Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಮರ್ಥ ಪ್ರಜಾಪ್ರಭುತ್ವವು ಪ್ರಜೆಗಳಿಗೆ...

ಸಮರ್ಥ ಪ್ರಜಾಪ್ರಭುತ್ವವು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸಲು ಅವಕಾಶ ನೀಡಬೇಕು : ಸಿಎಂ ಡಿ ಕೆ ಶಿವಕುಮಾರ್ ಕರೆ

"ಅಭಿವೃದ್ಧಿಯನ್ನು ಪ್ರಜೆಗಳ ಘನತೆ, ಸ್ವಾತಂತ್ರ್ಯ, ಸಮಾನತೆ ಮತ್ತು ಭದ್ರತೆಯ ಮೂಲಕ ಅಳೆಯಬೇಕು."

ವಾರ್ತಾಭಾರತಿವಾರ್ತಾಭಾರತಿ17 Oct 2026 3:00 PM IST
share
ಸಮರ್ಥ ಪ್ರಜಾಪ್ರಭುತ್ವವು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸಲು ಅವಕಾಶ ನೀಡಬೇಕು : ಸಿಎಂ ಡಿ ಕೆ ಶಿವಕುಮಾರ್ ಕರೆ

ಬೆಂಗಳೂರು, ಅ.16: “ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸಲು, ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ಪ್ರತಿಯೊಬ್ಬ ಪ್ರಜೆಗೂ ನ್ಯಾಯ ಸಿಗುವಂತೆ ಮಾಡಲು ಎಂದಿಗೂ ಪ್ರಶ್ನಿಸುವುದನ್ನು ನಿಲ್ಲಿಸಬೇಡಿ, ನಿಮ್ಮ ಮೌಲ್ಯಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಬೇಡಿ ಮತ್ತು ಜನರನ್ನು ಎಂದಿಗೂ ಮರೆಯಬೇಡಿ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು.

ಶನಿವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) 34ನೇ ಪದವಿ ಪ್ರದಾನ ಸಮಾರಂಭದಲ್ಲಿ ಪದವಿ ಪಡೆಯುತ್ತಿರುವ ಕಾನೂನು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರಶ್ನಿಸುವುದನ್ನು ಎಂದಿಗೂ ನಿಲ್ಲಿಸಬೇಡಿ

“ಸಮರ್ಥ ಪ್ರಜಾಪ್ರಭುತ್ವವು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸಲು ಅವಕಾಶ ನೀಡಬೇಕು. ವಿಶ್ವದಾದ್ಯಂತ ಪ್ರಜಾಪ್ರಭುತ್ವ ಸಂಸ್ಥೆಗಳು ಸವಾಲುಗಳನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಸಂವಿಧಾನವನ್ನು ರಕ್ಷಿಸುವ ವಿಶೇಷ ಜವಾಬ್ದಾರಿ ಯುವ ವಕೀಲರು ಮತ್ತು ನೀತಿ ನಿರೂಪಕರ ಮೇಲಿದೆ. ಎಲ್ಲರೂ ಸರ್ಕಾರದೊಂದಿಗೆ ಸಮ್ಮತಿಸುವುದೇ ಸಶಕ್ತ ಪ್ರಜಾಪ್ರಭುತ್ವವಲ್ಲ. ಪ್ರತಿಯೊಬ್ಬ ಪ್ರಜೆಗೂ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯವಿರುವುದೇ ನಿಜವಾದ ಸಶಕ್ತ ಪ್ರಜಾಪ್ರಭುತ್ವ” ಎಂದು ಅಭಿಪ್ರಾಯಪಟ್ಟರು.

“ಪದವೀಧರರು ವಿಚಾರಗಳನ್ನು ಪ್ರಶ್ನಿಸಬೇಕು, ಚರ್ಚಿಸಬೇಕು ಮತ್ತು ಸವಾಲು ಹಾಕಬೇಕು. ಅದೇ ಸಮಯದಲ್ಲಿ ಪರಿಹಾರಗಳನ್ನು ಕಂಡುಕೊಳ್ಳುವ ಜವಾಬ್ದಾರಿಯನ್ನೂ ತೆಗೆದುಕೊಳ್ಳಬೇಕು. ಸಾಂವಿಧಾನಿಕ ತತ್ವಗಳು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ ಆಡಳಿತ, ನೀತಿ ನಿರೂಪಣೆ ಮತ್ತು ಸಾರ್ವಜನಿಕ ಜೀವನಕ್ಕೆ ಮಾರ್ಗದರ್ಶನ ನೀಡಬೇಕು” ಎಂದು ಅವರು ಹೇಳಿದರು.

