Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪೀಣ್ಯ ಪ್ಲಾಂಟೇಷನ್‍ನಲ್ಲಿ ಲಾಲ್‍ಬಾಗ್...

ಪೀಣ್ಯ ಪ್ಲಾಂಟೇಷನ್‍ನಲ್ಲಿ ಲಾಲ್‍ಬಾಗ್ ರೀತಿ ಉದ್ಯಾನ : ಸಚಿವ ಈಶ್ವರ್‌ ಖಂಡ್ರೆ ಆಶಯಕ್ಕೆ ಬಲ

ಎಚ್‍ಎಂಟಿ ವಶದಲ್ಲಿದ್ದ 5 ಎಕರೆ ಅರಣ್ಯ ಭೂಮಿ ಮರುವಶ

ವಾರ್ತಾಭಾರತಿವಾರ್ತಾಭಾರತಿ25 Oct 2024 8:47 PM IST
share
ಪೀಣ್ಯ ಪ್ಲಾಂಟೇಷನ್‍ನಲ್ಲಿ ಲಾಲ್‍ಬಾಗ್ ರೀತಿ ಉದ್ಯಾನ : ಸಚಿವ ಈಶ್ವರ್‌ ಖಂಡ್ರೆ ಆಶಯಕ್ಕೆ ಬಲ

ಬೆಂಗಳೂರು : ಎಚ್‍ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್‍ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ ಉದ್ಯಾನ ನಿರ್ಮಿಸುವ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆಶಯಕ್ಕೆ ಅಧಿಕಾರಿಗಳು ಬಲ ನೀಡಿದ್ದಾರೆ.

ಶುಕ್ರವಾರ ಎಚ್‍ಎಂಟಿ ವಶದಲ್ಲಿದ್ದ ಪೀಣ್ಯ-ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದಿದ್ದು, ಅಲ್ಲಿ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

1896ರ ಮೇ 29ರ ಸರಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once a forest is always a forest ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದ್ದರು.

ಸದರಿ ಜಮೀನು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್‍ಗೆ ಅನುಮತಿ ಕೋರಿ ಅರಣ್ಯಾಧಿಕಾರಿಗಳು ನಿಯಮಬಾಹಿರವಾಗಿ ಸಲ್ಲಿಸಿದ್ದ ಇಂಟರ್ ಲೊಕೇಟರಿ ಅಪ್ಲಿಕೇಶನ್ (ಐಎ) ಹಿಂಪಡೆಯಲೂ ಸೂಚನೆ ನೀಡಿದ್ದರು. ಈ ಮಧ್ಯೆ ಎಚ್‍ಎಂಟಿ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯ ಪೈಕಿ 165ಕ್ಕೂ ಹೆಚ್ಚು ಎಕರೆ ಜಮೀನನ್ನು ಕೇವಲ 300 ಕೋಟಿ ರೂ.ಗೆ ಖಾಸಗಿ ಮತ್ತು ಸರಕಾರದ ವಿವಿಧ ಸಂಸ್ಥೆಗಳಿಗೆ ಮಾರಾಟ ಮಾಡಿತ್ತು.

ಈ ಭೂಮಿಯನ್ನು ವಶಕ್ಕೆ ಪಡೆದು ಲಾಲ್‍ಬಾಗ್, ಕಬ್ಬನ್ ಪಾರ್ಕ್‍ನಂತಹ ಬೃಹತ್ ಉದ್ಯಾನ ಇಲ್ಲದ ಉತ್ತರ ಬೆಂಗಳೂರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಿ ಆ ಭಾಗದ ಬೆಂಗಳೂರಿಗರಿಗೆ ಅತ್ಯುತ್ತಮ ಶ್ವಾಸತಾಣ ಮಾಡುವ ಆಶಯವನ್ನು ಈಶ್ವರ ಖಂಡ್ರೆ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಇಂದು ಅಧಿಕಾರಿಗಳು ಪ್ರಥಮ ಹೆಜ್ಜೆ ಇಟ್ಟಿದ್ದಾರೆ ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X