Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 27 ಆಹಾರ ನಿಗಮದ ಗೋದಾಮುಗಳ ಮೇಲೆ...

27 ಆಹಾರ ನಿಗಮದ ಗೋದಾಮುಗಳ ಮೇಲೆ ಲೋಕಾಯುಕ್ತ ದಾಳಿ

ವಾರ್ತಾಭಾರತಿವಾರ್ತಾಭಾರತಿ13 Jun 2026 8:10 PM IST
share
27 ಆಹಾರ ನಿಗಮದ ಗೋದಾಮುಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ವಿತರಣೆಯಲ್ಲಿ ನಡೆಯುತ್ತಿದ್ದ ಅಕ್ರಮ ವಹಿವಾಟು ಮತ್ತು ವಂಚನೆಯನ್ನು ಪತ್ತೆಹಚ್ಚಿರುವ ಲೋಕಾಯುಕ್ತ ಪೊಲೀಸರು, ಬೆಂಗಳೂರು ನಗರದ 22 ಹಾಗೂ ಬೆಂಗಳೂರು ಗ್ರಾಮಾಂತರದ 5 ಸೇರಿದಂತೆ ಒಟ್ಟು 27 ಕಡೆಗಳಲ್ಲಿ ಏಕಕಾಲಕ್ಕೆ ಆಹಾರ ಸರಬರಾಜು ನಿಗಮದ ಗೋದಾಮುಗಳ ಮೇಲೆ ದಾಳಿ ಕೈಗೊಂಡು ಪರಿಶೀಲನೆ ನಡೆಸಲಾಗಿದೆ.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಮತ್ತು ಬಿ.ವೀರಪ್ಪ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಶಾಂತಿನಗರದ ಗೋದಾಮಿನಲ್ಲಿ ಪರಿಶೀಲನೆ ನಡೆಸಿದಾಗ ಅಲ್ಲಿರುವ 50 ಕೆ.ಜಿ.ಯ ಸುಮಾರು 1,130 ಅಕ್ಕಿ ಮೂಟೆಗಳಿಗೂ ನೀಡಿರುವ ಲೆಕ್ಕಕ್ಕೂ ಸಂಬಂಧವೇ ಇಲ್ಲ ಎಂದು ಗೊತ್ತಾಗಿದೆ. ಈ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ 5 ಜನ ಕಾರ್ಮಿಕರಿಗೆ ಯಾವುದೇ ಜೀವ ವಿಮೆ ಸೌಲಭ್ಯ ಕಲ್ಪಿಸಿಲ್ಲ ಎಂಬುದು ಬೆಳಕಿಗೆ ಬಂದಿದೆ. ಈ ಮೂಲಕ ಅಧಿಕಾರಿಗಳು ಕರ್ತವ್ಯಲೋಪ ಎಸಗಿರುವುದು ತಿಳಿದುಬಂದಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಬೆಂಗಳೂರು ದಕ್ಷಿಣದ ಬೊಬ್ಬನಹಳ್ಳಿ ಗೋದಾಮಿನ ಮೇಲೆ ಲೋಕಾಯುಕ್ತ ದಾಳಿ ಮಾಡಿದ ವೇಳೆ ಉಸ್ತುವಾರಿ ಅಧಿಕಾರಿ ಅಚ್ಯುತ್ ಅವರು ಯಾವುದೇ ಮಾಹಿತಿ ನೀಡದೆ ಅನಧಿಕೃತವಾಗಿ ಗೈರು ಹಾಜರಾಗಿದ್ದರು. ಸ್ಥಳದಲ್ಲಿದ್ದ ಮತ್ತೊಬ್ಬ ಸಿಬ್ಬಂದಿ ಶಿವಲಿಂಗಯ್ಯ ಸ್ವೀಕರಿಸಿದ ಅಕ್ಕಿ ಮೂಟೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಇದೇ ವೇಳೆಗೆ ನಿಯಮಬಾಹಿರವಾಗಿ ಲಾರಿಯೊಂದಕ್ಕೆ 25 ಟನ್ ಅಕ್ಕಿ ಮೂಟೆಗಳನ್ನು ಲೋಡ್ ಮಾಡುತ್ತಿರುವುದು ಪತ್ತೆಯಾಗಿದೆ. ಇಲ್ಲಿ ಕೆಲಸ ಮಾಡುವ 10 ಜನ ಕಾರ್ಮಿಕರಿಗೂ ಯಾವುದೇ ಜೀವ ವಿಮೆಯ ರಕ್ಷಣೆ ಇರಲಿಲ್ಲ ಎಂದು ಗೊತ್ತಾಗಿದೆ.

ಬಸವನಗುಡಿಯಲ್ಲಿರುವ ಆಹಾರ ಸರಬರಾಜು ನಿಗಮದ ಗೋದಾಮಿನಲ್ಲಿ ಅಧಿಕಾರಿಗಳು ನೀಡಿದ ಲಿಖಿತ ಲೆಕ್ಕಕ್ಕಿಂತ ಅತ್ಯಂತ ಕಡಿಮೆ ಪ್ರಮಾಣದ ಅಕ್ಕಿ ಮೂಟೆಗಳು ಇರುವುದು ಪತ್ತೆಯಾಗಿದೆ. ದಾಳಿಯ ವೇಳೆ ಅಧಿಕಾರಿಗಳ ಬಳಿ ಇದ್ದ ನಗದಿಗೆ ಸಂಬಂಧಿಸಿದಂತೆ ಯಾವುದೇ ಸರಿಯಾದ ದಾಖಲೆ ನೀಡಿಲ್ಲ. ಇದರೊಂದಿಗೆ ಗೋದಾಮಿನ ಕಾರ್ಮಿಕರಿಗೆ ಜೀವ ವಿಮೆ, ಇಎಸ್‍ಐ ಹಾಗೂ ಪಿಎಫ್ ಸೌಲಭ್ಯಗಳನ್ನು ನೀಡದೆ ವಂಚಿಸಿರುವುದಾಗಿ ಲೋಕಾಯುಕ್ತ ಮೂಲಗಳಿಂದ ತಿಳಿದುಬಂದಿದೆ

ಹನುಮಂತನಗರದ ಗೋದಾಮಿನಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಸಾಕಷ್ಟು ಅಕ್ರಮ ವಹಿವಾಟು ಬೆಳಕಿಗೆ ಬಂದಿದೆ. ಜೊತೆಗೆ, ಇಲ್ಲಿ ಕೆಲಸ ಮಾಡುವ ನಾಲ್ಕು ಜನ ಕಾರ್ಮಿಕರಿಗೂ ಜೀವ ವಿಮೆ, ಇಎಸ್‍ಐ ಹಾಗೂ ಪಿಎಫ್ ಸೌಲಭ್ಯಗಳನ್ನು ಒದಗಿಸದೆ ಶೋಷಣೆ ಮಾಡಲಾಗುತ್ತಿತ್ತು ಎಂಬುದು ಲೋಕಾಯುಕ್ತ ಮೂಲಗಳಿಂದ ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X