"ಭಾರತಕ್ಕೆ ಕೇವಲ ಹೆಚ್ಚಿನ ಸಂಖ್ಯೆಯ ವಕೀಲರ ಅಗತ್ಯವಿಲ್ಲ. ನಮಗೆ ಪ್ರಾಮಾಣಿಕತೆ, ಕರುಣೆ ಮತ್ತು ಧೈರ್ಯವಿರುವ ವಕೀಲರ ಅಗತ್ಯವಿದೆ. ಎಷ್ಟೇ ಕಷ್ಟಕರವಾಗಿದ್ದರೂ ಸಾಮಾನ್ಯ ಜನರ ಸಂಕಷ್ಟಗಳನ್ನು ಅರ್ಥಮಾಡಿಕೊಂಡು ಸರಿಯಾದದ್ದಕ್ಕಾಗಿ ಧ್ವನಿ ಎತ್ತಬೇಕು” ಎಂದು ಕಾನೂನು ಪದವೀಧರರಿಗೆ ಮನವಿ ಮಾಡಿದರು.

ನ್ಯಾಯಾಂಗ ಸೇವಾ ಪರೀಕ್ಷೆಯ ತರಬೇತಿಗಾಗಿ ಪ್ರತ್ಯೇಕ ಸಂಸ್ಥೆ, NLSIU ನಲ್ಲಿ ಸ್ಟಾರ್ಟ್-ಅಪ್ ಲಾ ಕ್ಲಿನಿಕ್ ಸ್ಥಾಪನೆ

“ಕರ್ನಾಟಕ ಸರ್ಕಾರವು ಕಾನೂನು ಪದವೀಧರರಿಗೆ ನ್ಯಾಯಾಂಗ ಸೇವಾ ಪರೀಕ್ಷೆಗಳಿಗೆ ತರಬೇತಿ ನೀಡಲು ಮತ್ತು ಯುವ ವಕೀಲರಿಗೆ ನಿರಂತರ ಶಿಕ್ಷಣವನ್ನು ಒದಗಿಸಲು ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲಿದೆ. ಅಲ್ಲದೆ, NLSIU ನಲ್ಲಿ 'ಸ್ಟಾರ್ಟ್-ಅಪ್ ಲಾ ಕ್ಲಿನಿಕ್' ಸ್ಥಾಪನೆಗೆ ಸರ್ಕಾರ ಬೆಂಬಲ ನೀಡಲಿದ್ದು, ಇಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ವಕೀಲರು ಯುವ ಉದ್ಯಮಿಗಳಿಗೆ ಉಚಿತ (ಪ್ರೋ ಬೋನೊ) ಕಾನೂನು ಸಲಹೆಯನ್ನು ನೀಡಲಿದ್ದಾರೆ” ಎಂದು ತಿಳಿಸಿದರು.

“ನ್ಯಾಯಾಂಗದಲ್ಲಿ ಪ್ರಕರಣಗಳು ಬಾಕಿ ಉಳಿಯುತ್ತಿರುವ ಸವಾಲಿನ ಕುರಿತು ಪ್ರಸ್ತಾಪಿಸಿದ ಅವರು, ಭಾರತೀಯ ನ್ಯಾಯಾಲಯಗಳ ಮುಂದೆ ಕೋಟಿಗಟ್ಟಲೆ ಪ್ರಕರಣಗಳು ಬಾಕಿಯಿದ್ದು, ವ್ಯಕ್ತಿಗಳು ಮತ್ತು ಕುಟುಂಬಗಳು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ನಮಗೆ ಅದು ಕೇವಲ ಇನ್ನೊಂದು ಪ್ರಕರಣದ ಸಂಖ್ಯೆಯಾಗಿರಬಹುದು. ಆದರೆ ಆ ವ್ಯಕ್ತಿಗೆ ಅದು ಅವರ ಜೀವನವೇ ಆಗಿರಬಹುದು. ನ್ಯಾಯವನ್ನು ವೇಗವಾಗಿ, ಸರಳವಾಗಿ, ಕೈಗೆಟುಕುವಂತೆ ಮತ್ತು ಎಲ್ಲರಿಗೂ ಸಿಗುವಂತೆ ಮಾಡುವುದು ಅಗತ್ಯ” ಎಂದು ಸಲಹೆ ನೀಡಿದರು.

