Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪತ್ನಿಗೆ ವರದಕ್ಷಿಣೆ ಕಿರುಕುಳ, ಕೊಲೆ...

ಪತ್ನಿಗೆ ವರದಕ್ಷಿಣೆ ಕಿರುಕುಳ, ಕೊಲೆ ಬೆದರಿಕೆ ಆರೋಪ: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ವಿರುದ್ಧ ಎಫ್‍ಐಆರ್ ದಾಖಲು

ಪತ್ನಿಗೆ ಮಾನಸಿಕ ಸಮಸ್ಯೆ ಇದ್ದು, ಆಕೆಗೆ ಚಿಕಿತ್ಸೆಯ ಅಗತ್ಯವಿದೆ ಎಂದ ಮಂಸೋರೆ

ವಾರ್ತಾಭಾರತಿವಾರ್ತಾಭಾರತಿ28 Jan 2024 10:03 PM IST
share
ಪತ್ನಿಗೆ ವರದಕ್ಷಿಣೆ ಕಿರುಕುಳ, ಕೊಲೆ ಬೆದರಿಕೆ ಆರೋಪ: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ಕನ್ನಡ ಸಿನಿಮಾ ನಿರ್ದೇಶಕ ಮಂಸೋರೆ ಅವರ ವಿರುದ್ಧ ಪತ್ನಿಗೆ ಮಾನಸಿಕ, ದೈಹಿಕ ಹಿಂಸೆ, ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಬೆದರಿಕೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿರುವುದು ವರದಿಯಾಗಿದೆ.

ಪತ್ನಿ ಅಖಿಲಾ ಸಿ. ಎಂಬುವರು ನೀಡಿದ ದೂರಿನನ್ವಯ ನಿರ್ದೇಶಕ ಮಂಸೋರೆ(ಎಸ್.ಮಂಜುನಾಥ್), ತಾಯಿ ವೆಂಕಟಲಕ್ಷ್ಮಮ್ಮ ಹಾಗೂ ಸಹೋದರಿ ಹೇಮಲತಾ ಎಂಬುವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿರುವುದಾಗಿ ತಿಳಿದುಬಂದಿದೆ.

ಪತ್ನಿ ಅಖಿಲಾ.ಸಿ. ತಮ್ಮ ದೂರಿನಲ್ಲಿ, ಪತಿ ಮಂಸೋರೆ(ಎಸ್.ಮಂಜುನಾಥ) ವೈವಾಹಿಕ ಜೀವನದ ಆರಂಭದಿಂದಲೂ ಕಿರುಕುಳ ನೀಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಸಿನಿಮಾ ಮಾಡಲು ನಮ್ಮ ಮನೆಯವರಿಂದ 10 ಲಕ್ಷ ರೂಪಾಯಿ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ಮಂಸೋರೆ, ಅವರ ತಾಯಿ ವೆಂಕಟಲಕ್ಷ್ಮಮ್ಮ ಹಾಗೂ ಸಹೋದರಿ ಹೇಮಲತಾ ತಮಗೆ 30 ಲಕ್ಷ ರೂ. ಮೌಲ್ಯದ ಎಸ್.ಯು.ವಿ ಕಾರು ಕೊಡಿಸುವಂತೆ ಪೀಡಿಸಿದ್ದಾರೆ. ಈ ವಿಷಯವನ್ನು ಎಲ್ಲಾದರೂ ಹೇಳಿದರೆ ಕೊಲ್ಲುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪತ್ನಿ ಆರೋಪಕ್ಕೆ ಪ್ರತಿಯಾಗಿ ಸಹಾಯಕ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ನಿರ್ದೇಶಕ ಮಂಸೋರೆ, ನನ್ನ ಪತ್ನಿ ಅಖಿಲಾ ಮಾನಸಿಕ ಅಸ್ವಸ್ಥರು. ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ನೀಡಿರುವ ಈ ದೂರನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ. ಅವರಿಗೆ ಮಾನಸಿಕ ಚಿಕಿತ್ಸೆಯ ಅಗತ್ಯತೆಯನ್ನು ಮನಗಾಣಬೇಕಿದೆ. ಬಳಿಕ ನಾವು ಒಟ್ಟಿಗಿರಬೇಕೆ ಅಥವಾ ಬೇಡವೇ ಎಂಬುದನ್ನು ನಿಶ್ಚಯಿಸುತ್ತೇವೆ ಎಂದು ತಿಳಿಸಿದ್ದಾರೆ.

ನನ್ನ ತಾಯಿಯನ್ನು ಮನೆಯಿಂದ ಹೊರಗೆ ಹಾಕುವಂತೆ ಆಕೆ ಹಠ ಹಿಡಿದಿದ್ದರು. ನನ್ನ ಹಾಗೂ ನನ್ನ ತಾಯಿಯ ಮೇಲೆ ದೈಹಿಕ ಹಲ್ಲೆಯನ್ನೂ ಮಾಡಿದ್ದಾರೆ. ನಾನು ನನ್ನ ಪತ್ನಿಯ ಕಡೆಯವರಿಂದ ವರದಕ್ಷಿಣೆ ಅಥವಾ ಉಡುಗೊರೆ ಪಡೆದಿಲ್ಲ. ನನ್ನ ಬ್ಯಾಂಕ್ ಖಾತೆ ಅಥವಾ ವ್ಯವಹಾರಗಳನ್ನು ಪರೀಕ್ಷೆಗೆ ಒಳಪಡಿಸಬಹುದು. ದೂರು ನೀಡುವ ಮುಂಚೆ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದ ದೃಶ್ಯ, ನನ್ನ ಹಾಗೂ ನನ್ನ ತಾಯಿಯ ವಿರುದ್ಧ ನಿಂದನೆ ಮಾಡಿರುವುದು, ಹಲ್ಲೆ ಮಾಡಿದ ವಿಡಿಯೋ ಸಾಕ್ಷಿಗಳಿವೆ. ಅವುಗಳನ್ನು ಅರ್ಜಿಯೊಟ್ಟಿಗೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ನಾನು ಅವರಿಗೆ ಕೊಡಿಸಿರುವ ಚಿನ್ನಾಭರಣದ ಜೊತೆಗೆ ತಮ್ಮ ಸಿನಿಮಾಕ್ಕೆ ಬಂದಿರುವ ರಾಷ್ಟ್ರಪ್ರಶಸ್ತಿ ಹಾಗೂ ಇತರೆ ಪದಕಗಳನ್ನೂ ಸಹ ತೆಗೆದುಕೊಂಡು ಹೋಗಿದ್ದಾರೆ. ಪತ್ನಿಯ ವಿರುದ್ಧ ದೂರು ಸಲ್ಲಿಸುವ ಉದ್ದೇಶ ನನಗಿಲ್ಲ. ಆಕೆಯ ಮಾನಸಿಕ ಸಮಸ್ಯೆಗೆ ಚಿಕಿತ್ಸೆ ಸಿಗಬೇಕೆಂಬುದು ನನ್ನ ಕಾಳಜಿ. ಪತ್ನಿ ಸಲ್ಲಿಸಿರುವ ಸುಳ್ಳು ದೂರುಗಳ ವಿರುದ್ಧ ನನಗೆ ರಕ್ಷಣೆ ಒದಗಿಸಿ ಎಂದು ಪತ್ರದಲ್ಲಿ ನಿರ್ದೇಶಕ ಮಂಸೋರೆ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X