ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ವಿಭಾಗದ ನಿರ್ದೇಶಕ ಡಾ.ಗಿರೀಶ್ ದಿಲಿಪ್ ಬಡೋಲೆ ಅವರಿಗೆ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾದ ಅರ್ಪಣಾ ರಮೇಶ್ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ನಿರ್ದೇಶಕ(ಐಟಿ)ರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
Next Story




