Anekal | ಆನೆ ದಂತ ಕಳ್ಳಸಾಗಣೆ; ಮೂವರು ಆರೋಪಿಗಳ ಬಂಧನ

ಸಾಂದರ್ಭಿಕ ಚಿತ್ರ | PC : AI
ಬೆಂಗಳೂರು : ಆನೆ ದಂತ ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿರುವ ಆನೇಕಲ್ ಪೊಲೀಸರು ಏಳು ಆನೆ ದಂತಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ಮುತ್ಯಾಲಮಡುವು ಸಮೀಪ ಪೊಲೀಸರ ಈ ಕಾರ್ಯಾಚರಣೆ ನಡೆದಿದ್ದು, ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಸತೀಶ್ವರನ್, ಶರತ್ ಕುಮಾರ್ ಮತ್ತು ಶಂಕರ್ ಎಂದು ಗುರುತಿಸಲಾಗಿದೆ.
ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ವನ್ಯಜೀವಿ ಬೇಟೆ ಮತ್ತು ದಂತ ಹಾಗೂ ಜಿಂಕೆ ಮಾಂಸ ಸಾಗಾಣಿಕೆ ಬಗ್ಗೆ ಲಭ್ಯವಾದ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಈ ಕಾರ್ಯಾಚರಣೆ ಕೈಗೊಂಡಿದ್ದರು.
Next Story




