Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಐ ಆಧಾರಿತ ಉದ್ಯೋಗ ಕೌಶಲ್ಯ:...

ಎಐ ಆಧಾರಿತ ಉದ್ಯೋಗ ಕೌಶಲ್ಯ: ಬೆಂಗಳೂರಿನಲ್ಲಿ 'ಪ್ರಾಜೆಕ್ಟ್ ಹೆಲಿಕ್ಸ್' ಅನಾವರಣಗೊಳಿಸಿದ ಕೋರ್ಸೆರಾ

ವಾರ್ತಾಭಾರತಿವಾರ್ತಾಭಾರತಿ17 Oct 2026 3:14 PM IST
share
ಎಐ ಆಧಾರಿತ ಉದ್ಯೋಗ ಕೌಶಲ್ಯ: ಬೆಂಗಳೂರಿನಲ್ಲಿ ಪ್ರಾಜೆಕ್ಟ್ ಹೆಲಿಕ್ಸ್ ಅನಾವರಣಗೊಳಿಸಿದ ಕೋರ್ಸೆರಾ

ಬೆಂಗಳೂರು, ಅ.15: ಜಾಗತಿಕ ಆನ್‌ಲೈನ್ ಕಲಿಕಾ ವೇದಿಕೆಯಾದ 'ಕೋರ್ಸೆರಾ' ಭವಿಷ್ಯದ ಉದ್ಯೋಗ ಮಾರುಕಟ್ಟೆಗೆ ತಕ್ಕಂತೆ ಕೃತಕ ಬುದ್ಧಿಮತ್ತೆ (ಎಐ) ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ತನ್ನ ಹೊಸ ವೇದಿಕೆಯಾದ 'ಪ್ರಾಜೆಕ್ಟ್ ಹೆಲಿಕ್ಸ್' ಅನ್ನು ಗುರುವಾರ ಬೆಂಗಳೂರಿನಲ್ಲಿ ಅನಾವರಣಗೊಳಿಸಿತು.

'ಕೋರ್ಸೆರಾ' ಮತ್ತು 'ಉಡೆಮಿ' ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ 'ಎಫ್‌ಡಬ್ಲ್ಯೂಡಿ 2026' ವಾರ್ಷಿಕ ಕಾರ್ಯಕ್ರಮದಲ್ಲಿ ಈ ಎಐ-ಆಧಾರಿತ ಸ್ಕಿಲ್ಸ್ ಪ್ಲಾಟ್‌ಫಾರ್ಮ್ ಅನ್ನು ಪ್ರದರ್ಶಿಸಲಾಯಿತು. ಇದೇ ವೇಳೆ, ಮ್ಯಾನೇಜ್ಮೆಂಟ್ ಶಿಕ್ಷಣವನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಲು 'ಐಐಎಂ ಬೆಂಗಳೂರು' ಜೊತೆಗಿನ ಮಹತ್ವದ ಪಾಲುದಾರಿಕೆಯನ್ನು ಕಂಪೆನಿ ಘೋಷಿಸಿತು.

ಏನಿದು 'ಪ್ರಾಜೆಕ್ಟ್ ಹೆಲಿಕ್ಸ್'?:

ವ್ಯವಹಾರದ ಅಗತ್ಯಗಳಿಗೆ ತಕ್ಕಂತೆ ಉದ್ಯೋಗಿಗಳಿಗೆ ವೈಯಕ್ತಿಕ ಕಲಿಕೆ ಮತ್ತು ಕೌಶಲ್ಯಗಳನ್ನು ಒದಗಿಸಲು ಈ ವೇದಿಕೆಯನ್ನು ವಿನ್ಯಾಸಗೊಳಿಸಲಾಗಿದೆ. ಇಲ್ಲಿ ಕಲಿಯುವವರು ತಮ್ಮ ಗುರಿಗಳನ್ನು ಸಾಮಾನ್ಯ ಭಾಷೆಯಲ್ಲಿ ವಿವರಿಸಿದರೆ, ಅದಕ್ಕೆ ತಕ್ಕಂತೆ 'ಎಐ' ಕಲಿಕಾ ಮಾರ್ಗವನ್ನು ರೂಪಿಸಿಕೊಡುತ್ತದೆ. 2027ರ ಮೊದಲಾರ್ಧದಲ್ಲಿ ಈ ವೇದಿಕೆ ಉದ್ಯಮ-ಗ್ರಾಹಕರಿಗೆ ಲಭ್ಯವಾಗುವ ನಿರೀಕ್ಷೆಯಿದೆ.

ಇದೇ ವೇಳೆ, ಕೋರ್ಸೆರಾದ ಭಾರತ ಮತ್ತು ಏಷ್ಯಾ ಪೆಸಿಫಿಕ್ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಆಶುತೋಷ್ ಗುಪ್ತಾ ಮಾತನಾಡಿ, ಎಐ ಪರಿಕರಗಳ ಬಳಕೆ ವೇಗವಾಗಿ ಬೆಳೆಯುತ್ತಿದೆ. ದೈನಂದಿನ ಕೆಲಸಗಳಲ್ಲಿ ಕಲಿಕೆಯನ್ನು ಅಳವಡಿಸಿಕೊಳ್ಳಲು ಹಾಗೂ ಉದ್ಯೋಗಿಗಳಿಗೆ ಸೂಕ್ತ ಕೌಶಲ್ಯದ ವಿಶ್ವಾಸ ತುಂಬಲು 'ಪ್ರಾಜೆಕ್ಟ್ ಹೆಲಿಕ್ಸ್' ನೆರವಾಗಲಿದೆ ಎಂದರು.

