ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : 2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ದಲ್ಲಿ ನೀಡಲಾಗುತ್ತಿದೆ.
ಈ ತರಬೇತಿಯಲ್ಲಿ ಪಾಲ್ಗೊಳ್ಳಲು ಆಸಕ್ತಿಯಿರುವ ಅಭ್ಯರ್ಥಿಗಳಿಂದ ಜಾಲತಾಣ https://minority-skill-form.vercel.app/ ಮೂಲಕ ನ.10ರವೆರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story




