Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬ್ಯಾರಿ ಸಮುದಾಯ ಶಿಕ್ಷಣಕ್ಕೆ ಹೆಚ್ಚು...

ಬ್ಯಾರಿ ಸಮುದಾಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಸ್ವಾಗತಾರ್ಹ: ಎಲ್.ಕೆ.ಅತೀಕ್

ವಾರ್ತಾಭಾರತಿವಾರ್ತಾಭಾರತಿ28 Jun 2026 12:00 PM IST
share
ಬ್ಯಾರಿ ಸಮುದಾಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಸ್ವಾಗತಾರ್ಹ: ಎಲ್.ಕೆ.ಅತೀಕ್
ಬೆಂಗಳೂರು: ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು, ಜೂ.28: ಶಿಕ್ಷಣ ಯಾವುದೇ ಒಂದು ಶಿಕ್ಷಿತ ಸಮಾಜಕ್ಕೆ ಬುನಾದಿ. ಆದರೆ, ಈ ಸಂದೇಶವನ್ನು ನಾವು ಪುನಃ ಪುನಃ ಹೇಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬ್ಯಾರಿ ಸಮುದಾಯವು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್ ಹೇಳಿದ್ದಾರೆ.

ರವಿವಾರ ನಗರದ ಎಚ್.ಬಿ.ಆರ್.ಬಡಾವಣೆಯಲ್ಲಿರುವ ಬ್ಯಾರೀಸ್ ಸೌಹಾರ್ದ ಭವನದಲ್ಲಿ ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಆಯೋಜಿಸಲಾಗಿದ್ದ 2026ನೇ ಸಾಲಿನ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.

ಸೈಯದ್ ಮುಹಮ್ಮದ್ ಬ್ಯಾರಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಈ ಸುಂದರ ಬ್ಯಾರಿ ಸೌಹಾರ್ದ ಭವನ ನಿರ್ಮಾಣ ಸಾಧ್ಯವಾಯಿತು. ಸರಕಾರದಿಂದಲೂ ಈ ಭವನ ನಿರ್ಮಾಣಕ್ಕೆ ಸಹಕಾರ ನೀಡಲಾಗಿತ್ತು. ಮಹಿಳೆಯರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ರೀತಿಯಲ್ಲಿ ಈ ಭವನದ ಸದ್ಭಳಕ್ಕೆ ಮಾಡುತ್ತಿರುವುದು ಶ್ಲಾಘನೀಯ ಎಂದು ಅತೀಕ್ ಹೇಳಿದರು.

ಸುಶಿಕ್ಷಿತರಾಗಿ ತಮ್ಮ ಸಾಮರ್ಥ್ಯ ವನ್ನು ಹೆಚ್ಚಳ ಮಾಡಿಕೊಳ್ಳಿ. ನೀವು ಯಾವ ಮಾಧ್ಯಮ ದಲ್ಲಿ ಶಿಕ್ಷಣ ಪಡೆಯುತ್ತೀರಿ ಅನ್ನೋದು ಮುಖ್ಯ ಅಲ್ಲ. ನೀವು ಏನು ಕಲಿಯುತ್ತೀರಾ, ಎಷ್ಟು ಪರಿಶ್ರಮ ಹಾಕುತ್ತೀರಿ ಅನ್ನೋದು ಮುಖ್ಯ ಎಂದು ಎಲ್.ಕೆ.ಅತೀಕ್ ಹೇಳಿದರು.

ಬೇರೆಯವರನ್ನು ದೂಷಿಸುವ ಮೊದಲು ನಾವು ಸಮಾಜಕ್ಕೆ ಏನು ಕೊಟ್ಟಿದ್ದೇವೆ ಅದನ್ನು ನೋಡಬೇಕು ಎಂದು ಅತೀಕ್ ತಿಳಿಸಿದರು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ, ವಿದ್ಯಾರ್ಥಿಗಳು ದೊಡ್ಡ ದೊಡ್ಡ ಕನಸು ಕಾಣಬೇಕು. ಆಗ ಮಾತ್ರ ಅವುಗಳನ್ನು ನನಸಾಗಿಸುವ ಸ್ಫೂರ್ತಿ ಸಿಗುತ್ತದೆ. ಎಲ್.ಕೆ. ಅತೀಕ್ ರೀತಿ ನಾನು ಸಹ ಉರ್ದು ಮಾಧ್ಯಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದವನು. ನಾವು ಕಂಡ ಕನಸುಗಳೇ ನಮಗೆ ಸ್ಫೂರ್ತಿ ಆದವು ಎಂದು ಹೇಳಿದರು.

ಇದೇ ವೇಳೆ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ವ್ಯಸನ ಹಾಗೂ ದುಶ್ಚಟಗಳಿಂದ ದೂರವಿರಿ, ಸೈಬರ್ ವಂಚನೆಗಳಿಂದ ಎಚ್ಚರವಾಗಿರಿ ಹಾಗೂ ಸಂಚಾರ ನಿಯಮಗಳನ್ನು ಪಾಲಿಸಿ ಎಂದು ಅವರು ಸಲಹೆ ನೀಡಿದರು.

ಆರ್.ಟಿ.ನಗರದ ಪ್ರೆಸಿಡೆನ್ಸಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಗೂ ರಾಷ್ಟ್ರಗೀತೆ ಪ್ರಸ್ತುತಪಡಿಸಿದರು. ಅಕ್ಬರ್ ಅಲಿ ಮತ್ತು ತಂಡದವರು ಬ್ಯಾರಿ ಧ್ಯೇಯ ಗೀತೆ ಹಾಡಿದರು.

ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಅಡೂರ್ ಶಂಶುದ್ದೀನ್ ಸ್ವಾಗತ ಭಾಷಣ ಮಾಡಿದರು.

ವೇದಿಕೆಯಲ್ಲಿ ಬ್ಯಾರೀಸ್ ಗ್ರೂಪ್ ಅಧ್ಯಕ್ಷ್ ಸೈಯದ್ ಮುಹಮ್ಮದ್ ಬ್ಯಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಂ.ಫಾರೂಕ್, ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್

ಆಡಳಿತ ಮಂಡಳಿ ಸದಸ್ಯರಾದ ಉಮರ್ ಟೀಕೆ, ಡಾ.ಮಕ್ಸೂದ್ ಅಹ್ಮದ್ ಉಪಸ್ಥಿತರಿದ್ದರು.

ವರ್ಷದ ಪ್ರಶಸ್ತಿ ಪ್ರದಾನ

ಮಂಗಳೂರಿನ ಶಿಕ್ಷಕ ಹಾಗೂ ಸಮಾಲೋಚಕ, ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ಅವರಿಗೆ 2026ನೇ ಸಾಲಿನ ವರ್ಷದ ಬ್ಯಾರಿ ಹಾಗೂ ಸಮಾಜ ಸೇವಕಿ ಆಯಿಷಾ ಬಾನು ಕಾರ್ಕಳ ಅವರಿಗೆ ವರ್ಷದ ಬ್ಯಾರ್ದಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದಲ್ಲದೆ, 264 ವಿದ್ಯಾರ್ಥಿಗಳಿಗೆ ಪತ್ರಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

Tags

BengaluruAnnual AwardsBearys Welfare Association
share
ವಾರ್ತಾಭಾರತಿ
ವಾರ್ತಾಭಾರತಿ
Next Story
X