ರಾಜ್ಯಮಟ್ಟದ ‘ಕಲಾಶ್ರೀ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಅ.19: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲ ಭವನ ಸೊಸೈಟಿ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಬಾಲಭವನದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ನವೆಂಬರ್ನಲ್ಲಿ ಪ್ರತಿಭಾವಂತ ಮಕ್ಕಳಿಗಾಗಿ ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ ಹಾಗೂ ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸೇರಿದಂತೆ ನಾಲ್ಕು ವಿಭಾಗಗಳಲ್ಲಿ ರಾಜ್ಯ ಮಟ್ಟದ ‘ಕಲಾಶ್ರೀ’ ಕಾರ್ಯಕ್ರಮ ಆಯೋಜಿಸಲಾಗಿದೆ.
9 ರಿಂದ 16 ವರ್ಷದೊಳಗಿನ ಪ್ರತಿಭಾವಂತ ಮಕ್ಕಳು ಹಾಗೂ ‘ಕಲಾಶ್ರೀ ಪ್ರಶಸ್ತಿ’ಗೆ ಮಕ್ಕಳನ್ನು ಆಯ್ಕೆ ಮಾಡಲು ಅರ್ಹ ಹಾಗೂ ಪರಿಣಿತ ತೀರ್ಪುಗಾರರಿಂದಲೂ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಬಾಲಭವನ ಸೊಸೈಟಿ, ಕಬ್ಬನ್ ಪಾರ್ಕ್ ಬೆಂಗಳೂರು ಇಲ್ಲಿ ನ.5ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಬಾಲಭವನ ಸೊಸೈಟಿ, ಕಬ್ಬನ್ ಪಾರ್ಕ್ ಬೆಂಗಳೂರು ಅಥವಾ ದೂ.ಸಂಖ್ಯೆ 080-2286 4189, 2286 1423, ಇಮೇಲ್ secybalbhavan.bng@gmail.com, www.hawaharbalbhavan.com ಅನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.




