Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ...

ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

ನಮ್ಮಿಬ್ಬರ ನಡುವೆ ಯಾವುದೇ ಹಣಕಾಸಿನ ವಹಿವಾಟು ನಡೆದಿಲ್ಲ

ವಾರ್ತಾಭಾರತಿವಾರ್ತಾಭಾರತಿ23 Jun 2025 12:15 PM IST
share
ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

ಬೆಂಗಳೂರು, ಜೂ.23: "ಇಡಿಯವರು ವಿಚಾರಣೆಗೆ ಹಾಜರಾಗಿ ಎಂದು ತಿಳಿಸಿದ್ದಾರೆ. ನಾನು ಇದಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ. ಯಾವ ಮಾನದಂಡವಿಟ್ಟುಕೊಂಡು ನನ್ನನ್ನು ವಿಚಾರಣೆಗೆ ಕರೆದಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳುವೆ" ಎಂದು ಬಮೂಲ್ ಅಧ್ಯಕ್ಷ, ನಿಕಟಪೂರ್ವ ಸಂಸದರಾದ ಡಿ ಕೆ ಸುರೇಶ್ ಅವರು ಹೇಳಿದರು.

ಸದಾಶಿವನಗರ ನಿವಾಸದ ಬಳಿ ಸುರೇಶ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಇಡಿ ನೋಟಿಸ್ ರಾಜಕೀಯ ಷಡ್ಯಂತ್ರವೆಂದು ನಿಮಗೆ ಅನಿಸುತ್ತದೆಯೇ ಎಂದು ಕೇಳಿದಾಗ, "ವಿಚಾರಣೆಗೆ ಹೋದಾಗ ಇದರ ಬಗ್ಗೆ ತಿಳಿಯುತ್ತದೆ. ಅವರ ಪ್ರಶ್ನೆಗಳು ಯಾವ ಹಾದಿಯಲ್ಲಿವೆ, ವಿಚಾರಣೆಗೂ ಪ್ರಕರಣಕ್ಕೂ ಸಂಬಂಧ ಇದೆಯೋ ಇಲ್ಲವೋ ಎಂದು ತಿಳಿಯುತ್ತದೆ. ಜೊತೆಯಲ್ಲಿ ವಕೀಲರು ಇರುತ್ತಾರೆ. ನಂತರ ಯಾವುದಕ್ಕೆ ಸಂಬಂಧ‌ವಿದೆ, ಅಸಂಬದ್ಧವಾಗಿದೆ ಎನ್ನುವುದರ ಬಗ್ಗೆ ಚರ್ಚೆ ನಡೆಸುತ್ತೇವೆ" ಎಂದರು.

"ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಗಳು ಇಡಿ ಎಲ್ಲೆ ಮೀರಿ ನಡೆಯುತ್ತಿದೆ ಎಂದು ಅನೇಕ‌ ಬಾರಿ ಹೇಳಿವೆ. ಆದಾಗ್ಯೂ ಎಚ್ಚೆತ್ತುಕೊಂಡಿಲ್ಲ ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ ಎಂದರ್ಥ. ಅವರ ವ್ಯಾಪ್ತಿಯನ್ನು ಮೀರಿ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳುವುದು ನೋಡಿದರೆ ಸರ್ಕಾರವೊಂದರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎನಿಸುತ್ತಿದೆ. ಏನು ಮಾಡುತ್ತಾರೆ ಎಂದು ನೋಡೋಣ" ಎಂದು ಮಾರ್ಮಿಕವಾಗಿ ನುಡಿದರು.

ಐಶ್ವರ್ಯ ಗೌಡ ನಿಮ್ಮ ಹೆಸರು ಹೇಳಿಕೊಂಡು ವಂಚನೆ ಮಾಡಿದ್ದಾರೆ. ನಿಮ್ಮ ಅವರ ನಡುವೆ ಹಣಕಾಸಿನ ವ್ಯವಹಾರ ನಡೆದಿದೆಯೇ ಎಂದಾಗ, "ಆ ಮಹಿಳೆ ಹಾಗೂ ನಮ್ಮ ನಡುವೆ ಯಾವುದೇ ಹಣಕಾಸು ಹಾಗೂ ಇತರೇ ವಹಿವಾಟು ನಡೆದಿಲ್ಲ. ಅವರು ಮೂರ್ನಾಲ್ಕು ಬಾರಿ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಕೆಲವೊಂದು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ವಾಸ ಮಾಡುತ್ತಿದ್ದರು ಎನ್ನುವ ಕಾರಣಕ್ಕೆ ಅವರ ಆಯೋಜನೆಯ ಕಾರ್ಯಕ್ರಮಗಳಿಗೆ ಹೋಗಿದ್ದೇನೆ. ಇದರ ಹೊರತಾಗಿ ಬೇರೇನೂ ಇಲ್ಲ. ಇದರ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡುತ್ತೇನೆ" ಎಂದು ಸ್ಪಷ್ಟವಾಗಿ ನುಡಿದರು.

ನಟರೊಬ್ಬರು ನಿಮ್ಮ ದನಿ ಅನುಕರಣೆ ಮಾಡಿ ವಂಚನೆ ಎಸಗಿರುವ ಬಗ್ಗೆ ಕೇಳಿದಾಗ, "ಈ ಬಗ್ಗೆ ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ಈ ತನಿಖೆಯ ಬೆಳವಣಿಗೆ ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿಯಿಲ್ಲ" ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X