Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಯೂನಿಟ್ ವಿದ್ಯುತ್ ಉಳಿತಾಯ ಎರಡು...

ಯೂನಿಟ್ ವಿದ್ಯುತ್ ಉಳಿತಾಯ ಎರಡು ಯೂನಿಟ್‌ಗಳ ಉತ್ಪಾದನೆಗೆ ಸಮ : ಕ್ರೆಡಲ್ ಎಂಡಿ ರುದ್ರಪ್ಪಯ್ಯ

ಇಂಧನ ಸಂರಕ್ಷಣೆ ಕುರಿತು ಚಿತ್ರ ಬಿಡಿಸಿದ ಸರಕಾರಿ ಶಾಲೆ ಮಕ್ಕಳು

ವಾರ್ತಾಭಾರತಿವಾರ್ತಾಭಾರತಿ24 Dec 2024 9:28 PM IST
share
Photo of Program

ಬೆಂಗಳೂರು : ಒಂದು ಯೂನಿಟ್ ವಿದ್ಯುತ್ ಉಳಿತಾಯ ಎರಡು ಯೂನಿಟ್ಗಳ ಉತ್ಪಾದನೆಗೆ ಸಮ ಎಂದು ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ತಿಳಿಸಿದರು.

ಮಂಗಳವಾರ ಇಲ್ಲಿನ ನಾಗರಬಾವಿಯ ಕ್ರೆಡಲ್ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆಯಲ್ಲಿ ಪಾಲ್ಗೊಂಡು, ಹೆಗ್ಗನಹಳ್ಳಿ ಸರಕಾರಿ ಪ್ರೌಢಶಾಲೆಯ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದ ಇಂಧನ ಸಚಿವಾಲಯದ ಅಡಿ ಕಾರ್ಯ ನಿರ್ವಹಿಸುವ ‘ಇಂಧನ ದಕ್ಷತೆಯ ಬ್ಯೂರೋ'(ಬಿಇಇ), ಇಂಧನ ಸಂರಕ್ಷಣೆ ಮತ್ತು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಸಾರುವ ಉದ್ದೇಶದಿಂದ ಎಲ್ಲ ರಾಜ್ಯಗಳಲ್ಲಿ ಇಂಧನ ಇಲಾಖೆ ವತಿಯಿಂದ ಸಪ್ತಾಹದ ಆಚರಣೆಯನ್ನು ಕಡ್ಡಾಯಗೊಳಿಸಿದೆ.

ಇಂಧನ ಸಂರಕ್ಷಣಾ ಸಪ್ತಾಹದ ಸಂದರ್ಭದಲ್ಲಿ ಇಂಧನ ಬಳಕೆಯ ಪ್ರಮಾಣ ತಗ್ಗಿಸುವುದು, ಇಂಧನದ ದಕ್ಷ ಬಳಕೆಯನ್ನು ಉತ್ತೇಜಿಸುವುದು ಮತ್ತು ರಾಜ್ಯದಲ್ಲಿ ಸುಸ್ಥಿರ ಅಭ್ಯಾಸಗಳನ್ನು ಬೆಳೆಸುವ ಬಗ್ಗೆ ರಾಜ್ಯದ ನೋಡಲ್ ಏಜೆನ್ಸಿಯಾದ ಕ್ರೆಡಲ್ ಜಾಗೃತಿ ಮೂಡಿಸಲಿದೆ. ನಾವೆಲ್ಲರೂ ತಿಳಿದು, ಪಾಲಿಸಲೇಬೇಕಾದ ಸಂಗತಿ ಎಂದರೆ, ಒಂದು ಯೂನಿಟ್ ವಿದ್ಯುತ್ ಉಳಿತಾಯ ಎರಡು ಯೂನಿಟ್ಗಳ ಉತ್ಪಾದನೆಗೆ ಸಮ ಎಂದರು.

ಇಂಧನ ಸಂರಕ್ಷಣೆ ಹಾಗೂ ಇಂಧನ ದಕ್ಷತೆ ಮನೆಯಿಂದಲೇ ಆರಂಭವಾಗಬೇಕು. ಯಾರು ಇಲ್ಲದ ಸಮಯದಲ್ಲಿ ಕೊಠಡಿಯ ಫ್ಯಾನ್, ದೀಪ ಆರಿಸಬೇಕು. ಬಿಎಸ್ಇ 5 ಸ್ಟಾರ್ ರೇಟೆಡ್ನ ಎಸಿ, ಫ್ರಿಡ್ಜ್, ಫ್ಯಾನ್ ಹಾಗೂ ಇತರ ವಿದ್ಯುತ್ ಉಪಕರಣಗಳನ್ನು ಬಳಸಿ. ಸಾಧ್ಯವಾದಷ್ಟು ಸಮೂಹ ಸಾರಿಗೆ ಬಳಿಸಿ. ಮನೆಯಲ್ಲಿ ಮಕ್ಕಳು ಜಾಗೃತರಾದರೆ, ಮನೆಯ ಎಲ್ಲರಿಗೂ ಅರಿವು ಮೂಡಿಸಿದಂತೆ ಆಗುವುದು. ಇಂಧನ ಸಂರಕ್ಷಣೆ ಬಗ್ಗೆ ಪೋಷಕರಿಗೆ ತಿಳಿಸಬೇಕು, ಎಂದು ಅವರು ಮನವಿ ಮಾಡಿದರು.

ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನೇತೃತ್ವ ಹಾಗೂ ಕ್ರೆಡಲ್ ಅಧ್ಯಕ್ಷರ ಮಾರ್ಗದರ್ಶನದಲ್ಲಿ ಇಂಧನ ಸಂರಕ್ಷಣಾ ದಿನ ಆಚರಿಸಲಾಗುತ್ತಿದೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾರ ಪೋತ್ಸಾಹದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದೆ. ಚಿತ್ರ ಬಿಡಿಸುವ ಸ್ಪರ್ಧೆಯ ಅತ್ಯುತ್ತಮ ಚಿತ್ರವನ್ನು ಇಂಧನ ಸಚಿವರಿಗೆ ಕೊಡುಗೆಯಾಗಿ ನೀಡಲಾಗುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಇಂಧನ ಸಂರಕ್ಷಣೆ ಕುರಿತು ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಮಕ್ಕಳಿಗಿರುವ ಆಸಕ್ತಿ ನಿಬ್ಬೆರಗು ಮೂಡಿಸಿತು. ಸರಕಾರಿ ಶಾಲೆಯ ಮಕ್ಕಳಿಗಿರುವ ಶಿಸ್ತು, ಸೃಜನಶೀಲತೆ ಹಾಗೂ ಜಾಣ್ಮೆಗೆ ಸರಿಸಾಟಿ ಇಲ್ಲ. ಅವರ ಆಗಮನದಿಂದ ಇಡೀ ಕ್ರೆಡಲ್ ಕಚೇರಿ ಇಂದು ಕಳೆ ಕಟ್ಟಿದೆ. ಚಿತ್ರಸ್ಪರ್ಧೆಯಲ್ಲಿ ತೀರ್ಪುಗಾರರು ಆಯ್ಕೆ ಮಾಡಿದ ಅತ್ಯುತ್ತಮ ಚಿತ್ರಕ್ಕೆ ಮೊದಲ ಬಹುಮಾನವಾಗಿ 5 ಸಾವಿರ, ಎರಡನೆ ಬಹುಮಾನ 3ಸಾವಿರ ರೂ., ಮೂರನೆ ಬಹುಮಾನವಾಗಿ 2ಸಾವಿರ ರೂ. ಹಾಗೂ 7 ಸಮಾಧಾನಕರ ಚಿತ್ರಗಳಿಗೆ ತಲಾ 1 ಸಾವಿರ ರೂ.ನೀಡಲಾಯ್ತು. ಇಂಧನ ದಕ್ಷತೆಗಾಗಿ ಎಲ್ಇಡಿ ಬಲ್ಬ್ ಗಳನ್ನು ಬಳಸಬೇಕು ಎಂಬ ಸಂದೇಶ ಸಾರಲು ವಿದ್ಯಾರ್ಥಿಗಳಿಗೆ ಬಲ್ಬ್ ವಿತರಿಸಲಾಗಿದೆ ಎಂದರು.

ಕೆಎಸ್ಪಿಡಿಸಿಎಲ್ ಸಿಇಓ ಅಮರನಾಥ್, ಕ್ರೆಡಲ್ನ ಪ್ರಧಾನ ವ್ಯವಸ್ಥಾಪಕ ಜಗದೀಶ ಬೆಳಗಲಿ, ಉಪ ಪ್ರಧಾನ ವ್ಯವಸ್ಥಾಪಕ ಶ್ರೀನಾಥ್, ಕ್ರೆಡಲ್ನ ಹಿರಿಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

‘ಡಿ.14ರಿಂದ 20ರ ವರೆಗೆ ಇಂಧನ ಸಂರಕ್ಷಣೆ ಸಪ್ತಾಹ ಆಚರಿಸಲಾಗುತ್ತದೆ. ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಕ್ರೆಡಲ್ನಲ್ಲಿ ಇಂದು ಸಂರಕ್ಷಣಾ ದಿನಾಚರಣೆ ಆಚರಿಸಲಾಗಿದೆ. ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆಯ ಕುರಿತು ಅರಿವು ಮೂಡಿಸುವ ಅಭಿಯಾನ ಇದಾಗಿದ್ದು, ಶಾಲಾ ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನಮ್ಮ ಇಲಾಖೆ ವತಿಯಿಂದ ವಾಕಥಾನ್ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಸ್ಪರ್ಧೆಗಳು ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸಲಾಗಿದೆ. ಈ ಮೂಲಕ ಭವಿಷ್ಯದ ಪೀಳಿಗೆಗೆ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಲು ಪ್ರೇರೇಪಿಸಲಾಗುತ್ತದೆ’

-ಕೆ.ಜೆ.ಜಾರ್ಜ್ ಇಂಧನ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X