Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು: AICCTU ಪ್ರಥಮ ಜಿಲ್ಲಾ...

ಬೆಂಗಳೂರು: AICCTU ಪ್ರಥಮ ಜಿಲ್ಲಾ ಸಮ್ಮೇಳನ; 'ಕಾರ್ಮಿಕರ ಕಿಡಿ' ಪತ್ರಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ21 July 2024 7:34 PM IST
share
ಬೆಂಗಳೂರು: AICCTU ಪ್ರಥಮ ಜಿಲ್ಲಾ ಸಮ್ಮೇಳನ; ಕಾರ್ಮಿಕರ ಕಿಡಿ ಪತ್ರಿಕೆ ಬಿಡುಗಡೆ

ಬೆಂಗಳೂರು: ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ (AICCTU) ಪ್ರಥಮ ಬೆಂಗಳೂರು ಜಿಲ್ಲಾ ಸಮ್ಮೇಳನ ರವಿವಾರ ನಡೆಯಿತು.

ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ AICCTU ರಾಷ್ಟ್ರಾಧ್ಯಕ್ಷ ಕಾಮ್ರೇಡ್ ವಿ. ಶಂಕರ್, "ಕರ್ನಾಟಕದಲ್ಲಿರುವ ಕೇಂದ್ರ ಟ್ರೇಡ್ ಯೂನಿಯನ್ ಗಳಲ್ಲಿ ಎಐಸಿಸಿಟಿಯು ಮಹತ್ವವಾದ ಯೂನಿಯನ್‌ ಆಗಿ ಹೊರಹೊಮ್ಮಿದೆ. ನಾವು ಜೂಲೈ 25ರಿಂದ ಆಗಸ್ಟ್ 9ರ ವರೆಗೆ ರಾಷ್ಟ್ರ ಮಟ್ಟದ ಅಭಿಯಾನವನ್ನು ನಡೆಸುತ್ತೇವೆ. ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಾಗಿರಬಹುದು, ಆದರೆ ಭಾರತೀಯರು 1942ರಲ್ಲಿ ಬ್ರಿಟಿಷರಿಗೆ ಭಾರತ ಬಿಟ್ಟು ತೊಲಗಳು ಹೇಳಿದಂತೆ, ನಾವು ಕಾರ್ಮಿಕರು ಈಗ ಮೋದಿ ಸರ್ಕಾರ ಭಾರತ ಬಿಟ್ಟು ತೊಲಗಬೇಕೆಂದು ಸಂದೇಶ ನೀಡಿದ್ದೇವೆ," ಎಂದು ಹೇಳಿದರು.

ಹಲವಾರು ಕಾರ್ಮಿಕ ಸಂಘಟನೆಗಳು ಆರ್ಥಿಕ ಸೌಲಭ್ಯಗಳ ಕುರಿತು ನಡೆಸುವ ಹೋರಾಟಗಳಲ್ಲಿ ಮಾತ್ರ ತೊಡಗಿಸಿಕೊಂಡಿರುತ್ತೆ. ಇದರಿಂದ ಹೊರಬರಲು ನಾವು ವರ್ಗ ಪ್ರಶ್ನೆಯನ್ನು ಸಾಮಾಜಿಕ ಅರ್ಥದಲ್ಲಿ ತೆಗೆದುಕೊಳ್ಳಬೇಕು ಮತ್ತು ವರ್ಗ ಸಂಘರ್ಷವು ಕೇವಲ ಆರ್ಥಿಕ ಸಂಘರ್ಷವಾಗಿರದೆ, ಜಾತಿ ಮತ್ತು ಲಿಂಗ ದಮನವನ್ನು ಒಳಗೊಂಡಂತೆ ಎಲ್ಲಾ ಸಾಮಾಜಿಕ ದೌರ್ಜನ್ಯದ ವಿರುದ್ಧ ನಡೆಸಬೇಕು ಎಂದು AICCTU ರಾಜ್ಯಾಧ್ಯಕ್ಷರು ಕಾಮ್ರೇಡ್ ಕ್ಲಿಫ್ಟನ್ ಡಿ' ರೊಜಾರಿಯೋ ಹೇಳಿದರು.

