Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಖಾಸಗಿ ಬ್ಯಾಂಕ್‍ನಿಂದ ಕಿರುಕುಳ ಆರೋಪ:...

ಖಾಸಗಿ ಬ್ಯಾಂಕ್‍ನಿಂದ ಕಿರುಕುಳ ಆರೋಪ: ವಿಧಾನಸೌಧದ ಮುಂದೆ ದಂಪತಿ ಆತ್ಮಹತ್ಯೆಗೆ ಯತ್ನ

ವಾರ್ತಾಭಾರತಿವಾರ್ತಾಭಾರತಿ10 Jan 2024 6:40 PM IST
share
ಖಾಸಗಿ ಬ್ಯಾಂಕ್‍ನಿಂದ ಕಿರುಕುಳ ಆರೋಪ: ವಿಧಾನಸೌಧದ ಮುಂದೆ ದಂಪತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಖಾಸಗಿ ಬ್ಯಾಂಕ್‍ನಿಂದ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯದ ಆಡಳಿತದ ಶಕ್ತಿಕೇಂದ್ರ ವಿಧಾನಸೌಧದ ಮುಂದೆ ಸೀಮೆ ಎಣ್ಣೆ ಸುರಿದು ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ಜ.10ರ ಬೆಳಗ್ಗೆ 11.45ರ ಸುಮಾರಿಗೆ ವಿಧಾನಸೌಧ ಮೂರನೆ ಗೇಟ್ ಬಳಿ ಈ ಘಟನೆ ನಡೆದಿದ್ದು, ಜೆ.ಜೆ.ನಗರದ ಗೋರಿಪಾಳ್ಯ ನಿವಾಸಿಗಳಾದ ಮುಹಮ್ಮದ್ ಇನಾಯತ್ ಉಲ್ಲಾ(55) ಅವರ ಪತ್ನಿ ಶಾಹಿಸ್ತಾಬಾನು ಕುಟುಂಬ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ವಿಧಾನಸೌಧ ಠಾಣೆ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ದಂಪತಿ ಚನ್ನಪಟ್ಟಣದಲ್ಲಿರುವ ತಮ್ಮ ಜಮೀನಿನಲ್ಲಿ ಶುಂಠಿ ಬೆಳೆಯಲು ‘ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿ.’ ಚಾಮರಾಜಪೇಟೆ ಶಾಖೆಯಲ್ಲಿ 50ಲಕ್ಷ ರೂ.ಸಾಲ ತೆಗೆದುಕೊಂಡಿದ್ದರು. ಅದಕ್ಕೆ ಪ್ರತಿಯಾಗಿ ಈವರೆಗೂ ಸುಮಾರು 97ಲಕ್ಷ ರೂ.ಹಣವನ್ನು ಬ್ಯಾಂಕ್‍ಗೆ ಪಾವತಿಸಿದರೂ, ಸಾಲ ಬಾಕಿ ಇದೆ ಎಂದು ತಿಳಿಸಿದ ಬ್ಯಾಂಕ್‍ನವರು ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮನೆಯನ್ನು ಹರಾಜು ಮಾಡಿದ್ದಾರೆ. ಇದರಿಂದ ನಮಗೆ ಅನ್ಯಾಯವಾಗಿದೆ ಎಂದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಆರೋಪಿದ್ದಾರೆ.

ಈ ಬಗ್ಗೆ ಹಲವು ಬಾರಿ ಸ್ಥಳೀಯ ಶಾಸಕರೂ ಆಗಿರುವ ಸಚಿವ ಝಮೀರ್ ಅಹ್ಮದ್ ಖಾನ್ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನ್ಯಾಯ ಕೇಳಲು ವಿಧಾನಸೌಧ ಬಳಿ ಬಂದಿದ್ದೇವೆ ಎಂದು ದಂಪತಿಗಳು ಮಾಧ್ಯಮ ಪ್ರತಿನಿಧಿಗಳ ಮುಂದೆ ತಮ್ಮ ಅಳಲು ತೋಡಿಕೊಂಡರು.

ಮುಖ್ಯಮಂತ್ರಿ ಭೇಟಿಗೂ ಮುನ್ನ ಸೀಮೆಎಣ್ಣೆ ಕ್ಯಾನ್ ಸಮೇತ ವಿಧಾನಸೌಧದ ಮೂರನೆ ಗೇಟ್ ಬಳಿ ಬಂದ ದಂಪತಿ, ಏಕಾಏಕಿ ಸೀಮೆಎಣ್ಣೆ ಸುರಿದುಕೊಂಡಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಇನ್‍ಸ್ಪೆಕ್ಟರ್ ಕುಮಾರಸ್ವಾಮಿ ಗಮನಿಸಿದ್ದು, ಸೀಮೆಎಣ್ಣೆ ಕ್ಯಾನ್ ಕಿತ್ತುಕೊಂಡು, ದಂಪತಿಯನ್ನು ವಶಕ್ಕೆ ಪಡೆದಿದ್ದಾರೆ. ದಂಪತಿಯನ್ನು ರಕ್ಷಿಸುವ ವೇಳೆ ಇನ್‍ಸ್ಪೆಕ್ಟರ್ ಅವರ ಮೈಮೇಲೂ ಸೀಮೆಎಣ್ಣೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಗೊತ್ತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X