ಆನೇಕಲ್ | ರೈಲ್ವೆ ಸೇತುವೆ ಬಳಿಯಿದ್ದ ಸೂಟ್ ಕೇಸ್ನಲ್ಲಿ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜಧಾನಿ ಬೆಂಗಳೂರಿನ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಸೇತುವೆಯ ಬಳಿ ಸೂಟ್ಕೇಸ್ನಲ್ಲಿ ಯುವತಿಯ ಮೃತದೇಹ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಮೇ 21ರ ಬುಧವಾರ ಸ್ಥಳೀಯ ನಿವಾಸಿಗಳು ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಹರಿದ ನೀಲಿ ಬಣ್ಣದ ಸೂಟ್ಕೇಸ್ನಲ್ಲಿ ಯುವತಿಯ ಮೃತದೇಹ ಇರುವುದನ್ನು ಪತ್ತೆಹಚ್ಚಿದ್ದು, ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರು ನೀಡಿ ಪರಿಶೀಲಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಯುವತಿಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಮತ್ತು ಸೂಟ್ಕೇಸ್ನಲ್ಲಿ ತುಂಬಿದ್ದ ಮೃತದೇಹವನ್ನು ಚಲಿಸುವ ರೈಲಿನಿಂದ ಹೊರಗೆ ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಮೃತದೇಹದ ಮೇಲೆ ನಮಗೆ ಯಾವುದೇ ಗುರುತಿನ ದಾಖಲೆಗಳು ಕಂಡುಬಂದಿಲ್ಲ ಮತ್ತು ಯುವತಿಯ ಹೆಸರು, ವಯಸ್ಸು ಸಹಿತ ಇತರೆ ವಿವರಗಳನ್ನು ತನಿಖೆಯಲ್ಲಿ ಪತ್ತೆಹಚ್ಚಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಮೃತದೇಹವನ್ನು ನಗರದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.





