Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಲೈಂಗಿಕ ಅಲ್ಪಸಂಖ್ಯಾತರಾಗಿ ಹುಟ್ಟುವುದು...

ಲೈಂಗಿಕ ಅಲ್ಪಸಂಖ್ಯಾತರಾಗಿ ಹುಟ್ಟುವುದು ಕಾಯಿಲೆ ಅಲ್ಲ, ಪ್ರಕೃತಿಯ ಸಹಜ ಗುಣ : ನಟ ಪ್ರಕಾಶ್ ರಾಜ್

ವಾರ್ತಾಭಾರತಿವಾರ್ತಾಭಾರತಿ9 Aug 2024 8:33 PM IST
share
ಲೈಂಗಿಕ ಅಲ್ಪಸಂಖ್ಯಾತರಾಗಿ ಹುಟ್ಟುವುದು ಕಾಯಿಲೆ ಅಲ್ಲ, ಪ್ರಕೃತಿಯ ಸಹಜ ಗುಣ : ನಟ ಪ್ರಕಾಶ್ ರಾಜ್

ಬೆಂಗಳೂರು : ‘ಲೈಂಗಿಕ ಅಲ್ಪಸಂಖ್ಯಾತರಾಗಿ ಹುಟ್ಟುವುದು ಕಾಯಿಲೆಯಲ್ಲ. ಅದಕ್ಕಾಗಿ ಔಷಧಿ ಹುಡುಕುವ ಪ್ರಯತ್ನ ಮಾಡದೆ, ಪ್ರಕೃತಿಯಲ್ಲಿ ಅದೊಂದು ಸಹಜ ಗುಣವೆಂದು ಅರ್ಥ ಮಾಡಿಕೊಳ್ಳಬೇಕು ಎಂದು ಬಹುಭಾಷಾ ನಟ ಪ್ರಕಾಶ್ ರಾಜ್‌ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿರುವ ಸೈಂಟ್ ಜಾನ್ಸ್ ಸಂಜೆ ಕಾಲೇಜಿನಲ್ಲಿ ‘ಸಾಮಾಜಿಕ ನ್ಯಾಯಕ್ಕಾಗಿ ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತರ ಮೈತ್ರಿಕೂಟ’ ಆಯೋಜಿಸಿದ್ದ ರಾಷ್ಟ್ರಗೀತೆ, ನಾಡಗೀತೆ, ಕೃತಿಗಳ ಬಿಡುಗಡೆ ಹಾಗೂ ತಲ್ಕಿ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಲೈಂಗಿಕ ಅಲ್ಪಸಂಖ್ಯಾತರು ಬೀದಿಗೆ ಇಳಿದವರು, ಇವರಿಗೆ ಸಮಾಜ ಏನೋ ಮಾಡಬೇಕು, ಇವರಿಗೆ ಕೆಲಸ ಕೊಡಬೇಕೆಂದು ಹೇಳುವುದು ಸರಿಯಲ್ಲ. ಲೈಂಗಿಕ ಅಲ್ಪಸಂಖ್ಯಾತರು ಬೀದಿಗೆ ಇಳಿದಿಲ್ಲ. ಅವರನ್ನು ಸಮಾಜವೇ ಬೀದಿಗೆ ತಳ್ಳಿದೆ’ ಎಂದು ಅಭಿಪ್ರಾಯಪಟ್ಟರು.

ಮನುಷ್ಯನ ವಿಕಾಸದ ಪ್ರಕ್ರಿಯೆಯಲ್ಲಿ ಪ್ರಾಣಿಗಳ ಹಲವು ರೂಪಗಳ ನಂತರ ಮನುಷ್ಯ ಆಗಿದ್ದು ಎನ್ನುವ ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು. ಸಸ್ಯ-ಪ್ರಾಣಿಗಳಲ್ಲಿರುವಂತೆ ಮನುಷ್ಯ ಜೀವಿಯಲ್ಲಿಯೂ ಅಲ್ಪಸಂಖ್ಯಾತರಾಗಿ ಹುಟ್ಟುವುದು, ಒಂದು ಗಂಡಿನಲ್ಲಿ ಹೆಣ್ಣಿನ ಭಾವನೆ, ಹೆಣ್ಣಿನಲ್ಲಿ ಗಂಡಿನ ಭಾವನೆ ಬರುವುದು ಪ್ರಕೃತಿಯಲ್ಲಿರುವ ಒಂದು ಸಹಜ ಗುಣ. ಸಹಸ್ರಾರು ವರ್ಷಗಳಿಂದ ವಿಕಾಸ ಆಗುತ್ತಿದ್ದರೂ ವಿಕಾಸದ ಸೂಕ್ಷ್ಮತೆಯನ್ನು ಮನುಷ್ಯ ಬೆಳೆಸಿಕೊಂಡಿಲ್ಲ ಎಂದು ಪ್ರಕಾಶ್ ರಾಜ್‌ ಬೇಸರ ವ್ಯಕ್ತಪಡಿಸಿದರು.

