Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಿದ್ವಾಯಿ ಆಸ್ಪತ್ರೆಯಲ್ಲಿ ಸಾವಿರ...

ಕಿದ್ವಾಯಿ ಆಸ್ಪತ್ರೆಯಲ್ಲಿ ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ

‘ಕ್ಯಾನ್ಸರ್ ರೋಗಿಗಳಿಗೆ ಕೈಗೆಟಕುವ ಬೆಲೆಯಲ್ಲಿ ಚಿಕಿತ್ಸೆ ನೀಡುವುದೇ ಧ್ಯೇಯ’

ವಾರ್ತಾಭಾರತಿವಾರ್ತಾಭಾರತಿ24 Jan 2025 9:39 PM IST
share
ಕಿದ್ವಾಯಿ ಆಸ್ಪತ್ರೆಯಲ್ಲಿ ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ

ಬೆಂಗಳೂರು : ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಇತಿಹಾಸ ಸೃಷ್ಟಿಸಿದೆ.

ಮೊದಲ ಬಾರಿಗೆ ರೋಬೊಟಿಕ್ ಯಂತ್ರ ಅಳವಡಿಕೆ ಮಾಡಿಕೊಂಡ ಏಕೈಕ ಆಸ್ಪತ್ರೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಾಗಿದೆ. ಅತ್ಯಾಧುನಿಕ ಡಾ.ವಿನ್ಸಿ ರೋಬೊಟಿಕ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಇದುವರೆಗೆ 1 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ವಿಶೇಷ ಮೈಲುಗಲ್ಲು ಸಾಧಿಸಿದೆ. ಸರಕಾರಿ ಸಂಸ್ಥೆಗಳ ಪೈಕಿ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಮಾತ್ರ ರೋಬೋಟಿಕ್ ಸರ್ಜರಿ ಸೌಕರ್ಯ ಇರುವುದು ಹೆಗ್ಗಳಿಕೆ.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಹಲವು ಸಾಧನೆಗಳನ್ನು ಮಾಡುವಲ್ಲಿ ದಾಪುಗಾಲಿಡುತ್ತಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಹೆಚ್ಚು ಚಿಕಿತ್ಸೆ ನೀಡಿದ ಆಸ್ಪತ್ರೆಯಾಗಿ ಹೊರಹೊಮ್ಮಿದೆ. ಒಳರೋಗಿಗಳಿಗೆ ಹೆಚ್ಚು ಚಿಕಿತ್ಸೆ ನೀಡಿದ ಏಕೈಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎಂಬ ಗೌರವಕ್ಕೂ ಕಿದ್ವಾಯಿ ಸಂಸ್ಥೆ ಪಾತ್ರವಾಗಿದೆ. ರಾಜ್ಯದಲ್ಲೇ ಏಕೈಕ ಬೋನ್ ಮ್ಯಾರೋ(ಅಸ್ತಿಮಜ್ಜೆ ಶಸ್ತ್ರ ಚಿಕಿತ್ಸಾ) ಘಟಕ ಕಿದ್ವಾಯಿಯಲ್ಲಿ ಇದ್ದು, ಅಲೋಜೆನಿಕ್, ಆಟೋಲೋಗಸ್ ಅಸ್ತಿಮಜ್ಜೆ ಕಸಿ ಚಿಕಿತ್ಸೆ ಯಶಸ್ವಿಗೊಳಿಸಲಾಗಿದೆ.

ಕಿದ್ವಾಯಿ ಸಂಸ್ಥೆಯಲ್ಲಿ ರೋಗಿಗಳಿಗೆ ಅನುಕೂಲವಾಗಲು ಕೆಸಿಡಿಎಫ್ ಔಷಧಿ ಮಳಿಗೆ 24ಗಂಟೆಯೂ ಔಷಧ ಮಳಿಗೆ ತೆರೆಯಲಾಗಿದೆ. ಕೆಎಸ್ಸಾರ್ಟಿಸಿ ನೌಕರರಿಗೆ ಕ್ಯಾಷ್ಲೆ‌ಸ್ ಚಿಕಿತ್ಸೆ ನೀಡಲೂ ತೀರ್ಮಾನಿಸಲಾಗಿದೆ. ಬಿಪಿಎಲ್ ಸೌಲಭ್ಯ ಇಲ್ಲದ ಕುಟುಂಬಗಳಿಗೆ ಹಾಗೂ ಹಣದ ಸಮಸ್ಯೆ ಇರುವವರಿಗೆ ಚಿಕಿತ್ಸಾ ವೆಚ್ಚ ಕಡಿಮೆ ಮಾಡಲು ಪ್ರತ್ಯೇಕ ಸಮಿತಿ ರಚಿಸಲಾಗಿದೆ.

