ಬೆಂಗಳೂರಿಗೆ ನಾಳೆ ಪ್ರಧಾನಿ ಆಗಮನ: ಆರ್. ಅಶೋಕ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನ.13ರಂದು ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ರಾಷ್ಟ್ರಕ್ಕೆ ಸಮರ್ಪಣೆ ಹಾಗು ‘ಪಿಂಕ್ ಲೈನ್’ ಮೆಟ್ರೋ ಮಾರ್ಗದ ಚಾಲನಾ ಸಮಾರಂಭ ಭಾಗವಹಿಸಲು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯನ್ನು ಅದ್ದೂರಿಯಾ ಸ್ವಾಗತಿಸಲು ರ್ಯಕ್ರಮದ ಯಶಸ್ಸಿಗಾಗಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಚರ್ಚಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃ್ತ್ವದಲ್ಲಿ ಸಭೆ ನಡೆಯಿತು.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಆರ್.ಅಶೋಕ್ ರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಪ್ರಧಾನಿಯವರ ಸ್ವಾಗತ ಮತ್ತು ಕಾರ್ಯಕ್ರಮದ ಯಶಸ್ಸಿಗಾಗಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ ಉಪಸ್ಥಿತರಿದ್ದು, ಸಲಹೆಗಳನ್ನು ನೀಡಿದರು. ಶಾಸಕರಾದ ಉದಯ್ ಗರುಡಾಚಾರ್, ಸಿ.ಕೆ.ರಾಮಮೂರ್ತಿ, ರವಿ ಸುಬ್ರಹ್ಮಣ್ಯ, ಬಿಜೆಪಿ ಜಿಲ್ಲಾಧ್ಯಕ್ಷರುಗಳಾದ ಎಸ್.ಹರೀಶ್, ಸಪ್ತಗಿರಿಗೌಡರ ಜೊತೆಗೆ, ಪಕ್ಷದ ಹಿರಿಯ ಮುಖಂಡರು, ಪ್ರಮುಖರು ಹಾಗೂ ಅಪಾರ ಸಂಖ್ಯೆಯ ಪಕ್ಷದ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಧಾನಿ ಮೋದಿ ಅವರ ಭೇಟಿಯನ್ನು ಅತ್ಯಂತ ಯಶಸ್ವಿಗೊಳಿಸಲು ಮತ್ತು ಪಕ್ಷದ ವತಿಯಿಂದ ಅದ್ಧೂರಿ ಸ್ವಾಗತ ಕೋರಲು ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು ಹಾಗೂ ಕಾರ್ಯಕರ್ತರಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಯಿತು.






