Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೆಟ್ರೋ ಯೋಜನೆ ಅನುದಾನದಲ್ಲಿ ಶೇ.80ರಷ್ಟು...

ಮೆಟ್ರೋ ಯೋಜನೆ ಅನುದಾನದಲ್ಲಿ ಶೇ.80ರಷ್ಟು ನಮ್ಮದು, ಕೇಂದ್ರದ್ದು ಶೇ.20 ಮಾತ್ರ : ಡಿ.ಕೆ.ಶಿವಕುಮಾರ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ10 Aug 2025 1:34 PM IST
share
ಮೆಟ್ರೋ ಯೋಜನೆ ಅನುದಾನದಲ್ಲಿ ಶೇ.80ರಷ್ಟು ನಮ್ಮದು, ಕೇಂದ್ರದ್ದು ಶೇ.20 ಮಾತ್ರ : ಡಿ.ಕೆ.ಶಿವಕುಮಾರ್ ತಿರುಗೇಟು
"ಬಿಜೆಪಿ ಸಂಸದರು ಬೆಂಗಳೂರು, ಕರ್ನಾಟಕಕ್ಕೆ 10 ರೂ. ಅನುದಾನ ತಂದಿಲ್ಲ"

ಬೆಂಗಳೂರು, ಆ.10: "ಮೆಟ್ರೋ ಹಳದಿ ಮಾರ್ಗಕ್ಕೆ ರಾಜ್ಯ ಸರಕಾರ ಶೇ.80ರಷ್ಟು ಖರ್ಚು ಮಾಡಿದ್ದರೆ, ಕೇಂದ್ರ ಬಿಜೆಪಿ ಸರಕಾರ ಶೇ.20ರಷ್ಟು ಮಾತ್ರ ಖರ್ಚು ಮಾಡಿದೆ. ಕೆಲವೊಂದು ಕಡೆ ಶೇ.11ರಷ್ಟು ಮಾತ್ರ ಖರ್ಚು ಮಾಡಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು‌.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ರವಿವಾರ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿ ಸಂಸದರು ಹಾಗೂ ನಾಯಕರ ಮೇಲೆ ವಾಗ್ದಾಳಿ ನಡೆಸಿದರು.

"ಬೆಂಗಳೂರಿಗೆ ಕನಿಷ್ಠ 1 ಲಕ್ಷ ಕೋಟಿ ರೂ. ಅನುದಾನ ನೀಡಬೇಕು ಎಂದು ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡುತ್ತೇನೆ. ಮೆಟ್ರೋ ಯೋಜನೆಯ ಭೂಸ್ವಾಧೀನನಕ್ಕೆಲ್ಲ ರಾಜ್ಯ ಸರಕಾರವೇ ಹಣ ನೀಡಿದೆ. ಕೇಂದ್ರದ ಬಿಜೆಪಿ ಸರಕಾರ ಶೇ.50 ರಷ್ಟು ನೀಡಬೇಕಾಗಿತ್ತು. ಅದನ್ನೂ ನೀಡಿಲ್ಲ. ಆದರೂ ನಾವು ಈ ರಾಜ್ಯದ, ಬೆಂಗಳೂರಿನ ಜನರ ಹಿತಕ್ಕಾಗಿ ಈ ಕೆಲಸ ಪೂರ್ಣಗೊಳಿಸಿದ್ದೇವೆ. ಬೆಂಗಳೂರು ದೇಶದಲ್ಲಿಯೇ ಹೆಚ್ಚು ತೆರಿಗೆ ಪಾವತಿ ಮಾಡುವ ಎರಡನೇ ನಗರವಾದರೂ ಸಿಗುತ್ತಿರುವ ಅನುದಾನ ಮಾತ್ರ ಬಹಳ ಕಡಿಮೆ" ಎಂದರು.

"ಅಹಮದಾಬಾದ್ ಗೆ ಶೇ.20 ರಷ್ಟು ತೆರಿಗೆ ಪಾಲನ್ನು ನೀಡಲಾಗಿದೆ. ನಮಗೆ ಶೇ.10ರಷ್ಟು ಮಾತ್ರ ನೀಡಲಾಗಿದೆ. ಅದಕ್ಕೆ ದೇಶದ ಇತರೆ ದೊಡ್ಡ ನಗರಗಳಂತೆ ನಮ್ಮನ್ನೂ ಪರಿಗಣಿಸಿ. ಜೊತೆಗೆ ದೇಶದ ರಾಜಧಾನಿ ಸಾಲಿನಲ್ಲಿಟ್ಟು ಬೆಂಗಳೂರನ್ನು ಯೋಚಿಸಿ.‌ ನಾವು ರಾಜಕಾರಣ ಮಾಡುತ್ತಿಲ್ಲ, ಬದಲಾಗಿ ಮನವಿ ಮಾಡುತ್ತಿದ್ದೇವೆ" ಎಂದರು.

