Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಳವಳಿಗೆ ಬೆದರುವ ಸರಕಾರ ಅಧಃಪತನದತ್ತ...

ಚಳವಳಿಗೆ ಬೆದರುವ ಸರಕಾರ ಅಧಃಪತನದತ್ತ ಸಾಗುವುದು ನಿಶ್ಚಿತ : ಆನಂದ ಕುಮಾರ್

ವಾರ್ತಾಭಾರತಿವಾರ್ತಾಭಾರತಿ10 Oct 2026 7:57 PM IST
share
ಚಳವಳಿಗೆ ಬೆದರುವ ಸರಕಾರ ಅಧಃಪತನದತ್ತ ಸಾಗುವುದು ನಿಶ್ಚಿತ : ಆನಂದ ಕುಮಾರ್

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್) ರದ್ದು ಹಾಗೂ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದಿಲ್ಲಿಯಲ್ಲಿ ನಡೆಯುತ್ತಿರುವ ಸಿಜೆಪಿ, ಪ್ರತಿಪಕ್ಷಗಳ ಹೋರಾಟಕ್ಕೆ ಕೇಂದ್ರ ಸರಕಾರ ಬೆಚ್ಚಿಬಿದ್ದಿದ್ದು, ಚಳವಳಿಗೆ ಹೆದರುವ ಸರಕಾರ ಅಧಃಪತನದತ್ತ ಸಾಗುವುದು ನಿಶ್ಚಿತ ಎಂದು ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ.ಆನಂದ ಕುಮಾರ್ ಎಚ್ಚರಿಸಿದ್ದಾರೆ.

ಶನಿವಾರ ಪ್ರಕಟಣೆ ನೀಡಿರುವ ಅವರು, ಪ್ರತಿಭಟನಾಕಾರರನ್ನು ಹತ್ತಿಕ್ಕಲು ಮುಂದಾಗುವ ಮೂಲಕ ಕೇಂದ್ರ ಸರಕಾರ ಜೇನುಗೂಡಿಗೆ ಕಲ್ಲು ಹೊಡೆದಿದೆ. ಹೋರಾಟಕ್ಕೆ ಸಹಸ್ರಾರು ಹಾದಿಗಳು, ಜನಪರ ಇರುವವರನ್ನು ಬಂಧಿಸುವ ಮೂಲಕ ಆಕ್ರೋಶವನ್ನು ನಂದಿಸುತ್ತೇವೆಂಬುದು ಕೇವಲ ಭ್ರಮೆ. ಹೋರಾಟದ ಕಿಚ್ಚಿಗೆ ಸರಕಾರ ತುಪ್ಪು ಸುರಿಯುವ ಕೆಲಸ ಮಾಡುತ್ತಿದ್ದು, ಇದು ಮುಂಬರುವ ದಿನಗಳಲ್ಲಿ ಜ್ವಾಲಾಮುಖಿ ಸ್ವರೂಪ ಪಡೆಯಲಿದೆ ಎಂದು ಹೇಳಿದ್ದಾರೆ.