ಮನುಷ್ಯ ಮಾಡಿರುವ ದೊಡ್ಡ ತಪ್ಪೆಂದರೆ ಸಮಾಜ ಕಟ್ಟಿಕೊಂಡು, ಆ ಸಮಾಜಕ್ಕೆ ಕಟ್ಟಳೆ-ಸಂಪ್ರದಾಯಗಳು ಸೃಷ್ಟಿಸಿರುವುದು. ಲೈಂಗಿಕ ಅಭಿವ್ಯಕ್ತಿಯೇ ಬದುಕು, ಮನುಷ್ಯನಿಗೆ ಮಕ್ಕಳು ಹುಟ್ಟಬೇಕು, ಇಲ್ಲದಿದ್ದರೆ ಮನುಷ್ಯ ಅಲ್ಲ ಎಂದು ತಿಳಿದುಕೊಂಡಿರುವುದು ಸಮಾಜದಲ್ಲಿರುವ ತಪ್ಪು ಕಲ್ಪನೆ. ಲೈಂಗಿಕತೆಯನ್ನು ದಾಟಿ ಮನುಷ್ಯನಲ್ಲಿ ಭಾವನೆ, ಹೃದಯ, ತುಡಿತ, ಹಸಿವು, ಜ್ಞಾನ ಎಲ್ಲವೂ ಇದೆ. ಸಾಮಾನ್ಯವಾಗಿ ಮನುಷ್ಯರು ನಾವು ಎಂದು ಮಾತನಾಡುವುದು ನಿಲ್ಲಿಸಬೇಕು. ಇಲ್ಲಿ ಯಾರು ಯಾರಿಗೂ ಭಿಕ್ಷೆ ಕೊಡುತ್ತಿಲ್ಲ. ಎಲ್ಲರೂ ಒಂದೆ ಎನ್ನುವ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಮನುಷ್ಯರು ಕಟ್ಟಿಕೊಂಡಿರುವ ಸಂಪ್ರದಾಯದ ಗೋಡೆಗಳು ಎಷ್ಟಿವೆ ಎಂದರೆ, ಗಂಡು-ಹೆಣ್ಣಿನ ಮಧ್ಯೆ ಗೋಡೆ, ಗಂಡು-ಗಂಡಿನ ಮಧ್ಯೆ ಗೋಡೆ, ಮನುಷ್ಯ-ಮನುಷ್ಯರ ಮಧ್ಯೆ ಗೋಡೆ ಇನ್ನು ಹಲವು. ನಮ್ಮ ಕೈಚಾಚಿನಲ್ಲಿರುವ ಒಂದು ಜೀವವನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಸಾಧ್ಯವಾಗದಂತೆ ಸಂಪ್ರದಾಯಗಳನ್ನು ಕಟ್ಟಿಕೊಂಡಿದ್ದೇವೆ. ಅಂತಹ ಸಂಪ್ರದಾಯದ ಗೋಡೆಗಳು ಸಮಾಜದಲ್ಲಿ ಇಲ್ಲದಿದ್ದರೆ ಎಲ್ಲವೂ ಸಹಜವಾಗಿರುತ್ತದೆ ಎಂದು ಅವರು ಹೇಳಿದರು.

ಮನುಷ್ಯ ಹೋರಾಟ ವಿಜಯದ ಸಂಕೇತವಾಗಿ ಕಾನೂನಾಗಿದೆ. ಲೈಂಗಿಕ ಅಲ್ಪಸಂಖ್ಯಾತರಿಗೆ ಕಾನೂನು, ಶಿಕ್ಷಣ, ಕೆಲಸ ಕೊಡುವುದರಿಂದ ಮಾತ್ರ ಸಮಾನತೆ, ಸಮಾನ ಹಕ್ಕು ಸಿಗುವುದಿಲ್ಲ. ಮನುಷ್ಯರಲ್ಲಿರುವ ಆಲೋಚನೆ ಬದಲಾಗಬೇಕಿದೆ. ನಾವೆಲ್ಲರೂ ಒಂದೆ ಎನ್ನುವ ಭಾವನೆ ಬರಬೇಕು. ನಮಲ್ಲಿ ಭೇದ-ಬೇವ ಇಲ್ಲದೆ ಇರಬಹುದು ಆದರೆ, ನಮ್ಮ ಹಿರಿಕರು ಮಾಡಿರುವ ತಪ್ಪಿಗೆ ನಾವು ತಲೆ ತಗ್ಗಿಸಬೇಕು. ಆ ತಪ್ಪನ್ನು ಅರ್ಥ ಮಾಡಿಕೊಂಡು ಸರಿ ಮಾಡುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ ಎಂದು ಪ್ರಕಾಶ್ ರಾಜ್ ಹೇಳಿದರು.

ಕಾರ್ಯಕ್ರಮದಲ್ಲಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪ್ರೊ.ಎಲ್.ಎನ್.ಮುಕುಂದರಾಜ್, ನಾಟಕ ಅಕಾಡೆಮಿಯ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ, ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ, ಮೈತ್ರಿಕೂಟದ ಡಾ.ಅಕ್ಕೈ ಪದ್ಮಶಾಲಿ, ಚಾಂದಿನಿ, ಸವಿತಾ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X