Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನೋಂದಣಿ-ಮುಂದ್ರಾಂಕ ಇಲಾಖೆಯ 33 ಮಂದಿ...

ನೋಂದಣಿ-ಮುಂದ್ರಾಂಕ ಇಲಾಖೆಯ 33 ಮಂದಿ ಅಧಿಕಾರಿ, ಸಿಬ್ಬಂದಿ ವರ್ಗಾವಣೆ

ವಾರ್ತಾಭಾರತಿವಾರ್ತಾಭಾರತಿ19 Nov 2026 8:55 PM IST
share
ನೋಂದಣಿ-ಮುಂದ್ರಾಂಕ ಇಲಾಖೆಯ 33 ಮಂದಿ ಅಧಿಕಾರಿ, ಸಿಬ್ಬಂದಿ ವರ್ಗಾವಣೆ

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಜಿಲ್ಲಾ ನೋಂದಣಾಧಿಕಾರಿ, ಹಿರಿಯ ಉಪನೋಂದಣಾಧಿಕಾರಿ/ಅಧೀಕ್ಷಕ/ಉಪನೋಂದಣಾಧಿಕಾರಿ/ಪ್ರಥಮ ಮತ್ತು ದ್ವೀತಿಯ ದರ್ಜೆ ಸಹಾಯಕರು ಸೇರಿದಂತೆ ಒಟ್ಟು 33 ಮಂದಿ ಅಧಿಕಾರಿ, ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಸುನೀತಾ ಎಸ್. ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು, ತುಮಕೂರು, ಹಾಸನ, ಶಿವಮೊಗ್ಗ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಮಂಡ್ಯ ಮತ್ತು ಇತರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಲವು ಅಧಿಕಾರಿಗಳನ್ನು ಅವರ ಹೆಸರಿನ ಮುಂದಿನ ಸ್ಥಳಕ್ಕೆ ತಕ್ಷಣದಿಂದಲೇ ನಿಯೋಜನೆ ಮಾಡಿ ವರ್ಗಾವಣೆ ಮಾಡಲಾಗಿದೆ.

ಕೊಪ್ಪಳದಲ್ಲಿ ಜಿಲ್ಲಾ ನೋಂದಣಾಧಿಕಾರಿಯಾಗಿದ್ದ ಅನುರಾಧಾ ಎಂ. ಕಿನ್ನಾಳ್ ಅವರನ್ನು ಯಾದಗಿರಿ ಜಿಲ್ಲೆಗೆ, ರಾಯಚೂರಿನ ಜಿಲ್ಲಾ ನೋಂದಣಾಧಿಕಾರಿ ಪ್ರತಿಭಾ ಬಿಡಿಕರ್ ಅವರನ್ನು ಕೊಪ್ಪಳಕ್ಕೆ ವರ್ಗಾಯಿಸಲಾಗಿದೆ.

ಕುಣಿಗಲ್‍ನಲ್ಲಿ ಹಿರಿಯ ಉಪ-ನೋಂದಣಾಧಿಕಾರಿಯಾಗಿದ್ದ ಮಂಜುನಾಥ್‍ರನ್ನು ಬೆಂಗಳೂರಿನ ಬಸವನಗುಡಿ, ಬೇಗೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್‌ ಕುಮಾರ್ ಕಟ್ಟಿಮನಿ ಅವರನ್ನು ದೊಡ್ಡಬಳ್ಳಾಪುರ, ಬೆಂಗಳೂರಿನಲ್ಲಿರುವ ಇಲಾಖೆಯ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ವರ್ಣಲತಾ ಎಸ್.ಎಸ್. ಅವರನ್ನು ಕೆಂಗೇರಿಯ ಉಪ-ನೋಂದಣಾಧಿಕಾರಿಯಾಗಿ ನೇಮಿಸಲಾಗಿದೆ.

ಶೃಂಗೇರಿಯ ಹಿರಿಯ ಉಪ-ನೋಂದಣಾಧಿಕಾರಿ ರಾಮದಾಸೇಗೌಡರನ್ನು ನೆಲಮಂಗಲಕ್ಕೆ ವರ್ಗಾಯಿಸಲಾಗಿದ್ದು, ಗುಡಿಬಂಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಕರಮೂರ್ತಿ ಅವರನ್ನು ಗೌರಿಬಿದನೂರಿಗೆ ನಿಯೋಜಿಸಲಾಗಿದೆ.

ಬಸವನಗುಡಿ ಜಿಲ್ಲಾ ನೋಂದಣಾಧಿಕಾರಿ ಕಚೇರಿಯಿಂದ ರವಿಕುಮಾರ್ ಕೆ.ವಿ.ಅವರನ್ನು ಮಲ್ಲೇಶ್ವರಕ್ಕೆ, ಆಲೂರುನಿಂದ ಚಂದ್ರಕಾಂತಿ ಅವರನ್ನು ತುಮಕೂರಿಗೆ ಮತ್ತು ಮಧುಗಿರಿಯಿಂದ ಸತೀಶ್ ಎಸ್. ಅವರನ್ನು ಪೀಣ್ಯಕ್ಕೆ, ಅನಿಲ್ ಜಮಖಂಡಿ ಅವರನ್ನು ಬಾಗಲಕೋಟೆಯಿಂದ ಧಾರವಾಡಕ್ಕೆ, ಧನಲಕ್ಷ್ಮಿ ಅವರನ್ನು ಮಂಡ್ಯದಿಂದ ಕೊರಟಗೆರೆಗೆ ವರ್ಗಾವಣೆ ಮಾಡಲಾಗಿದೆ. ಇದೇ ವೇಳೆ ಏಳು ಮಂದಿ ಪ್ರಥಮ ದರ್ಜೆ ಸಹಾಯಕರು ಮತ್ತು ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ವಿವಿಧ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ.

Tags

Registration and Stamps Departmenttransfer
share
ವಾರ್ತಾಭಾರತಿ
ವಾರ್ತಾಭಾರತಿ
Next Story
X