ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆ: ಸುವ್ಯವಸ್ಥೆ ಕುರಿತಂತೆ ಗೃಹಸಚಿವರಿಂದ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಗೃಹ ಸಚಿವ ಡಾ ಜಿ.ಪರಮೇಶ್ವರ್ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆ ನಡೆಸಿದರು.
ಪೊಲೀಸ್ ಪ್ರಗತಿ ಪರಿಶೀಲನೆ ನಡೆಸಿ, ಸುವ್ಯವಸ್ಥೆ ಕುರಿತಂತೆ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಹಿರಿಯ ಐಎಎಸ್ ಅಧಿಕಾರಿ ಗೌರವ ಗುಪ್ತಾ, ಸಿಐಡಿ ಸೈಬರ್ ಅಪರಾಧಗಳು ಮತ್ತು ಮಾದಕ ವಸ್ತು ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಪ್ರಣವ್ ಮಹಾಂತಿ, ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ಡಿಜಿ ಪ್ರಶಾಂತ್ ಕುಮಾರ್ ಠಾಕೂರ್, ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಡಿಜಿ ಮಾಲಿನಿ ಕೃಷ್ಣಮೂರ್ತಿ ಹಾಗೂ ರಾಜ್ಯದ ಎಲ್ಲಯಗಳ ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಉಪಸ್ಥಿತರಿದ್ದರು.
Next Story







