Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸುಲಭವಾಗಿ ಸಿಗುತ್ತಿರುವ ನೋವು ನಿವಾರಕ...

ಸುಲಭವಾಗಿ ಸಿಗುತ್ತಿರುವ ನೋವು ನಿವಾರಕ ಮಾತ್ರೆಗಳ ನಿಯಂತ್ರಣಕ್ಕೆ ಕ್ರಮ: ಡಾ.ಜಿ.ಪರಮೇಶ್ವರ

'ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ; ನೋವು ನಿವಾರಕ ಮಾತ್ರೆಗಳಿಂದ ಆತಂಕ'

ವಾರ್ತಾಭಾರತಿವಾರ್ತಾಭಾರತಿ18 Sept 2024 11:45 AM IST
share
ಸುಲಭವಾಗಿ ಸಿಗುತ್ತಿರುವ ನೋವು ನಿವಾರಕ ಮಾತ್ರೆಗಳ ನಿಯಂತ್ರಣಕ್ಕೆ ಕ್ರಮ: ಡಾ.ಜಿ.ಪರಮೇಶ್ವರ

ಬೆಂಗಳೂರು, ಸೆ.18: ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. . ಈಗ ಮೆಡಿಕಲ್ ಶಾಪ್ ಗಳಲ್ಲಿ ಸಿಗುತ್ತಿರುವ ನೋವು ನಿವಾರಕ (Pain Killer) ಮಾತ್ರೆಗಳಿಂದ ನಮಗೆ ಆತಂಕವಿದೆ. ಸುಲಭವಾಗಿ ಕೈಗೆ ಸಿಗುತ್ತಿರುವ ಇದನ್ನು ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಭೆ ಕರೆದಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.

ಸದಾಶಿವ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ. ಆದರೆ ಈಗ ಮೆಡಿಕಲ್ ಶಾಪ್ ಗಳಲ್ಲಿ ಸುಲಭವಾಗಿ ಕೈಗೆ ಸಿಗುತ್ತಿರುವ ನೋವು ನಿವಾರಕ ಮಾತ್ರೆಗಳು ಆತಂಕಕಾರಿಯಾಗಿದೆ ಎಂದರು.

ನೋವು ನಿವಾರಕ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ವೈದ್ಯರು ಪ್ರಿಸ್ ಕ್ರೈಬ್ ಮಾಡಿರುವುನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್ ಕಂಟ್ರೋಲರ್ಸ್ ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದು ಗೃಹಸಚಿವರು ಹೇಳಿದರು.

ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ. ಎಲ್ಲ ರೀತಿಯ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸುಮಾರು ಪ್ರಕರಣಗಳಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

ನಾಗಮಂಗಲ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಬಗ್ಗೆ ಕೆಲವರು ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಮ್ಮ ಅಧಿಕಾರಿಗಳು ಹೇಳುತ್ತಿದ್ದಾರೆ. ಇದನ್ನು ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.

ನಾಗಮಂಗಲ ಪ್ರಕರಣದಲ್ಲಿ ತನಿಖೆಗೂ ಮುನ್ನ ಕ್ಲೀನ್ ಚಿಟ್ ಆರೋಪದ ಕುರಿತು ಪ್ರತಿಕ್ರಿಯಿಸಿ, ಇದನ್ನು ದೊಡ್ಡ ಸಮಸ್ಯೆ ಮಾಡುವ ನಿಟ್ಟಿನಲ್ಲಿ ಬಿಜೆಪಿಯವರು ಹೇಳಿಕೆ ನೀಡುತ್ತಿದ್ದಾರೆ. ನಾವು ಕಾನೂನು ಪ್ರಕಾರ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು, ಅದೆಲ್ಲವನ್ನು ಕೂಡ ಮುಲಾಜಿಲ್ಲದೆ ಮಾಡಿದ್ದೇವೆ. ಮುಂದಿನ ತನಿಖೆಯಲ್ಲಿ ಏನೆಲ್ಲ ವಿಚಾರಗಳು ಹೊರ ಬರುತ್ತವೆ, ಅದರ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ದಿನಕ್ಕೆ ಒಬ್ಬೊಬ್ಬರಂತೆ ಬಿಜೆಪಿ ಮುಖಂಡರು ನಾಗಮಂಗಲ ವಿಚಾರದಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಇದರಲ್ಲಿ ಬಿಜೆಪಿಯವರು ತಮ್ಮದೇ ಆದ ಒಂದು ಡಿಸೈನ್ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಮೂರು ಜಿಲ್ಲೆಗಳಲ್ಲಿ ಫೆಲೆಸ್ತೀನ್ ಧ್ವಜ ಹಾರಿಸಿರುವುದು ಕಂಡು ಬಂದಿದೆ. ಈ ಪ್ರಕರಣಗಳಲ್ಲಿ ಎಲ್ಲರನ್ನು ಬಂಧಿಸಲಾಗಿದೆ. 'ಕೇಂದ್ರ ಸರಕಾರ ಫೆಲೆಸ್ತೀನ್ ಗೆ ಬೆಂಬಲಿಸುತ್ತೇವೆ ಎಂದು ಹೇಳಿಕೆ ಕೊಟ್ಟಿದೆ. ಹೀಗಾಗಿ ಇದರಲ್ಲಿ ನಮ್ಮ ತಪ್ಪೇನಿದೆ ಎಂದು ವಾದಿಸಿದ್ದಾರೆ.' ಆದಾಗ್ಯೂ ಸಹ ಅವರನ್ನು ಬಂಧಿಸಿದ್ದೇವೆ. ಯಾರು ಈ ಸಂದರ್ಭದಲ್ಲಿ ನಿಮಗೆ ಪ್ರಚೋದನೆ ಮಾಡಿ, ಬಾವುಟ ಹಾರಿಸಲು ಹೇಳಿದರು ಎಂಬ ಕುರಿತು ಬಂಧಿತರ ವಿಚಾರಣೆ ನಡೆಯುತ್ತಿದೆ. 17ರಿಂದ 21 ವರ್ಷ ವಯಸ್ಸಿನ ಹುಡುಗರು ಇದನ್ನು ಮಾಡಿದ್ದಾರೆ ಎಂದು ಹೇಳಿದರು.

ಶಾಸಕ ಮುನಿರತ್ನನನ್ನು ಏಕಾಏಕಿ ಬಂಧಿಸಿಲ್ಲ. ಆತನ ವಿರುದ್ಧ ದೂರು ಕೊಟ್ಟಿದ್ದರು. ಇದಕ್ಕೆ ಪೂರಕವಾದ ವೀಡಿಯೋ ನೀಡಿದ್ದರು. ಅದನ್ನು ಆಧರಿಸಿ ಬಂಧಿಸಲಾಗಿದೆ. ಈಗಾಗಲೇ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

ಕಳೆದ ವರ್ಷ ಚೌತಿ ಹಬ್ಬ ಆಚರಣೆ ವೇಳೆ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಕೋಮು ಸಂಘರ್ಷಗಳಂತಹ ಘಟನೆಗಳು ಸಂಭವಿಸಿಲ್ಲ. ಈ ವರ್ಷವೂ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಅಹಿತಕರ ಘಟನೆ ಆಗಲು ಬಿಡುವುದಿಲ್ಲ ಎಂದು ಈ ಮೊದಲೇ ಹೇಳಿದ್ದೇವೆ. ಬಿಜೆಪಿಯವರು ಎಲ್ಲವನ್ನು ತಿರುಚುತ್ತಿದ್ದಾರೆ. ಇದೆಲ್ಲವನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X