ಮಳೆಗೆ ತಡೆಗೋಡೆ ಕುಸಿದು 7 ಮಂದಿ ಮೃತ್ಯು : ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಆಲಿಕಲ್ಲು ಸಹಿತ ಧಾರಕಾರ ಮಳೆಗೆ ಇಲ್ಲಿನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಆವರಣದ ತಡೆಗೋಡೆ ಕುಸಿದು ಇಬ್ಬರು ಮಕ್ಕಳ ಸೇರಿದಂತೆ 7 ಮಂದಿ ಬೀದಿಬದಿ ವ್ಯಾಪಾರಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಮಾಜಿಕ ಜಾಲತಾಣ ʼಎಕ್ಸ್ʼನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
Next Story






