ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಮಹಿಳಾ ಅಭ್ಯರ್ಥಿಗಳ ದುರುಪಯೋಗ : ಆರೋಪ

ಬೆಂಗಳೂರು : ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಮಹಿಳಾ ಉದ್ಯೋಗಾಕಾಂಕ್ಷಿಗಳನ್ನು ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಕಾಂತರಾಜು ಆರೋಪಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹೆಣ್ಣು ಮಕ್ಕಳನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿ ದುರ್ಬಳಕೆ ಮಾಡಿಕೊಂಡು ಅಲ್ಲಿಯೇ ಪರೀಕ್ಷೆ ಬರೆಸಿರುವ ಬಗ್ಗೆ ತಮ್ಮ ಬಳಿ ದಾಖಲೆಗಳಿವೆ. ಈ ರೀತಿ ಅಧಿಕಾರಿಗಳ ಕಿರುಕುಳವನ್ನು ಅನುಭವಿಸಿದವರು ತಮ್ಮ ಸ್ನೇಹಿತೆಯರ ಬಳಿ ಹೇಳಿಕೊಂಡಿದ್ದಾರೆ ಎಂದರು.
ಕೆಪಿಎಸ್‌ಸಿ ಹಗರಣಗಳ ತನಿಖೆ ನಡೆಸುತ್ತಿರುವ ಸಿಐಡಿ ಮತ್ತು ಈ.ಡಿ. ಸಂಸ್ಥೆಗಳು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸತ್ಯಾಂಶ ಹೊರ ಬರಬೇಕಾದರೆ, ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮಗಳಾಗುವವರೆಗೂ ಹೋರಾಟ ಮುಂದುವರಿಸಲಾಗುತ್ತದೆ ಎಂದು ಅವರು ಹೇಳಿದರು.
Next Story