"ದುಡಿಯುವ ವರ್ಗದ ಸಂಘಟನೆ ಮತ್ತು ಸಂಘರ್ಷಗಳಲ್ಲಿ ಲಿಂಗ ಸಮಾನತೆ ಮತ್ತು ಜಾತಿ ವಿನಾಶವು ಪ್ರಮುಖ ಪಾತ್ರವನ್ನು ವಹಿಸಬೇಕು. ಕೋಮುವಾದಿ ವಿಭಜನೆಯ ವಿರುದ್ಧ ದುಡಿಯುವ ವರ್ಗವು ಪ್ರಮುಖ ಕಾರ್ಯವನ್ನು ನಿರ್ವಹಿಸಬೇಕು. ಏಕೆಂದರೆ ಇದು ಕೇವಲ ದುಡಿಯುವ ವರ್ಗದವರನ್ನು ವಿಭಜಿಸುತ್ತಿಲ್ಲ, ಭಾರತದಲ್ಲಿ ಜನಿಸಿರುವ ಫ್ಯಾಶಿಸಂನ ಈ ಸ್ವರೂಪ ಇಡೀ ದೇಶಕ್ಕೆ ಅನಾಹುತಕಾರಿಯಾಗಿದೆ. ದುಡಿಯುವ ವರ್ಗಕ್ಕೆ ನ್ಯಾಯ ದೊರಕಬೇಕೆಂದರೆ ಎಲ್ಲಾ ರೀತಿಯ ಪ್ರಜಾಪ್ರಭುತ್ವೀಕರಣ ಮುಖ್ಯವಾಗಿರುತ್ತದ," ಎಂದು AICCTU ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಪಿ.ಪಿ. ಅಪ್ಪಣ್ಣ ಹೇಳಿದರು.

ಪ್ರಥಮ ಸಮ್ಮೇಳನದಲ್ಲಿ 300ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದು, 45-ಸದಸ್ಯರುಳ್ಳ ಸಮಿತಿಯನ್ನು ರಚಿಸಿ, ಕಾಮ್ರೇಡ್ ನಿರ್ಮಲ ಅವರನ್ನು ಬೆಂಗಳೂರು ಜಿಲ್ಲಾ ಅಧ್ಯಕ್ಷರು ಮತ್ತು ಕಾಮ್ರೇಡ್ ಅಶೋಕ್ ಅವರನ್ನು ಜಿಲ್ಲಾ ಕಾರ್ಯದರ್ಶಿಯಾಗಿ, ಅವರ ಜೊತೆಗೆ ಮತ್ತಿತರೆ 7 ಪದಾಧಿಕಾರಿಗಳನ್ನು ಚುನಾಯಿಸಲಾಯಿತು.

"ಬೆಂಗಳೂರಿನಲ್ಲಿ ಕ್ರಿಯಾಶೀಲ ಮತ್ತು ತೀವ್ರವಾದ ದುಡಿಯುವ ವರ್ಗದ ಚಳುವಳಿಯನ್ನು ಕಟ್ಟುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳಬೇಕು ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ, ಘನತೆ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಕಾರ್ಪೊರೇಟ್-ಕಮ್ಯುನಲ್ ಫ್ಯಾಶಿಸಂ ವಿರುದ್ಧದ ಹೋರಾಟಗಳನ್ನು ರೂಪಿಸಲು ನೂತನ ನಕ್ಷೆಯನ್ನು ನಾವು ತಯಾರಿಸಬೇಕು," ಎಂದು ಬೆಂಗಳೂರು ಅಧ್ಯಕ್ಷರು ಕಾಮ್ರೇಡ್ ನಿರ್ಮಲ ಹೇಳಿದರು.

ಈ ಸಂದರ್ಭದಲ್ಲಿ 'ಕಾರ್ಮಿಕರ ಕಿಡಿ' ಎಂಬ AICCTU ಪತ್ರಿಕೆಯು ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಪ್ರಕಟವಾಗಲಿದ್ದು, ಜೂಲೈ 2024ರ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.














share
ವಾರ್ತಾಭಾರತಿ
ವಾರ್ತಾಭಾರತಿ
Next Story
X