ಏನಿದು ಡಾ.ವಿಂಚಿ ಸರ್ಜಿಕಲ್ ಸಿಸ್ಟಮ್? :

ಅಮೆರಿಕಾದ ಇನ್ಸಿಟ್ಯೂಟ್ ಸರ್ಜಿಕಲ್ ರಿಸರ್ಚ್ ಸಂಸ್ಥೆಯು ಡಾ.ವಿಂಚಿ ಸರ್ಜಿಕಲ್ ಸಿಸ್ಟಮ್ ರೋಬೊಟಿಕ್ ಯಂತ್ರವನ್ನು ಅಭಿವೃದ್ಧಿಪಡಿಸಿದೆ. ಡಾ.ವಿಂಚಿ ಎಕ್ಸ್‍ಐ ಎಂಬುದು ಸುಧಾರಿತ ಆವೃತ್ತಿಯಾಗಿದೆ. ಈ ಯಂತ್ರವನ್ನು ಕಿದ್ವಾಯಿ ಸಂಸ್ಥೆಯಲ್ಲಿ ಅಳವಡಿಸಲಾಗಿದೆ. ಈ ಯಂತ್ರದಲ್ಲಿ ಸರ್ಜನ್ ಕನ್ಸೋಲ್, ಪೇಷಂಟ್ ಕಾರ್ಟ್, ವಿಷನ್ ಕಾರ್ಟ್ ಎಂಬ ವಿಭಾಗಗಳಿವೆ. ಪೇಷಂಟ್ ಕಾರ್ಟ್ ಯಂತ್ರವನ್ನು ಬಳಸಿ ರೋಗಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಹೇಗೆ ಶಸ್ತ್ರ ಚಿಕಿತ್ಸೆ ಮಾಡಬೇಕೆಂಬ ಸೂಚನೆಗಳನ್ನು ಸರ್ಜನ್ ಕನ್ಸೋಲ್‍ನಲ್ಲಿ ಕುಳಿತ ವೈದ್ಯರು ನೀಡುತ್ತಾರೆ. ವೈದ್ಯರ ಸೂಚನೆ ಮೇರೆಗೆ ಪೇಷಂಟ್ ಕಾರ್ಟ್ ಯಂತ್ರವು ಕಾರ್ಯ ನಿರ್ವಹಿಸುತ್ತದೆ. ಶಸ್ತ್ರ ಚಿಕಿತ್ಸೆಯ ಪ್ರತಿಯೊಂದು ಮಾಹಿತಿಯೂ ವಿಷನ್ ಕಾರ್ಟ್‍ನಲ್ಲಿ ದಾಖಲಾಗುತ್ತದೆ. ಎಲ್‍ಇಡಿ ಪರದೆಯಲ್ಲಿ ಕಾಣಿಸುತ್ತದೆ. ಪೇಷಂಟ್ ಕಾರ್ಟ್ ಯಂತ್ರವನ್ನು ರೋಗಿಯ ದೇಹದ ನಿರ್ದಿಷ್ಟ ಭಾಗದಲ್ಲಿ ಇಡಲಾಗುತ್ತದೆ. ಈ ಯಂತ್ರದಲ್ಲಿರುವ ಕೈಗಳ ಸಹಾಯದಿಂದ ಸಣ್ಣ ರಂಧ್ರಗಳನ್ನು ಕೊರೆಯಲಾಗುತ್ತದೆ. ಈ ರಂಧ್ರಗಳ ಮೂಲಕ ದೇಹಕ್ಕೆ ಸ್ಟೀಲ್ ರಾಡ್‍ಗಳನ್ನು ಅಳವಡಿಸಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ.

ಸಚಿವ ಪಾಟೀಲ್ ಶ್ಲಾಘನೆ :

‘ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1ಸಾವಿರ ರೋಬೊಟಿಕ್ ಶಸ್ತ್ರ ಚಿಕಿತ್ಸೆ ಪೂರೈಸಿರುವುದು ಶ್ಲಾಘನೀಯ. ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಉಚಿತ ಚಿಕಿತ್ಸೆ ಹಾಗೂ ಕೈಗೆಟುಕುವ ಬೆಲೆಯಲ್ಲಿ ವಿಶ್ವದರ್ಜೆಯ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯು ನೂತನ ವೈದ್ಯಕೀಯ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ರೋಗಿಗಳಿಗೆ ರೋಬೊಟಿಕ್ ತಂತ್ರಜ್ಞಾನದಿಂದ 9ವರ್ಷದಲ್ಲಿ 1ಸಾವಿರ ಶಸ್ತ್ರ ಚಿಕಿತ್ಸೆ ನೀಡಿರುವುದು ಇತಿಹಾಸ. ರೋಗಿಗಳ ಆರೈಕೆಯಲ್ಲಿ ಕಿದ್ವಾಯಿ ಸಂಸ್ಥೆ ವಿಶ್ವಮಟ್ಟದಲ್ಲಿ ಹಾಗೂ ದೇಶದಲ್ಲಿಯೆ ಭಾರತದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ’

-ಶರಣ್ ಪ್ರಕಾಶ್ ಪಾಟೀಲ್ ವೈದ್ಯಕೀಯ ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X