ಸೆ.6ಕ್ಕೆ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಿತ ಪ್ರದೇಶವೆಂದು ಘೋಷಿಸಿ ಆದೇಶ

ಸಾಂದರ್ಭಿಕ ಚಿತ್ರ | PC : Image by jannoon028 on Magnific
ಬೆಂಗಳೂರು : ಇದೇ ಸೆ.6ರಂದು ನಗರದ 68 ಪರೀಕ್ಷಾ ಕೇಂದ್ರಗಳಲ್ಲಿ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆಯು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ, ಈ ಎಲ್ಲ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸೆ.6ರಂದು ಪರೀಕ್ಷೆ ಮುಕ್ತಾಯಗೊಳ್ಳುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
Next Story