ಅಭಿವೃದ್ಧಿಯನ್ನು ಪ್ರಜೆಗಳ ಘನತೆ, ಸ್ವಾತಂತ್ರ್ಯ, ಸಮಾನತೆ ಮತ್ತು ಭದ್ರತೆಯ ಮೂಲಕ ಅಳೆಯಬೇಕು

“2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿ ಇದೆ. ಅಭಿವೃದ್ಧಿಯನ್ನು ಕೇವಲ ಆರ್ಥಿಕ ಬೆಳವಣಿಗೆ, ಮೂಲಸೌಕರ್ಯ ಮತ್ತು ಉದ್ಯೋಗದ ಮೂಲಕ ಅಳೆಯಬಾರದು, ಬದಲಿಗೆ ಪ್ರಜೆಗಳ ಘನತೆ, ಸ್ವಾತಂತ್ರ್ಯ, ಸಮಾನತೆ ಮತ್ತು ಭದ್ರತೆಯ ಮೂಲಕ ಅಳೆಯಬೇಕು. ತರಗತಿಗಳಿಂದ ಆಚೆಗೆ ನೋಡಿ ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಸಾಮಾನ್ಯ ಕುಟುಂಬಗಳು ಎದುರಿಸುತ್ತಿರುವ ಸವಾಲುಗಳನ್ನು ಅರ್ಥಮಾಡಿಕೊಳ್ಳುವಂತೆ ಅವರು ಕಾನೂನು ಪದವೀಧರರಿಗೆ” ಕಿವಿಮಾತು ಹೇಳಿದರು.

"ಶಿಕ್ಷಣದ ನೈಜ ಉದ್ದೇಶ ಕೇವಲ ನಿಮ್ಮ ಸ್ವಂತ ಭವಿಷ್ಯವನ್ನು ರೂಪಿಸಿಕೊಳ್ಳುವುದು ಮಾತ್ರವಲ್ಲ, ಇತರರ ಜೀವನವನ್ನು ಉತ್ತಮಗೊಳಿಸುವುದು ಕೂಡ ಹೌದು. ಮುಂದಿನ ಐದು ದಶಕಗಳಲ್ಲಿ ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ಯುವಜನತೆ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನ ಶಿಲ್ಪಿಗಳ ಆದರ್ಶಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸೌಹಾರ್ದತೆಗಳು ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯಗಳಾಗಿವೆ” ಎಂದು ಬಣ್ಣಿಸಿದರು.

"ಭಾರತದ ಹಿರಿಮೆಯನ್ನು, ನಾವು ಎಷ್ಟು ಬೆಳೆಯುತ್ತೇವೆ ಎಂಬುದರಿಂದ ಮಾತ್ರವಲ್ಲ, ನಾವು ಎಷ್ಟು ನ್ಯಾಯಯುತವಾಗಿ ಬೆಳೆಯುತ್ತೇವೆ ಎಂಬುದರಿಂದ ಅಳೆಯಲಾಗುತ್ತದೆ. ತಮ್ಮ ಯಶಸ್ಸನ್ನು ತಾವು ಸುಧಾರಿಸುವ ಜೀವನಗಳು ಮತ್ತು ರಕ್ಷಿಸುವ ಹಕ್ಕುಗಳ ಆಧಾರದ ಮೇಲೆ ಅಳೆಯಬೇಕು” ಎಂದು ಕಿವಿಮಾತು ಹೇಳಿದರು.

“ಪದವಿ ಪಡೆದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಅಭಿನಂದಿಸುವೆ. ತಾವು ಕೂಡ ಒಮ್ಮೆ ವಕೀಲರಾಗಬೇಕೆಂದು ಬಯಸಿದ್ದೆ. ಆದರೆ, ವಿದ್ಯಾರ್ಥಿಯಾಗಿದ್ದಾಗಲೇ ಪಕ್ಷದ ಟಿಕೆಟ್ ದೊರೆತಿದ್ದರಿಂದ ರಾಜಕೀಯವು ತಮ್ಮನ್ನು ಸಾರ್ವಜನಿಕ ಜೀವನಕ್ಕೆ ಕರೆತಂದಿತು” ಎಂದು ತಮ್ಮ ನೆನಪು ಮೆಲುಕು ಹಾಕಿದರು.

ಈ ಪದವಿ ಪ್ರದಾನ ಸಮಾರಂಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಹಾಗೂ NLSIU ನ ಕುಲಾಧಿಪತಿಗಳಾದ ನ್ಯಾಯಮೂರ್ತಿ ಸೂರ್ಯ ಕಾಂತ್, ಮುಖ್ಯ ಅತಿಥಿ ಅರುಂಧತಿ ನಾಗ್, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟಿನ ನ್ಯಾಯಮೂರ್ತಿಗಳು, NLSIU ಕುಲಪತಿ ಡಾ. ಸುಧೀರ್ ಕೃಷ್ಣಸ್ವಾಮಿ, ಅಧ್ಯಾಪಕರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X