Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪಿಎಚ್‍ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್...

ಪಿಎಚ್‍ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಕೊಡಿಸಲು ಕ್ರಮ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ18 Jan 2024 10:09 PM IST
share
ಪಿಎಚ್‍ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಕೊಡಿಸಲು ಕ್ರಮ: ಸಿಎಂ ರಾಜಕೀಯ ಕಾರ್ಯದರ್ಶಿ  ನಸೀರ್ ಅಹ್ಮದ್

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಪಿಎಚ್‍ಡಿ ವಿದ್ಯಾರ್ಥಿಗಳಿಗೆ ಮಾಸಿಕ 25 ಸಾವಿರ ರೂ. ಗಳ ಫೆಲೋಶಿಪ್ ಕೊಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಭರವಸೆ ನೀಡಿದರು.

ಗುರುವಾರ ಡಾಲರ್ಸ್ ಕಾಲನಿಯಲ್ಲಿರುವ ತಮ್ಮ ನಿವಾಸದಲ್ಲಿ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆ ಹಾಗೂ ಮತ್ತೀಕೆರೆಯ ಮಸ್ಜಿದೆ ತಾಹ ಬೈತುಲ್ ಮಾಲ್ ಸಮಿತಿ ವತಿಯಿಂದ ಹಂಪಿ ಕನ್ನಡ ವಿವಿಯಲ್ಲಿ ಪಿಎಚ್‍ಡಿ ಪದವಿ ಪಡೆದಿರುವ ದಾದಾ ಹಯಾತ್ ಬಾವಾಜಿ, ಪರ್ವೀನ್ ಬೇಗಂ ಹಾಗೂ ಇಸ್ಮಾಯಿಲ್ ಖಾದ್ರಿ ಅವರಿಗೆ ಗೌರವ ಸಮರ್ಪಣೆ ಮಾಡಿ ಅವರು ಮಾತನಾಡಿದರು.

ಪಿಎಚ್‍ಡಿ ವಿದ್ಯಾರ್ಥಿಗಳಿಗೆ ಈ ಹಿಂದೆ ನಮ್ಮ ಸರಕಾರ ಅಧಿಕಾರದಲ್ಲಿದ್ದಾಗ ಮಾಸಿಕ 25 ಸಾವಿರ ರೂ.ಗಳ ಫೆಲೋಶಿಪ್ ನೀಡಲಾಗುತ್ತಿತ್ತು. ನಂತರ ಬಂದ ಸರಕಾರ ಅದನ್ನು 10 ಸಾವಿರ ರೂ.ಗಳಿಗೆ ಇಳಿಸಿತು. ಈ ಮೊತ್ತವನ್ನು ಪುನಃ 25 ಸಾವಿರ ರೂ.ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನಸೀರ್ ಅಹ್ಮದ್ ಹೇಳಿದರು.

2018-19ರಲ್ಲಿ ಫೆಲೋಶಿಪ್ ಪೋರ್ಟಲ್ ಸ್ಥಗಿತಗೊಳಿಸಿದ ಬಳಿಕ ದಾಖಲಾದ 27 ಮಂದಿ ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಶಿಪ್‍ಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಆನಂತರ, 2020-21ರಲ್ಲಿ ಕೋವಿಡ್ ಇದ್ದ ಕಾರಣ ಪೋರ್ಟಲ್ ತೆರೆದಿರಲಿಲ್ಲ. ಇದರಿಂದಾಗಿ, ಈ ಸಂಶೋಧನಾ ವಿದ್ಯಾರ್ಥಿಗಳ ಪಟ್ಟಿ ಫೆಲೋಶಿಪ್ ಅಡಿಯಲ್ಲಿ ಬರದೆ ಸ್ಥಗಿತವಾಗಿತ್ತು ಎಂದು ನಸೀರ್ ಅಹ್ಮದ್ ಹೇಳಿದರು.

ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಜೊತೆ ಶುಕ್ರವಾರ ಸಭೆ ನಡೆಸಲಾಗುವುದು. ಅಲ್ಲದೆ, ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಎರಡು, ಮೂರು ವರ್ಷಗಳಿಂದ ಪ್ರೀ ಮೆಟ್ರಿಕ್ ವಿದ್ಯಾರ್ಥಿವೇತನ ಸ್ಥಗಿತವಾಗಿತ್ತು. ಈ ಬಾರಿ ನಮ್ಮ ಸರಕಾರ 6.41 ಲಕ್ಷ ಅರ್ಜಿಗಳು ಬಂದಿದ್ದವು. ಅದರಲ್ಲಿ ನಮ್ಮ 5.86 ಲಕ್ಷ ಅರ್ಜಿಗಳನ್ನು ಮಾನ್ಯ ಮಾಡಿ, ಸುಮಾರು 4 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ ವಿದ್ಯಾರ್ಥಿವೇತನ ಪಾವತಿಯಾಗಿದೆ. ಉಳಿದ ಮಕ್ಕಳಿಗೂ ಹಣ ಬಿಡುಗಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ನಸೀರ್ ಅಹ್ಮದ್ ತಿಳಿಸಿದರು.

ವಿದ್ಯಾಸಿರಿಯಲ್ಲಿ 9 ಸಾವಿರ ಅರ್ಜಿಗಳು ಬಂದಿದ್ದವು. 3-4 ಸಾವಿರ ವಿದ್ಯಾರ್ಥಿಗಳಿಗೆ ಹಣ ತಲುಪಿದೆ. ಉಳಿದವರಿಗೂ ಹಣ ಕಳುಹಿಸಲಾಗುವುದು. ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ 526 ಅರ್ಜಿಗಳು ಬಂದಿದ್ದವು. ಅದರಲ್ಲಿ 296 ವಿದ್ಯಾರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಲಾಗಿದೆ. ಅವರಿಗೂ ತಲಾ 20 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಜೊತೆಗೆ, ಶುಲ್ಕ ಮರುಪಾವತಿ ಮಾಡುವ ಯೋಜನೆಗೆ ಸಂಬಂಧಿಸಿದಂತೆ ನೋಟಿಫಿಕೇಶನ್ ಹೊರಡಿಸಲಾಗಿದೆ. ಪದವಿ, ಇಂಜಿನಿಯರಿಂಗ್, ಎಂಬಿಬಿಎಸ್ ಸೇರಿದಂತೆ ಇನ್ನಿತರ ಕೋರ್ಸುಗಳನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅವರು ಜ.30ರೊಳಗೆ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಿದರೆ ಅವರಿಗೆ ಪ್ರಯೋಜನವಾಗಲಿದೆ ಎಂದು ನಸೀರ್ ಅಹ್ಮದ್ ತಿಳಿಸಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಮಹಮ್ಮದೀರ ವೇದಿಕೆಯ ಅಧ್ಯಕ್ಷ ಸಮೀಉಲ್ಲಾ ಖಾನ್, ಪತ್ರಕರ್ತ ಬೆಳಗೂರು ಸಮೀಉಲ್ಲಾ, ಮುಖಂಡರಾದ ಶಾಜಹಾನ್, ಸಾಗರ್ ಸಮೀಉಲ್ಲಾ, ಬಾಬು, ಅಕ್ರಮ್, ಬೈತುಲ್ ಮಾಲ್ ಸಮಿತಿಯ ಪ್ರಮುಖರಾದ ನಝೀರ್, ಅಮೀರ್, ಮತೀನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X