Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲು ಕೋರಿ...

ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲು ಕೋರಿ ಸಿಎಂಗೆ ಪತ್ರ ಬರೆದ 8ನೇ ತರಗತಿ ವಿದ್ಯಾರ್ಥಿನಿ

ವಾರ್ತಾಭಾರತಿವಾರ್ತಾಭಾರತಿ25 Feb 2024 10:17 PM IST
share
ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲು ಕೋರಿ ಸಿಎಂಗೆ ಪತ್ರ ಬರೆದ 8ನೇ ತರಗತಿ ವಿದ್ಯಾರ್ಥಿನಿ

ಬೆಂಗಳೂರು : ಬೆಂಗಳೂರು ನಗರದಿಂದ 25 ಕಿ.ಮೀ ದೂರದಲ್ಲಿರುವ ತಾವರೆಕೆರೆ ವ್ಯಾಪ್ತಿಯ ಸೀಗೇಹಳ್ಳಿಯಿಂದ ಸರಿಯಾದ ಸಾರಿಗೆ ಬಸ್ ವ್ಯವಸ್ಥೆ ಇಲ್ಲ. ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಬಾಲಕಿಯೊಬ್ಬಳು ಪತ್ರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದಾಳೆ.

ಬೆಂಗಳೂರು ಹೊರವಲಯದ ತಾವರಕೆರೆ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ವಾಸವಿರುವ 8ನೇ ತರಗತಿ ವಿದ್ಯಾರ್ಥಿನಿ ವಿ.ವೈ.ಹರ್ಷಿಣಿ, ‘ಸರಿಯಾದ ಸಾರಿಗೆ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿಗಳು ಪರದಾಡಾಡುತ್ತಿದ್ದಾರೆ. ಬಸ್ ಗಳಿಲ್ಲದೆ ತೊಂದರೆಯಾಗುತ್ತಿದೆ. ಹೀಗಾಗಿ ಕೂಡಲೇ ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾಳೆ.

ಸೀಗೇಹಳ್ಳಿ, ಬೆಂಗಳೂರು ನಗರದಿಂದ 25 ಕಿ.ಮೀ.ದೂರವಿದೆ. ಹತ್ತಿರದಲ್ಲೇ ಬಿಎಂಟಿಸಿ ಡಿಪೋ ಇದೆ. ಇಲ್ಲಿಂದ ಅನೇಕ ಕಡೆ ಬಸ್‍ಗಳ ವ್ಯವಸ್ಥೆಯನ್ನು ಬಿಎಂಟಿಸಿ ಕಲ್ಪಿಸಿದೆ. ಆದರೆ, ಅಕ್ಕಪಕ್ಕದಲ್ಲಿರುವ ವನಗನಹಟ್ಟಿ, ಚನ್ನೇನಹಳ್ಳಿ, ಜಟ್ಟಿಪಾಳ್ಯ, ಸೀಗೆಹಳ್ಳಿಯಿಂದ ಬೆಂಗಳೂರಿಗೆ ಬಸ್‍ಗಳ ವ್ಯವಸ್ಥೆಯೇ ಇಲ್ಲ. ಇದರಿಂದ ನಗರದಲ್ಲಿನ ಶಾಲಾ-ಕಾಲೇಜುಗಳಿಗೆ ಹೋಗುವ ಮಕ್ಕಳಿಗೆ ತೊಂದರೆ ಆಗುತ್ತಿದೆ ಎಂದು ಹರ್ಷಿಣಿ ಅಳಲು ತೋಡಿಕೊಂಡಿದ್ದಾಳೆ.

ಬಸ್ ವ್ಯವಸ್ಥೆ ಕಲ್ಪಿಸಿ: ‘ನಾನು ಮತ್ತು ನನ್ನ ತಾಯಿ ಹಲವು ಬಾರಿ ತಮ್ಮ ಸಂಸ್ಥೆಯ ಅಧಿಕಾರಿಗಳಿಗೆ ತಾವರೆಕೆರೆಯಿಂದ ಮಾಗಡಿ ರಸ್ತೆಯ ಮುಖಾಂತರ ಶ್ರೀನಗರ ಬಸ್ ನಿಲ್ದಾಣಕ್ಕೆ ಸಾರಿಗೆ ಸಂಸ್ಥೆಯ ಬಸ್ ಬಿಡಬೇಕೆಂದು ಮನವಿ ಮಾಡಿದ್ದೇವೆ. ಈ ಪತ್ರಕ್ಕೆ ಸಂಸ್ಥೆಯ ಅಧಿಕಾರಿಗಳು ಯಾವುದೇ ಉತ್ತರ ನೀಡಿರುವುದಿಲ್ಲ. ಆದರೆ, ಪ್ರತಿ ಗುರುವಾರ ಹಾಗೂ ರವಿವಾರ ಸುಮ್ಮನಹಳ್ಳಿಯಿಂದ ಕಡಬಗೆರೆ ಮಾರ್ಗವಾಗಿ ರಾಯರ ಕಾಮದೇನು ದೇವಾಲಯಕ್ಕೆ ಪ್ರತಿಗಂಟೆಗೆ ಬಸ್ ಬಿಡಲಾಗುತ್ತಿದೆ.

ನಮಗೆ ದೇವಾಲಯದ ತೀರ್ಥ-ಪ್ರಸಾದ ಬೇಡ, ನಮಗೆ ಉನ್ನತ ಶಿಕ್ಷಣಕ್ಕಾಗಿ ಸಂಸ್ಥೆಯ ಸಾರಿಗೆ ವಾಹನಗಳು ಬೇಕಾಗಿರುತ್ತದೆ. ಈ ದೇಶದ ರಾಷ್ಟ್ರಪತಿ ಮಹಿಳೆಯಾಗಿರುತ್ತಾರೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸುರಕ್ಷಿತ ಸಿಗುವಂತೆ ಮಾಡಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶೀರ್ವಾದವಾಗಿರುತ್ತದೆ ಎಂದು ಹರ್ಷಿಣಿ, ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಿದ್ದಾಳೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X