾತಂತ್ರ್ಯ ಗಣನೀಯವಾಗಿ ಕುಸಿಯುತ್ತಿರುವುದನ್ನು ನಾವು ಕಾಣುತ್ತಿದ್ದೇವೆ ಎಂದು ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಅಭಿಪ್ರಾಯಪಟ್ಟರು.

ಶನಿವಾರ ನಗರದ ಸೆಂಟ್ ಮಾರ್ಕ್ಸ್‌ ರಸ್ತೆಯಲ್ಲಿರುವ ಆಶೀರ್ವಾದ್ ಸಭಾಂಗಣದಲ್ಲಿ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ಸಂಘಟನೆಯು ಹಮ್ಮಿಕೊಂಡಿದ್ದ ‘ನ್ಯಾಯಾಂಗದ ಉತ್ತರದಾಯಿತ್ವ ಮತ್ತು ಸ್ವಾತಂತ್ರ್ಯ’ ವಿಷಯಕ್ಕೆ ಸಂಬಂಧಿಸಿದ ಸಂವಾದದಲ್ಲಿ ಅವರು ಮಾತನಾಡಿದರು.

ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ಆಗಲಿ ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಸರಕಾರದ ಬಯಕೆಯಂತೆ ನ್ಯಾಯಾಲಯಗಳು ಕೆಲಸ ಮಾಡುತ್ತಿವೆ. ಮಾನವ ಹಕ್ಕುಗಳ ಹೋರಾಟಗಾರರು, ಸರಕಾರದ ವಿರುದ್ಧ ಮಾತನಾಡುವವರು, ಸರಕಾರದ ನೀತಿಗಳನ್ನು ಪ್ರಶ್ನೆ ಮಾಡುವವರ ವಿರುದ್ಧ ಯುಎಪಿಎ ಸೇರಿದಂತೆ ಇತರ ಕಾನೂನುಗಳಡಿ ಪ್ರಕರಣಗಳನ್ನು ದಾಖಲಿಸಿ, ಅವರಿಗೆ ಜಾಮೀನು ಸಿಗದಂತೆ ಮಾಡಲಾಗುತ್ತಿದೆ ಎಂದು ಪ್ರಶಾಂತ್ ಭೂಷಣ್ ಹೇಳಿದರು.

ಅಲ್ಪಸಂಖ್ಯಾತ ಸಮುದಾಯದೊಂದಿಗೆ ಯಾವ ರೀತಿ ತಾರತಮ್ಯ ಆಗುತ್ತಿದೆ ಎಂಬುದನ್ನು ಇಡೀ ವಿಶ್ವ ನೋಡುತ್ತಿದೆ. ಪ್ರಮುಖವಾಗಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಯಾವ ರೀತಿ ಅಲ್ಪಸಂಖ್ಯಾತರ ಮೇಲೆ ಗುಂಪು ಹಲ್ಲೆಗಳು ನಡೆದಿವೆ ಎಂಬುದನ್ನು ನೋಡಿದ್ದೇವೆ ಎಂದು ಅವರು ತಿಳಿಸಿದರು.

ರಫೇಲ್‌ ಯುದ್ಧ ವಿಮಾನ ಖರೀದಿ, ಬಿರ್ಲಾ, ಸಹಾರ ಪ್ರಕರಣ, ಸಾವಿರಾರು ಕೋಟಿ ರೂ.ಗಳ ಚುನಾವಣಾ ಬಾಂಡ್‍ಗಳನ್ನು ಖರೀದಿಸಿ ಒಂದು ಪಕ್ಷಕ್ಕೆ ನೀಡಿದವರಿಗೆ ಸರಕಾರದ ಕಾಮಗಾರಿಗಳಲ್ಲಿ ಗುತ್ತಿಗೆ ಸಿಕ್ಕಿರುವುದು, ಸಿಬಿಐ ಸೇರಿದಂತೆ ಇನ್ನಿತರ ತನಿಖಾ ಏಜೆನ್ಸಿಗಳಿಂದ ಕ್ಲೀನ್‍ಚಿಟ್ ಸಿಕ್ಕಿರುವುದು ನೋಡಿದ್ದೇವೆ. ಆದರೆ, ಈ ಮೇಲಿನ ಗಂಭೀರ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೆ ಸ್ವತಂತ್ರ ತನಿಖೆ ನಡೆಯುವುದಿಲ್ಲ, ಯಾರನ್ನೂ ಉತ್ತರದಾಯಿ ಮಾಡುವುದಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಫ್ಯಾಶಿಸ್ಟ್ ಸರಕಾರವಿದೆ. ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಆದರೂ, ಬಿಹಾರ ಹಾಗೂ ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿರುವ ಪಕ್ಷಗಳು ನರೇಂದ್ರ ಮೋದಿಗೆ ಏನು ಬೇಕಾದರೂ ಮಾಡಿಕೊಳ್ಳಿ ಎಂದು ಮುಕ್ತ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಪ್ರಶಾಂತ್ ಭೂಷಣ್ ಹೇಳಿದರು.

ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಒಮ್ಮೆ ಸಂಸತ್ತಿನಲ್ಲಿ ಭಾಷಣ ಮಾಡುವಾಗ ‘ನಿವೃತ್ತ ನ್ಯಾಯಮೂರ್ತಿಗಳಿಗೆ ಸರಕಾರಿ ಹುದ್ದೆಗಳನ್ನು ನೀಡುವುದು ಹಾಲಿ ನ್ಯಾಯಮೂರ್ತಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ’ ಎಂದು ಹೇಳಿದ್ದರು ಎಂದು ಉಲ್ಲೇಖಿಸಿದ ಅವರು, ರಾಮಜನ್ಮಭೂಮಿ ಹಾಗೂ ರಫೇಲ್‌ ಪ್ರಕರಣದಲ್ಲಿ ಸರಕಾರದ ಪರವಾಗಿ ತೀರ್ಪು ನೀಡಿದ ನ್ಯಾ.ರಂಜನ್ ಗೊಗೋಯ್ ಅವರನ್ನು ನಿವೃತ್ತಿ ನಂತರ ರಾಜ್ಯಸಭಾ ಸದಸ್ಯರನ್ನಾಗಿ ಮಾಡಲಾಯಿತು ಎಂದರು.

ಬಿರ್ಲಾ, ಸಹಾರ, ಭೂ ಸ್ವಾಧೀನ, ಅದಾನಿ ಪ್ರಕರಣಗಳಲ್ಲಿ ಸರಕಾರದ ಪರವಾಗಿ ತೀರ್ಪುಗಳನ್ನು ನೀಡಿದ ನ್ಯಾ.ಅರುಣ್ ಮಿಶ್ರಾ ಅವರನ್ನು ನಿವೃತ್ತಿ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಡಲಾಯಿತು. ಮಾನವ ಹಕ್ಕುಗಳ ಹೋರಾಟಗಾರರಾದ ತೀಸ್ತಾ ಸೆತಲ್ವಾಡ್ ಹಾಗೂ ಹಿಮಾಂಶು ಕುಮಾರ್ ವಿರುದ್ಧ ತೀರ್ಪು ನೀಡಿದ ನ್ಯಾ.ಖನ್ವಿಲ್ಕರ್ ಅವರನ್ನು ಲೋಕಪಾಲ್ ಮಾಡಲಾಗಿದೆ ಎಂದು ಪ್ರಶಾಂತ್ ಭೂಷಣ್ ಹೇಳಿದರು.

ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ನ್ಯಾಯಮೂರ್ತಿಗಳ ಪೈಕಿ ಒಬ್ಬರಾಗಿದ್ದ ಅಬ್ದುಲ್ ನಝೀರ್ ಅವರನ್ನು ರಾಜ್ಯಪಾಲರನ್ನಾಗಿ ಮಾಡಲಾಗಿದೆ. ಅದೇ ರೀತಿ ಹಲವು ನ್ಯಾಯಮೂರ್ತಿಗಳನ್ನು ನಿವೃತ್ತಿಯ ನಂತರ ಇಂತಹ ಹುದ್ದೆಗಳನ್ನು ಸರಕಾರ ನೀಡುತ್ತಿದೆ. ಇದರಿಂದಾಗಿ, ನ್ಯಾಯಾಂಗ ವ್ಯವಸ್ಥೆಯಲ್ಲಿ ಸ್ವಾತಂತ್ರ್ಯ ಹಾಗೂ ಉತ್ತರದಾಯಿತ್ವ ಕುಸಿಯುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್‍ಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಕೊಲಿಜಿಯಂಗೆ ಮಾತ್ರ ಅವಕಾಶ ಇರಬೇಕು. ಸರಕಾರದ ಹಸ್ತಕ್ಷೇಪಕ್ಕೆ ಅವಕಾಶ ಇರಬಾರದು. ಕೊಲಿಜಿಯಂ ಮೂಲಕ ಕಳುಹಿಸಿಕೊಡುವ ನ್ಯಾಯಮೂರ್ತಿಗಳ ಪಟ್ಟಿಯಲ್ಲಿ ಯಾವ ನ್ಯಾಯಮೂರ್ತಿ ಬಿಜೆಪಿ, ಆರೆಸ್ಸೆಸ್ ಸಿದ್ಧಾಂತವನ್ನು ಒಪ್ಪುತ್ತಾರೋ ಅವರಿಗೆ ಮೋದಿ ಸರಕಾರ ಮಣೆ ಹಾಕಿದೆ. ಅವರ ಸಿದ್ಧಾಂತವನ್ನು ಒಪ್ಪದವರ ಹೆಸರಿಗೆ ಅನುಮೋದನೆ ನೀಡದೆ, ಪಟ್ಟಿಯನ್ನು ವಾಪಸ್ ಕಳುಹಿಸದೆ ವರ್ಷಾನುಗಟ್ಟಲೆ ಕಾಲಹರಣ ಮಾಡಿರುವ ಉದಾಹರಣೆಗಳು ಇವೆ ಎಂದು ಅವರು ತಿಳಿಸಿದರು.