ದಿಲ್ಲಿಯ ಜಂತರ್ ಮಂತರ್ ಮಾತ್ರವಲ್ಲ, ಇಡೀ ದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ. ಪ್ರತಿಭಟನೆಗೆ ಹೆದರುವ ಸರಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಅರ್ಥವಾಗುವುದಿಲ್ಲ. ಪ್ರಶ್ನೆ ಕೇಳುವವರನ್ನು ವಶಕ್ಕೆ ಪಡೆಯುವುದರಿಂದ ಪ್ರಶ್ನೆಗಳು ಸಾಯುವುದಿಲ್ಲ. ಜನರ ಧ್ವನಿ ಅಡಗಿಸುವುದರಿಂದ ಆಕ್ರೋಶ ತಣ್ಣಗಾಗುವುದಿಲ್ಲ. ದಿಲ್ಲಿಯ ಬೀದಿಗಳಲ್ಲಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಹೋರಾಟಗಾರರನ್ನು ಎಲ್ಲೆಡೆ ವಶಕ್ಕೆ ಪಡೆಯಲಾಗುತ್ತಿದ್ದು, ಇದು ಸರಕಾರದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಸರಕಾರಕ್ಕೆ ಜನರ ಪ್ರಶ್ನೆಗಳು ಇಷ್ಟವಿಲ್ಲ ಎಂದ ಮಾತ್ರಕ್ಕೆ ಪ್ರಶ್ನೆಗಳ ಮಹತ್ವ ಕಡಿಮೆಯಾಗುವುದಿಲ್ಲ. ಅಧಿಕಾರ ಸಿಕ್ಕ ತಕ್ಷಣ ಜನರ ಧ್ವನಿಯೇ ಅನಗತ್ಯವೆಂದು ಭಾವಿಸುವುದು ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧ. ಜನರು ತಮ್ಮ ಬೇಡಿಕೆಗಳನ್ನು ಮುಂದಿಡುವಾಗ ಅವುಗಳನ್ನು ಆಲಿಸುವುದು ಸರಕಾರದ ಕರ್ತವ್ಯ. ಸಮಸ್ಯೆಗಳಿಗೆ ಪರಿಹಾರ ಹುಡುಕಿ ತನ್ನ ಕ್ರಮಗಳಿಗೆ ಸಮಂಜಸವಾದ ವಿವರಣೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರತಿಭಟನಾಕಾರರನ್ನು ನಿಗ್ರಹಿಸುವುದು ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶಕ್ಕೆ ಒಳ್ಳೆಯದಲ್ಲ. ಕ್ರಮ ಕೈಗೊಂಡಿದ್ದರೆ, ಅದರ ಕಾನೂನುಬದ್ಧತೆ, ಅಗತ್ಯತೆ ಮತ್ತು ಬದ್ಧತೆಯ ಕುರಿತು ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು. ಶಾಂತಿಯುತ ಪ್ರತಿಭಟನೆಯ ಹಕ್ಕು ಕುಂಠಿತವಾಗಬಾರದು. ಅದು ಅಧಿಕಾರವನ್ನು ಪ್ರಶ್ನಿಸುವವರ ವಿರುದ್ಧದ ಆಯುಧವಾಗಬಾರದು. ಪ್ರತಿಭಟನೆಯ ಹಕ್ಕು ದುರ್ಬಲಗೊಂಡರೆ, ನಾಳೆ ನಮ್ಮೆಲ್ಲರ ಅಭಿವ್ಯಕ್ತಿ ಸ್ವಾತಂತ್ರ್ಯವೇ ಪರೀಕ್ಷೆಗೆ ಒಳಗಾಗಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ದಿಲ್ಲಿಯ ಬೀದಿಗಳಲ್ಲಿ ಎದ್ದಿರುವ ಪ್ರಶ್ನೆಗಳಿಗೆ ಉತ್ತರಬೇಕು. ಪೊಲೀಸ್ ವಶಕ್ಕೆ ಪಡೆಯುವ ಕ್ರಮಗಳು ನಡೆದಿದ್ದರೆ ಅವುಗಳ ಕಾನೂನುಬದ್ಧತೆಯ ಬಗ್ಗೆ ಪಾರದರ್ಶಕತೆಬೇಕು. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿಗೆ ರಕ್ಷಣೆಬೇಕು. ಜನರ ಧ್ವನಿಯನ್ನು ಮೌನಗೊಳಿಸಲು ಸಾಧ್ಯವಿಲ್ಲ. ಅವರ ಧ್ವನಿಯನ್ನು ಆಲಿಸಿ, ಭಿನ್ನಮತವನ್ನು ಗೌರವಿಸಿ, ಹಕ್ಕುಗಳನ್ನು ರಕ್ಷಿಸುವುದೇ ಪ್ರಜಾಪ್ರಭುತ್ವದ ನಿಜವಾದ ಪರೀಕ್ಷೆ ಎಂದು ಆನಂದ್‍ಕುಮಾರ್ ಹೇಳಿದ್ದಾರೆ.

Tags

Anand KumarGovernment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X