ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತ; ಸಿನಿಮೀಯ ರೀತಿಯಲ್ಲಿ ಕಾರಿನಡಿಗೆ ನುಗ್ಗಿದ ಮತ್ತೊಂದು ಕಾರು

ಬೆಂಗಳೂರು : ಇಲ್ಲಿನ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‍ವೇಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಸಿನಿಮೀಯ ರೀತಿಯಲ್ಲಿ ಕಾರುಗಳು ಒಂದರ ಮೇಲೊಂದು ಏರಿ ನಿಂತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ರವಿವಾರ ಇಲ್ಲಿನ ಚನ್ನಪಟ್ಟಣ ತಾಲೂಕಿನ ಕಣ್ವ ರಸ್ತೆ ಬಳಿ ಘಟನೆ ನಡೆದಿದ್ದು, ಹೆದ್ದಾರಿಯಲ್ಲಿ ಸಿಬ್ಬಂದಿ ಬ್ಯಾರಿಕೇಡ್ ಹಾಕಿ ರಸ್ತೆ ಕ್ಲೀನ್ ಮಾಡುತ್ತಿದ್ದಾಗ ಏಕಾಏಕಿಬಂದ ಕಾರು ಚಾಲಕ ಬ್ರೇಕ್ ಹಾಕಿದ್ದು, ಈ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಢಿಕ್ಕಿ ಹೊಡೆದಿದೆ.
ಮುಂದೆ ನಿಂತಿದ್ದ ಕಾರಿನ ಕೆಳಗೆ ಹಿಂದಿನಿಂದ ಬಂದ ಕಾರು ನುಗ್ಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಸಿನಿಮೀಯ ರೀತಿಯಲ್ಲಿ ಕಾರುಗಳು ಒಂದರ ಮೇಲೊಂದು ಏರಿ ನಿಂತಿವೆ. ಘಟನೆ ಬಗ್ಗೆ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story