ಅಷ್ಟೇ ಅಲ್ಲ, ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಆಗುವ ಅರ್ಹತೆ ಇರುವವರ ಮೇಲೆ ಈ.ಡಿ, ಸಿಬಿಐ, ಎನ್‍ಐಎ, ಪೊಲೀಸ್, ಆದಾಯ ತೆರಿಗೆ ಇಲಾಖೆಯವರು ಕಣ್ಣಿಟ್ಟಿರುತ್ತಾರೆ. ಈ ಹಿಂದೆ ಅವರು ಏನಾದರೂ ತಪ್ಪುಗಳು ಮಾಡಿದ್ದರೆ ಅವುಗಳ ಮಾಹಿತಿ ಸಂಗ್ರಹಿಸಿಕೊಂಡು ಬ್ಲಾಕ್‍ಮೇಲ್ ಮಾಡುತ್ತಾರೆ. ಮುಖ್ಯ ನ್ಯಾಯಮೂರ್ತಿ ಏನಾದರೂ ತಪ್ಪು ಮಾಡಿ ಇವರ ಕೈಗೆ ಸಿಕ್ಕಿಬಿದ್ದರೆ ಅರ್ಧ ನ್ಯಾಯಾಂಗ ವ್ಯವಸ್ಥೆ ಸರಕಾರದ ನಿಯಂತ್ರಣಕ್ಕೆ ಹೋದ ಹಾಗೆ ಎಂದು ಪ್ರಶಾಂತ್ ಭೂಷಣ್ ಅಭಿಪ್ರಾಯಪಟ್ಟರು.

ಯಾವ ಪ್ರಕರಣ ಯಾವ ನ್ಯಾಯಮೂರ್ತಿಯ ಪೀಠದ ಎದುರು ಹೋಗಬೇಕು ಎಂಬುದನ್ನು ಮುಖ್ಯ ನ್ಯಾಯಮೂರ್ತಿ ನಿರ್ಧರಿಸುತ್ತಾರೆ. ಯಾವ ಯಾವ ನ್ಯಾಯಮೂರ್ತಿಗಳು ಹೇಗಿರುತ್ತಾರೆ, ಅವರ ಸಿದ್ಧಾಂತ, ಪ್ರಾಮಾಣಿಕತೆ, ಅಪ್ರಾಮಾಣಿಕತೆ ಎಲ್ಲವೂ ಸರಕಾರಕ್ಕೆ ಗೊತ್ತಿರುತ್ತದೆ. ಅದರಂತೆ, ಸರಕಾರ ತನ್ನ ರಾಜಕೀಯ ವಿಚಾರಗಳಿಗೆ ಸಂಬಂಧಿಸಿದ ಪ್ರಕರಣವನ್ನು ತನಗೆ ಸರಿಹೊಂದುವ ಪೀಠಕ್ಕೆ ಕಳುಹಿಸಿಕೊಡುವಲ್ಲಿ ಯಶಸ್ವಿಯಾಗುತ್ತದೆ ಎಂದು ಅವರು ಹೇಳಿದರು.

ಸಂವಾದದಲ್ಲಿ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಜಾರಿಯೊ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X