Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಟಿಕೆಟ್‌ ದರ ಹೆಚ್ಚಳ ಆರೋಪ: ಅಪರ ಸಾರಿಗೆ...

ಟಿಕೆಟ್‌ ದರ ಹೆಚ್ಚಳ ಆರೋಪ: ಅಪರ ಸಾರಿಗೆ ಆಯುಕ್ತರಿಂದ ಪರಿಶೀಲನೆ

ಹೆಚ್ಚಿನ ದರ ವಿಧಿಸುವ ಟ್ರಾವೆಲ್‌ ಗಳ ಬಗ್ಗೆ ದೂರು ನೀಡಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 Oct 2024 11:32 AM IST
share
ಟಿಕೆಟ್‌ ದರ ಹೆಚ್ಚಳ ಆರೋಪ: ಅಪರ ಸಾರಿಗೆ ಆಯುಕ್ತರಿಂದ ಪರಿಶೀಲನೆ

ಬೆಂಗಳೂರು ಅ. 26: ದೀಪಾವಳಿ ಹಬ್ಬದ ಪ್ರಯುಕ್ತ ಸರದಿ ರಜೆಗಳ ಹಿನ್ನಲೆಯಲ್ಲಿ ಖಾಸಗಿ ಪ್ರಯಾಣಿಕ ವಾಹನಗಳು ಟಿಕೆಟ್‌ ದರ ಹೆಚ್ಚಿಸಿರುವ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ಅಪರ ಸಾರಿಗೆ ಆಯುಕ್ತ ಸಿ. ಮಲ್ಲಿಕಾರ್ಜುನ ಅವರು ಮೆಜೆಸ್ಟಿಕ್‌ ನಲ್ಲಿ ಪರಿಶೀಲನೆ ನಡೆಸಿದರು. ಖಾಸಗಿ ಬಸ್‌ಗಳಲ್ಲಿ ತೆರಳುತ್ತಿದ್ದ ಪ್ರಯಾಣಿಕರಿಂದ ಮಾಹಿತಿ ಪಡೆದ ಅಪರ ಸಾರಿಗೆ ಆಯುಕ್ತರು, ಹೆಚ್ಚಿನ ದರ ವಿಧಿಸುವ ಟ್ರಾವೆಲ್‌ ಗಳ ಬಗ್ಗೆ ದೂರು ನೀಡುವಂತೆ ಸೂಚಿಸಿದರು.

ಈಗಾಗಲೇ ಅ.25ರಂದು ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇವರ ಅಧ್ಯಕ್ಷತೆಯಲ್ಲಿ ಹಾಗೂ ಅಪರ ಸಾರಿಗೆ ಆಯುಕ್ತರ ಉಪಸ್ಥಿತಿಯಲ್ಲಿ ಖಾಸಗಿ ಬಸ್ ಮಾಲಕರು ಹಾಗೂ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾಮಾನ್ಯ ದರಕ್ಕಿಂತ ಹೆಚ್ಚಿನ ದರವನ್ನು ಪ್ರಯಾಣಿಕರಿಂದ ಪಡೆಯದಂತೆ ನಿರ್ದೇಶನ ನೀಡಲಾಗಿರುತ್ತದೆ. ಆದರೂ ದುಪ್ಪಟ್ಟು ಹಣವನ್ನು ಸಂಗ್ರಹಸಿ ಸಾರ್ವಜನಿಕರಿಗೆ ಅನಾನುಕೂಲತೆ ಉಂಟು ಮಾಡುವಂತಹ ವಾಹನಗಳ ಮಾಲೀಕರ ಮೇಲೆ ಪರ್ಮಿಟ್ ಮತ್ತು ನೋಂದಣಿ ಪತ್ರವನ್ನು (ಆರ್.ಸಿ.) ಅಮಾನತುಗೊಳಿಸಲು ಹಾಗೂ ಟಿಕೆಟ್ ವಿತರಕರು (ಟಿಕೆಟ್ ಬುಕ್ಕಿಂಗ್ ಆಪ್) ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸರಕಾರ ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಯಾವುದೇ ಹಿಂಜರಿಕೆ ಇಲ್ಲದೆ ದೂರು ನೀಡಬೇಕು ಎಂದು ತಿಳಿಸಿದರು.

ಇದಲ್ಲದೆ ಪ್ರಯಾಣಿಕ ಸೇವಾ ವಾಹನಗಳಲ್ಲಿ ಅನಧಿಕೃತವಾಗಿ ಸ್ಪೋಟಕ ಸಾಮಾಗ್ರಿಗಳು ಹಾಗೂ ಇತರ ಸರಕು ಸಾಗಣೆ ಮಾಡುವುದನ್ನು ನಿಷೇಧಿಸಲಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ವಾಹನ ಮಾಲೀಕರ ವಿರುದ್ಧ ಕಾನೂನು ರೀತಿಯಲ್ಲಿ ಪ್ರಕರಣ ದಾಖಲಿಸಲು ಕ್ರಮ ವಹಿಸಲಾಗುವುದೆಂದು ತಿಳಿಸಿದರು.

ಖಾಸಗಿ ಬಸ್ ಸಂಘಗಳು ಸಾಮಾನ್ಯಕ್ಕಿಂತ ಹೆಚ್ಚಿನ ದರವನ್ನು ಪ್ರಯಾಣಿಕರಿಂದ ಸಂಗ್ರಹಿಸುವುದು ಕಂಡುಬಂದಲ್ಲಿ ‌ಸಾರ್ವಜನಿಕರು ಸಾರಿಗೆ ಇಲಾಖೆಯ 9449863429 ಹಾಗೂ 94498 63426 ಮೂಲಕ ನಿಯಂತ್ರಣ ಕೊಠಡಿಗೆ ಕಚೇರಿಯ ಸಮಯದಲ್ಲಿ ಕರೆ ಮಾಡಿ ದೂರು ನೀಡಬಹುದು ಅಥವಾ ಸ್ಥಳೀಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಗಳಿಗೆ ದೂರು ದಾಖಲಿಸಬಹುದು ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X