Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶಾಸಕ ಹಾರಿಸ್ ವಿರುದ್ಧ ಆಸ್ತಿ ವಿವರ...

ಶಾಸಕ ಹಾರಿಸ್ ವಿರುದ್ಧ ಆಸ್ತಿ ವಿವರ ಮುಚ್ಚಿಟ್ಟ ಆರೋಪ: ಮಧ್ಯಂತರ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ30 Jan 2024 8:41 PM IST
share
ಶಾಸಕ ಹಾರಿಸ್ ವಿರುದ್ಧ ಆಸ್ತಿ ವಿವರ ಮುಚ್ಚಿಟ್ಟ ಆರೋಪ: ಮಧ್ಯಂತರ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಆಸ್ತಿ ವಿವರ ಮುಚ್ಚಿಟ್ಟಿರುವುದು ಚುನಾವಣೆಗೆ ಹೇಗೆ ಅಡ್ಡಿಯಾಗುತ್ತದೆ ಎಂಬುದನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿಲ್ಲ ಎಂದು ಆಕ್ಷೇಪಿಸಿ ಶಾಸಕ ಎನ್.ಎ.ಹಾರಿಸ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಚುನಾವಣೆ ವೇಳೆ ಸಲ್ಲಿಸಲಾದ ಫಾರಂ ನಂ.26ರಲ್ಲಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾರಿಸ್ ತಮ್ಮ ಆಸ್ತಿ ವಿವರಗಳನ್ನು ಸರಿಯಾಗಿ ಘೋಷಿಸಿಲ್ಲ. ಹೀಗಾಗಿ, ಅವರನ್ನು ಅನರ್ಹಗೊಳಿಸಿ ತಮ್ಮನ್ನು ವಿಜಯಶಾಲಿ ಎಂದು ಘೋಷಿಸುವಂತೆ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಶಿವಕುಮಾರ್ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಆಕ್ಷೇಪಿಸಿ ಹಾರೀಸ್ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ಏಕಸದಸ್ಯ ಪೀಠ ಪೂರ್ಣಗೊಳಿಸಿದೆ.

ಹಾರೀಸ್ ಪರ ವಾದಿಸಿದ ವಕೀಲರು, ಆಸ್ತಿಯ ವಿಚಾರವನ್ನು ಮುಚ್ಚಿಟ್ಟಿದ್ದಾರೆ ಎಂದು ಆಕ್ಷೇಪಿಸಿ ಅರ್ಜಿ ಸಲ್ಲಿಸಲಾಗಿದೆ. ಆದರೆ, ಇದು ಹೇಗೆ ಚುನಾವಣೆಗೆ ಅಡ್ಡಿಪಡಿಸುತ್ತದೆ ಎಂಬುದನ್ನು ಅರ್ಜಿಯಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ, ಚುನಾವಣಾ ಅರ್ಜಿ ಊರ್ಜಿತವಾಗುವುದಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಅರ್ಜಿದಾರರ ಪರ ವಕೀಲರು, ಆಸ್ತಿ ವಿವರ ಮುಚ್ಚಿಟ್ಟಿರುವುದು ನಿಜವಾದರೆ ಅದನ್ನು ಸಾಬೀತುಪಡಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಚುನಾವಣಾಧಿಕಾರಿ ಉಮೇದುವಾರಿಕೆ ಸ್ವೀಕರಿಸಿದ್ದೇ ತಪ್ಪಾಗಲಿದೆ ಎಂಬುದರ ಕುರಿತು ಸುಪ್ರೀಂ ಕೋರ್ಟ್ ತೀರ್ಪಿದೆ. ಉಮೇದುವಾರಿಕೆ ಪರಿಶೀಲಿಸಿ ಚುನಾವಣಾಧಿಕಾರಿ ನಾಮಪತ್ರ ಸ್ವೀಕರಿಸಬೇಕಿತ್ತು ಎಂದು ತಿಳಿಸಿದರು.

ಹಾರಿಸ್ ಮಧ್ಯಂತರ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದರೆ ಶಿವಕುಮಾರ್ ಸಲ್ಲಿಸಿರುವ ಚುನಾವಣಾ ಅರ್ಜಿ ಅಮಾನ್ಯವಾಗಲಿದೆ. ಒಂದೊಮ್ಮೆ ಹಾರೀಸ್ ಅವರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದರೆ ಚುನಾವಣಾ ಅರ್ಜಿಯ ವಿಚಾರಣೆ ಮುಂದುವರಿಯಲಿದೆ.

ಪ್ರಕರಣವೇನು?: 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಎನ್.ಎ.ಹಾರಿಸ್ ತಮ್ಮ ಚರ ಮತ್ತು ಸ್ಥಿರಾಸ್ತಿಗಳ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಿಲ್ಲ. ಸುಳ್ಳು ಘೋಷಣೆಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

ಚರ ಮತ್ತು ಸ್ಥಿರಾಸ್ತಿಗಳನ್ನು ವಾಸ್ತವಕ್ಕಿಂತಲೂ ಕಡಿಮೆ ಅಂದಾಜಿನಲ್ಲಿ ದಾಖಲಿಸಿದ್ದಾರೆ. ಹೀಗಾಗಿ, ಈ ನಾಮಪತ್ರ ಸ್ವೀಕರಿಸಿರುವುದರಿಂದ ಅದು ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಉಂಟು ಮಾಡಿದ್ದು ಅವರನ್ನು ಅನರ್ಹಗೊಳಿಸಬೇಕು ಎಂದು ಅರ್ಜಿದಾರ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X