Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಪ್ರಧಾನಿ ಮೋದಿ’ ಅಮಿತ್ ಶಾರನ್ನು...

‘ಪ್ರಧಾನಿ ಮೋದಿ’ ಅಮಿತ್ ಶಾರನ್ನು ವಜಾಗೊಳಿಸಬೇಕು : ದಸಂಸ ಒಕ್ಕೂಟ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ23 Jan 2025 10:47 PM IST
share
‘ಪ್ರಧಾನಿ ಮೋದಿ’ ಅಮಿತ್ ಶಾರನ್ನು ವಜಾಗೊಳಿಸಬೇಕು : ದಸಂಸ ಒಕ್ಕೂಟ ಎಚ್ಚರಿಕೆ

ಬೆಂಗಳೂರು : ‘ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಮಂಡಿಯೂರಿ ಕ್ಷಮೆ ಕೇಳಬೇಕು. ಜತೆಗೆ ಪ್ರಧಾನಿ ಮೋದಿಗೆ ಕನಿಷ್ಟ ಜವಾಬ್ದಾರಿ ಇದ್ದರೆ ಅಂಬೇಡ್ಕರ್‌ಗೆ ಅಪಮಾನ ಮಾಡಿದ ಅಮಿತ್‍ರನ್ನು ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ನಿಮ್ಮನ್ನೇ ಮನೆಗೆ ಕಳಿಸಬೇಕಾಗುತ್ತದೆ’ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಎಚ್ಚರಿಕೆ ನೀಡಿದೆ.

ಗುರುವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಯನ್ನು ಖಂಡಿಸಿ, ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ‘ಸಂವಿಧಾನ- ಮನುವಾದ’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ, ‘ಸಂವಿಧಾನದ ಆಧಾರದಲ್ಲಿ ರಚನೆಯಾದ ಸದನದಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಸಿದರು.

ಗುಜರಾತ್‍ನಲ್ಲಿ ಕೊಲೆ ಆರೋಪದಡಿಯಲ್ಲಿ ಗಡಿಪಾರಾದ, ಗೋದ್ರಾ ನರಮೇಧದ ರೂವಾರಿಗಳಲ್ಲಿ ಒಬ್ಬರಾದ ಅಮಿತ್ ಶಾ, ದುಷ್ಟ ಮನಸ್ಥಿತಿಯ ಮನುಷ್ಯ. ಅದಕ್ಕಾಗಿಯೇ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ದೇಶದ ಕೋಮುವಾದದ ರುವಾರಿಯಾದ, ದೇಶದಲ್ಲಿ ಅರಾಜಕತೆಯನ್ನು ಉಂಟುಮಾಡುವ ನರೇಂದ್ರ ಮೋದಿ ಅವರು ಅಮಿತ್ ಶಾ ಹೇಳಿರುವುದು ಸರಿಯಾಗಿದೆ ಎಂಬ ವಾದವನ್ನು ಮಾಡುತ್ತಿರುವುದು ಕೂಡ ಖಂಡನೀಯ ಎಂದು ಅವರು ಟೀಕಿಸಿದರು.

ಮೋದಿ ನೇತೃತ್ವದ ಸರಕಾರದ ಮಾಡುತ್ತಿರುವ ಅನ್ಯಾಯವನ್ನು ಮಲ್ಲಿಕಾರ್ಜುನ ಖರ್ಗೆಯವರು ಬಯಲಿಗೆಳೆಯುತ್ತಿದ್ದಾರೆ. ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿ ಅನೇಕ ಆಪಾದನೆಯನ್ನು ಮಾಡಿ, ಅವರನ್ನು ಜೈಲಿಗೆ ಕಳಿಸುವ ಪಿತೂರಿಯನ್ನು ಮಾಡಲಾಗುತ್ತಿದೆ ಎಂದು ಇಂದೂಧರ ಹೊನ್ನಾಪುರ ತಿಳಿಸಿದರು.

ಅಂಬೇಡ್ಕರ್ ಅವರು ನಮಗೆ ಅರಿವು, ತಿಳವಳಿಕೆಯನ್ನು ಕೊಟ್ಟಿದ್ದಾರೆ. ಕೋಮುವಾದದ ಸಂಚುಗಳನ್ನು ಬಯಲು ಮಾಡುವ ಚೈತನ್ಯ ದೇಶದ ದಲಿತ ಮತ್ತು ಹಿಂದುಳಿದ ಸಮುದಾಯಗಳಿಗೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ದಸಂಸ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಹಿಂದೆ ಮನುಸ್ಮೃತಿ ದೇಶದ ದುಡಿಯುವ ಜನರನ್ನು, ಶೂದ್ರರನ್ನು ಸಾವಿರಾರು ವರ್ಷ ತುಳಿದಿದೆ. ಆ ಕಾಲನ್ನು ಮುರಿದಿದ್ದು ನಮ್ಮ ದೇಶದ ಸಂವಿಧಾನ. ನಾವು ಉಸಿರಾಡಲು ಮೂಲ ಕಾರಣ ಕೂಡ ಸಂವಿಧಾನವಾಗಿದೆ. ಅಂಬೇಡ್ಕರ್ ಅವರ ಅನುಯಾಯಿಗಳು, ವಂಶಸ್ಥರು ಜೇನುಗೂಡು ಇದ್ದಂಗೆ ಅದಕ್ಕೆ ಕೈಯಿಟ್ಟರೆ ನಿಮ್ಮನ್ನು ಸರ್ವನಾಶ ಮಾಡುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಹೋರಾಟಗಾರ್ತಿ ಇಂದಿರಾ ಕೃಷ್ಣಪ್ಪ, ಮುಖಂಡರಾದ ಗುರುಪ್ರಸಾದ್ ಕೆರೆಗೋಡು, ವಿ. ನಾಗರಾಜ್, ಎನ್.ಮುನಿಸ್ವಾಮಿ, ಜೀವನಹಳ್ಳಿ ವೆಂಕಟೇಶ್, ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರದಾನ ಸಂಚಾಲಕ ರಾಮಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X