Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಕ್ರಮ ಆಸ್ತಿಗಳಿಕೆ ಆರೋಪ : ರಾಜ್ಯದ...

ಅಕ್ರಮ ಆಸ್ತಿಗಳಿಕೆ ಆರೋಪ : ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ8 Jan 2025 10:55 PM IST
share
ಅಕ್ರಮ ಆಸ್ತಿಗಳಿಕೆ ಆರೋಪ : ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು : ಅಕ್ರಮ ಆಸ್ತಿಗಳಿಕೆ ಆರೋಪದಡಿ ಹಲವು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಇಲಾಖೆಯ 8 ಮಂದಿ ಸರಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ತುಮಕೂರು, ಗದಗ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಸರಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಚೇರಿ ಹಾಗೂ ಫಾರ್ಮ್‍ಹೌಸ್‍ಗಳಲ್ಲಿ ಲೋಕಾಯುಕ್ತ ಪೊಲೀಸರು ನಗದು, ಚಿನ್ನಾಭರಣ ಹಾಗೂ ಆಸ್ತಿ ಪತ್ರಗಳ ವಶಕ್ಕೆ ಪಡೆದು ಪರಿಶೀಲನೆ ಕಾರ್ಯ ಕೈಗೊಂಡರು.

ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ.ಎಸ್.ಎನ್.ಉಮೇಶ್, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ, ಬೆಳಗಾವಿಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್ ಗಾಯಕ್ವಾಡ್, ಗದಗ-ಬೆಟಗೇರಿ ಪುರಸಭೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್, ರಾಯಚೂರು ಜಿಲ್ಲೆಯ ಬೆಸ್ಕಾಂ ಕಿರಿಯ ಇಂಜಿನಿಯರ್ ಹುಲಿರಾಜ್, ಬಳ್ಳಾರಿಯ ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಆರ್.ಎಚ್.ಲೋಕೇಶ್ ಹಾಗೂ ತುಮಕೂರಿನ ನಿವೃತ್ತ ಆರ್‍ಟಿಒ ಅಧಿಕಾರಿ ಎಸ್.ರಾಜು ಅವರುಗಳ ನಿವಾಸ ಮತ್ತು ಕಚೇರಿಗಳ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದರು.

ಅಧಿಕಾರಿಗಳ ಸಂಬಂಧಿಕರು ಹಾಗೂ ಸ್ನೇಹಿತರ ನಿವಾಸದ ಮೇಲೂ ಅಧಿಕಾರಿಗಳು ದಾಳಿ ಕೈಗೊಂಡರು. ಒಟ್ಟಾರೆ ದಾಳಿಯಲ್ಲಿ ಚಿನ್ನಾಭರಣ, ನಗದು ಮತ್ತು ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X