ಬೆಂಗಳೂರು | ದ್ವಿಚಕ್ರ ವಾಹನಕ್ಕೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಡೆಲಿವರಿ ಬಾಯ್ ಮೃತ್ಯು

ಸಾಂದರ್ಭಿಕ ಚಿತ್ರ
ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಡೆಲಿವರಿ ಬಾಯ್ ಮೃತಪಟ್ಟಿರುವ ಘಟನೆ ಇಲ್ಲಿನ ಉಪ್ಪಾರಪೇಟೆ ಸಂಚಾರಿ poಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ನೀಲಸಂದ್ರದ ನಿವಾಸಿ ಮಹಮ್ಮದ್ ಅಜರ್ ಪಾಷಾ(19) ಮೃತಪಟ್ಟ ಡೆಲಿವರಿ ಬಾಯ್ ಎಂದು ಗುರುತಿಸಲಾಗಿದೆ. ಜು.5ರ ಶನಿವಾರ ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ಮಹಮ್ಮದ್ ಅಜರ್ ಪಾಷಾ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ನಗರದ ಕೆ.ಜಿ.ರಸ್ತೆಯ ಮೈಸೂರು ಬ್ಯಾಂಕ್ ಜಂಕ್ಷನ್ ಬಳಿ ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಮ್ಮದ್ ಗಂಭೀರ ಗಾಯಗೊಂಡರು. ಅವರನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರೂ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ವಿಷಯ ತಿಳಿದು ಉಪ್ಪಾರಪೇಟೆ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದು ಮುಂದಿನ ಕ್ರಮಕೈಗೊಂಡಿರುವುದಾಗಿ ತಿಳಿಸಿದ್ದಾರೆ.