Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜೈವಿಕ ಇಂಧನ ಮಿಶ್ರಣದಿಂದ ಕೃಷಿಗೆ ವರದಾನ...

ಜೈವಿಕ ಇಂಧನ ಮಿಶ್ರಣದಿಂದ ಕೃಷಿಗೆ ವರದಾನ : ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ

ವಾರ್ತಾಭಾರತಿವಾರ್ತಾಭಾರತಿ12 Nov 2024 8:13 PM IST
share
ಜೈವಿಕ ಇಂಧನ ಮಿಶ್ರಣದಿಂದ ಕೃಷಿಗೆ ವರದಾನ : ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ

ಬೆಂಗಳೂರು : ಜೈವಿಕ ಇಂಧನ ಮಿಶ್ರಣದ ಮೂಲಕ ದೇಶವು ಆಮದು ಬಿಲ್‍ನಲ್ಲಿ 91 ಸಾವಿರ ಕೋಟಿ ರೂಪಾಯಿಗಳನ್ನು ಉಳಿಸಬಹುದು ಮತ್ತು ಈ ಹಣವನ್ನು ಕೃಷಿ ಕ್ಷೇತ್ರದ ಪ್ರಯೋಜನಕ್ಕಾಗಿ ಬಳಸಬಹುದು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್‌ದೀಪ್ ಸಿಂಗ್ ಪುರಿ ಹೇಳಿದರು.

ಮಂಗಳವಾರ ನಗರದಲ್ಲಿ 27ನೇ ‘ಇಂಧನ ತಂತ್ರಜ್ಞಾನ ಶೃಂಗಸಭೆ’ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೈವಿಕ ಇಂಧನ ಮಿಶ್ರಣದಲ್ಲಿ ಭಾರತ ಜಾಗತಿಕವಾಗಿ ಎರಡನೇ ಸ್ಥಾನ ಗಳಿಸಿದೆ. ಮುಂದಿನ ವರ್ಷದ ವೇಳೆಗೆ ಭಾರತವು ಶೇ.20ರಷ್ಟು ಜೈವಿಕ ಇಂಧನ ಮಿಶ್ರಣದ ಗುರಿಯನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಸಂಸ್ಕರಣಾಗಾರಗಳು ಹಸಿರು ಇಂಧನದತ್ತ ವಾಲಿದ್ದು, ಹಸಿರು ಜಲಜನಕ ಗುರಿಯತ್ತ ದೇಶವು ಯಶಸ್ವಿಯಾಗಿ ಸಾಗುತ್ತಿದೆ. 2047ರ ವೇಳೆಗೆ ಭಾರತದ ಇಂಧನ ಬೇಡಿಕೆ ಎರಡೂವರೆ ಪಟ್ಟು ಹೆಚ್ಚಾಗಲಿದೆ. ಭಾರತದ ಕಚ್ಚಾ ತೈಲ ಸಂಸ್ಕರಣಾ ಸಾಮರ್ಥ್ಯವು ವರ್ಷಕ್ಕೆ 400 ರಿಂದ 450 ದಶಲಕ್ಷ ಮೆಟ್ರಿಕ್ ಟನ್ ತಲುಪಿದೆ, ಇದು ಜಾಗತಿಕ ಸರಾಸರಿಯ ಮೂರನೇ ಒಂದು ಭಾಗವಾಗಿದೆ ಎಂದು ಅವರು ಮಾಹಿತಿ ನೀಡಿದರು.

2070ರ ವೇಳೆಗೆ ‘ನಿವ್ವಳ ಇಂಗಾಲ ಶೂನ್ಯ ಹೊರಸೂಸುವಿಕೆ’ ಗುರಿಯನ್ನು ಸಾಧಿಸಲು ಭಾರತವು ತನ್ನ ಪ್ರಯತ್ನಗಳನ್ನು ದ್ವಿಗುಣಗೊಳಿಸಬೇಕಾಗಿದೆ ಎಂದು ಕರೆ ನೀಡಿದ ಹರ್‌ ದೀಪ್ ಸಿಂಗ್ ಪುರಿ, ಇಂಧನ ಕ್ಷೇತ್ರದಲ್ಲಿನ ಗುರಿಗಳನ್ನು ಸಾಧಿಸಲು ಇಂಧನ ಭದ್ರತೆ, ಸುಸ್ಥಿರತೆ ಮತ್ತು ತಂತ್ರಜ್ಞಾನ ನಾವೀನ್ಯತೆ ಜೊತೆಜೊತೆಯಾಗಿ ಸಾಗಬೇಕು ಎಂದು ಹೇಳಿದರು.

‘ಸೆಂಟರ್ ಫಾರ್ ಹೈ ಟೆಕ್ನಾಲಜಿ’ ಮತ್ತು ‘ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್’ ಮೂರು ದಿನಗಳ ‘ಇಂಧನ ತಂತ್ರಜ್ಞಾನ ಶೃಂಗಸಭೆ’ಯನ್ನು ಆಯೋಜಿಸಿವೆ. 1200 ಭಾಗಿದಾರರು ಸಭೆಯಲ್ಲಿ ಪಾಲ್ಗೊಂಡಿದ್ದು, ಇದರಲ್ಲಿ 60 ಪ್ರಬಂಧಗಳನ್ನು ಮಂಡಿಸಲಾಗುವುದು.

ಈ ಕಾರ್ಯಕ್ರಮದಲ್ಲಿ 23 ಪ್ರದರ್ಶಕರು ತಮ್ಮ ಇತ್ತೀಚಿನ ತಂತ್ರಜ್ಞಾನಗಳನ್ನು ಪ್ರದರ್ಶಿಸಲಿದ್ದಾರೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಸ್ಥಾಪಿಸಿದ 2023-24ನೇ ಸಾಲಿನ ‘ಅತ್ಯುತ್ತಮ ಇಂಧನ ದಕ್ಷ ತಂತ್ರಜ್ಞಾನ ಪ್ರಶಸ್ತಿ’ಗಳನ್ನು ಹರ್‌ ದೀಪ್ ಸಿಂಗ್ ಪುರಿ ಪ್ರದಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X