ಬಿಜೆಪಿಯವರು 10 ರೂ. ತಂದಿಲ್ಲ

"ಬಿಜೆಪಿಯವರು ಎಲ್ಲಾ ನಾವೇ ಮಾಡಿದ್ದೇವೆ ಎನ್ನುತ್ತಾರೆ. ಅವರದ್ದು ಏನೇನೂ ಸಾಧನೆಯಿಲ್ಲ. ಯಾವೊಬ್ಬ ಸಂಸದನೂ ಸಹ ಬೆಂಗಳೂರು ನಗರಕ್ಕೆ, ರಾಜ್ಯಕ್ಕೆ ಹತ್ತು ರೂಪಾಯಿ ಸಹಾಯ ತಂದಿಲ್ಲ. ಯಾವ ರೀತಿಯ ಸಹಕಾರವನ್ನೂ ಸಹ ಕೊಟ್ಟಿಲ್ಲ. ಕರ್ನಾಟಕದ ಬಿಜೆಪಿ ಸಂಸದರಿಗೆ ನಾಚಿಕೆಯಾಗಬೇಕು.‌ ಕೇಂದ್ರ ಜಲಶಕ್ತಿ ಸಚಿವರು ಮಾತ್ರ ಕೆಲವೊಮ್ಮೆ ನಮ್ಮ ಮನವಿಗಳಿಗೆ ಸ್ಪಂದಿಸಿದ್ದಾರೆ. ಅದರ ಹೊರತಾಗಿ ಒಂದೇ ಒಂದು ರೂ. ಸಹ ಬಂದಿಲ್ಲ. ನರೇಗಾ ಯೋಜನೆಗೂ ಹಣ ನೀಡಿಲ್ಲ" ಎಂದರು.

ಕೇವಲ ಫೋಟೊ ಹಾಕಿಸಿಕೊಂಡರೆ ಸಾಧನೆಯಲ್ಲ :

"ಈ ಬಿಜೆಪಿ ಸಂಸದರು ಕೇವಲ ಎಕ್ಸ್ (ಟ್ವೀಟ್) ಮಾಡಿಕೊಂಡು, ಮಾಧ್ಯಮಗಳಲ್ಲಿ ಎರಡು ಪೋಟೊ ಹಾಕಿಸಿಕೊಂಡರೆ ಮಾತ್ರ ಸಾಧನೆ ಎಂದುಕೊಂಡಿದ್ದಾರೆ. ನಿಮ್ಮ ಪ್ರಜ್ಞೆ ಇಲ್ಲಿ ಕೆಲಸ ಮಾಡಬೇಕು. ಸಂಸದರು ರಾಜಕಾರಣ ಬಿಟ್ಟು ಜನರ ಸೇವೆಗೆ ಅನುದಾನ ತರುವ ಕೆಲಸ‌ ಮಾಡಿ" ಎಂದು ಕುಟುಕಿದರು.

"ಕೇಂದ್ರ‌ ಸಎರಕಾರ ಸಂಪೂರ್ಣವಾಗಿ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದೆ. ಅನುದಾನ ನೀಡಲು ಕಡೆಗಣಿಸಲಾಗಿದೆ. ಆದರೆ ಮಾನ್ಯ ಪ್ರಧಾನಿಗಳಿಗೆ ಗೌರವ ನೀಡಿ ಉದ್ಘಾಟನೆಗೆ ಆಹ್ವಾನ ನೀಡಿದ್ದೇವೆ. ನಾವು ಡಬಲ್ ಡೆಕ್ಕರ್ ಎನ್ನುವ ಮಾದರಿಯುತ ಯೋಜನೆಯನ್ನು ಜಾರಿಗೆ ತಂದಿದ್ದೇವೆ" ಎಂದರು.

"ಬೆಂಗಳೂರಿನಲ್ಲಿ ಪ್ರತಿ ವರ್ಷ ಐಟಿ ಕ್ಷೇತ್ರದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಯಾಗುತ್ತಿದೆ. ಐಟಿ ಉದ್ದಿಮೆಗಳು ಇರುವ ಭಾಗಕ್ಕೆ ಅನುಕೂಲವಾಗಲಿ ಎಂದು ಹಳದಿ ಮಾರ್ಗ ಮಾಡಿದ್ದೇವೆ. ಇಂದು ಆ ಮಾರ್ಗ ಉದ್ಘಾಟನೆಯಾಗುತ್ತಿದೆ. ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ ಕೂಡ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಆಗಿದ್ದು" ಎಂದರು.

ಅಂಕಿ ಅಂಶಗಳ ಬಿಡುಗಡೆಗೆ ಸವಾಲು :

ಮೆಟ್ರೋ ಎರಡನೇ ಹಾಗೂ ಮೂರನೇ ಹಂತಕ್ಕೆ ಮೋದಿಯವರ ಕೊಡುಗೆ ಹೆಚ್ಚಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಗಳ ಬಗ್ಗೆ ಕೇಳಿದಾಗ, "ಯಾರ ಕೊಡುಗೆಯೂ ಇಲ್ಲಿ ಇಲ್ಲ. ಇದೆಲ್ಲಾ ಪ್ರಾರಂಭ ಆಗಿದ್ದು ಎಸ್.ಎಂ.ಕೃಷ್ಣ ಅವರು ಹಾಗೂ ವಾಜಪೇಯಿ ಅವರ ಕಾಲದಲ್ಲಿ. ಎಷ್ಟೆಷ್ಟು ಅನುದಾನ ನೀಡಿದ್ದೇವೆ ಎನ್ನುವ ಅಂಕಿಅಂಶಗಳನ್ನು ಅವರೂ ಬಿಡುಗಡೆ ಮಾಡಲಿ, ನಾನೂ ಬಿಡುಗಡೆ ಮಾಡುತ್ತೇನೆ" ಎಂದು ಸವಾಲು ಹಾಕಿದರು.

"ಇನ್ಫೋಸಿಸ್, ಡೆಲ್ಟಾ, ಬಯೋಕಾನ್ ಹಾಗೂ ಇತರೇ ಸಂಸ್ಥೆಗಳು ಹಳದಿ ಮಾರ್ಗದ ಮೆಟ್ರೋ ನಿಲ್ದಾಣಗಳಿಗೆ ಹಣ ನೀಡಿದ್ದಾರೆ ಅವರಿಗೆ ಇದೇ ವೇಳೆ ಅಭಿನಂದನೆಗಳನ್ನು ತಿಳಿಸುತ್ತೇನೆ" ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X