ಐಐಎಂ ಬೆಂಗಳೂರು ಜೊತೆ ಒಪ್ಪಂದ:

ಮ್ಯಾನೇಜ್‌ಮೆಂಟ್‌ ಶಿಕ್ಷಣವನ್ನು ಜಾಗತಿಕ ಮಟ್ಟದ ವಿದ್ಯಾರ್ಥಿಗಳಿಗೆ ತಲುಪಿಸಲು ಕೋರ್ಸೆರಾ, ಐಐಎಂ ಬೆಂಗಳೂರಿನ 'ಐಐಎಂಬಿಎಕ್ಸ್ ಡಿಜಿಟಲ್ ಲರ್ನಿಂಗ್ ಫೌಂಡೇಶನ್' (ಐಐಎಂಬಿಎಕ್ಸ್‌) ಜೊತೆ ಒಪ್ಪಂದ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಬಿಸಿನೆಸ್ ಸ್ಟ್ರಾಟಜಿ, ಉದ್ಯಮಶೀಲತೆ, ಡೇಟಾ ಆಧಾರಿತ ನಿರ್ಧಾರ, ಡಿಜಿಟಲ್ ಮಾರ್ಕೆಟಿಂಗ್, ಪಬ್ಲಿಕ್ ಪಾಲಿಸಿ ಮತ್ತು ಫಿನ್‌ಟೆಕ್‌ನಂತಹ ಹೊಸ ಕೋರ್ಸ್‌ಗಳನ್ನು ಕೋರ್ಸೆರಾ ವೇದಿಕೆಯಲ್ಲಿ ಆರಂಭಿಸಲಾಗುವುದು ಎಂದು ಐಐಎಂಬಿಎಕ್ಸ್‌ನ ಸಿಇಒ ಸೀತಾರಾಮನ್ ಶಂಕರ್ ತಿಳಿಸಿದರು.

ಕರ್ನಾಟಕದಲ್ಲಿ ಕೋರ್ಸೆರಾ:

ಕೌಶಲ್ಯಾಭಿವೃದ್ಧಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ರಾಜ್ಯದಲ್ಲಿ ಬರೋಬ್ಬರಿ 43 ಲಕ್ಷ ಕೋರ್ಸೆರಾ ಬಳಕೆದಾರರಿದ್ದಾರೆ. ಇದು ಭಾರತದಲ್ಲೇ ಮೂರನೇ ಅತಿದೊಡ್ಡ ಸಂಖ್ಯೆಯಾಗಿದೆ. ವಿಶೇಷವೆಂದರೆ, ರಾಜ್ಯದಲ್ಲಿ ಸರಾಸರಿ ಪ್ರತಿ ಎರಡು ನಿಮಿಷಕ್ಕೊಮ್ಮೆ ಒಬ್ಬರು 'ಜನರೇಟಿವ್ ಎಐ' ಕೋರ್ಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಇದುವರೆಗೆ 7.5 ಲಕ್ಷ ಮಂದಿ ಈ ಕೋರ್ಸ್‌ಗೆ ನೋಂದಾಯಿಸಿಕೊಂಡಿದ್ದಾರೆ. ಎಐ ಜೊತೆಗೆ ಡೇಟಾ ಅನಾಲಿಸಿಸ್ ಮತ್ತು ಮಷಿನ್ ಲರ್ನಿಂಗ್‌ಗೆ ರಾಜ್ಯದಲ್ಲಿ ಹೆಚ್ಚಿನ ಬೇಡಿಕೆಯಿದೆ ಎಂದು ಆಶುತೋಷ್ ತಿಳಿಸಿದರು.

ಇದಲ್ಲದೆ ರಾಜ್ಯದ ಅಲಯನ್ಸ್ ಯೂನಿವರ್ಸಿಟಿ, ರೇವಾ ಯೂನಿವರ್ಸಿಟಿ, ಮೈಸೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್, ಗಾರ್ಡನ್ ಸಿಟಿ ಯೂನಿವರ್ಸಿಟಿ, ಮೈಸೂರಿನ ಮಹಾರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವಿದ್ಯಾವರ್ಧಕ ಕಾಲೇಜ್ ಆಫ್ ಎಂಜಿನಿಯರಿಂಗ್, ಆರ್‌ಎನ್‌ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಂಡ್ಯದ ಪಿ.ಇ.ಎಸ್. ಕಾಲೇಜ್ ಆಫ್ ಎಂಜಿನಿಯರಿಂಗ್, ಆರ್‌ವಿ ಯೂನಿವರ್ಸಿಟಿ, ಕ್ರೈಸ್ಟ್ ಯೂನಿವರ್ಸಿಟಿ ಮತ್ತು ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸಂಸ್ಥೆಗಳು ಸೇರಿದಂತೆ ಹಲವು ಪ್ರಮುಖ ಶಿಕ್ಷಣ ಸಂಸ್ಥೆಗಳೊಂದಿಗೆ ಕೋರ್ಸೆರಾ ಪಾಲುದಾರಿಕೆ ಹೊಂದಿದ್ದು, ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ಕೌಶಲ್ಯಗಳನ್ನು ಒದಗಿಸುತ್ತಿದೆ ಎಂದು ಆಶುತೋಷ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X