Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ...

ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

ವಾರ್ತಾಭಾರತಿವಾರ್ತಾಭಾರತಿ9 Aug 2026 12:05 PM IST
share
ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ
ನಾಳೆಯಿಂದ ಕರ್ತವ್ಯ ನಿರ್ವಹಣೆ

ಬೆಂಗಳೂರು: ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಆಗಸ್ಟ್ 13ರಿಂದ 27ರವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನ ಸಭೆ ಅಧಿವೇಶನವನ್ನು ಅವರು ನಡೆಸಿಕೊಡಲಿದ್ದು, ಸೋಮವಾರ ವಿಧಾನಸಭಾ ಅಧ್ಯಕ್ಷರ ಕಚೇರಿಗೆ ತೆರಳಿ ಕಾರ್ಯ ಆರಂಭಿಸಲಿದ್ದಾರೆ.

ಅಧಿವೇಶನದ ಮೊದಲ ದಿನವಾದ ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಡಿ ಸುಧಾಕರ್, ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಸೇರಿದಂತೆ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು. ಶುಕ್ರವಾರದಿಂದ ನಿಗದಿತ ವೇಳಾಪಟ್ಟಿಯಂತೆ ಕಲಾಪ ನಡೆಯಲಿದೆ.

ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಂದರ್ಭದಲ್ಲಿ ಅವರೊಂದಿಗೆ ಡಾ.ಜಿ.ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರುಗಳಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಕಳೆದ ಸೋಮವಾರ ನಡೆದ ಮೊದಲ ಸಂಪುಟ ವಿಸ್ತರಣೆಯಲ್ಲಿ ಸಚಿವರಾದ 19 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಬೇಕಿದ್ದು, ಅಧಿವೇಶನ ಆರಂಭಕ್ಕೆ ಮುನ್ನ ಸಚಿವರುಗಳಿಗೆ ಖಾತೆಗಳನ್ನು ಹಂಚುವ ಸಂಭವವಿದೆ.

ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆಗಳು, ವಿಧೇಯಕಗಳ ಮಂಡನೆ, ನೂತನ ವಿಧಾನಸಭಾ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ಪ್ರಸ್ತಾವ , ಅರ್ಧ ಗಂಟೆ ಕಾಲಾವಧಿ ಚರ್ಚೆ, ಶೂನ್ಯ ವೇಳೆ, ನಿಯಮ 69 ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ, ಅಧಿಕೃತ ನಿರ್ಣಯಗಳು, ವರದಿಗಳನ್ನು ಒಪ್ಪಿಸುವುದು ಸೇರಿದಂತೆ ಕಾರ್ಯಕಲಾಪಗಳ ಪಟ್ಟಿ ಸಿದ್ಧಪಡಿಸಲು ಜಯಚಂದ್ರ ಗಮನ ವಹಿಸಲಿದ್ದಾರೆ.

ಮುಂಗಾರು ಮಳೆ ಸಕಾಲಕ್ಕೆ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಿಕೆ, ಬಿಡದಿ ಟೌನ್ ಷಿಪ್ ವಿಷಯಗಳು ಸದನಗಳಲ್ಲಿ ತೀವ್ರ ಚರ್ಚೆಯಾಗುವ ನಿರೀಕ್ಷೆಗಳಿವೆ.

16ನೇ ವಿಧಾನಸಭೆಯ ಎಂಟನೇ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನ ಸೋಮವಾರದಿಂದ ಆರಂಭಿಸುವುದಾಗಿ ಟಿ.ಬಿ ಜಯಚಂದ್ರ ತಿಳಿಸಿದ್ದಾರೆ.

1978ರಲ್ಲಿ ಮೊದಲ ಬಾರಿಗೆ ಶಾಸಕರಾದ ಅವರು, 7 ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ, ವಿಧಾನಸಭೆಯ ಉಪನಾಯಕರಾಗಿ ಹಾಗೂ ಕರ್ನಾಟಕ ಸರ್ಕಾರದ ದಿಲ್ಲಿ ವಿಶೇಷ ಪ್ರತಿನಿಧಿಯಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ.

Tags

Assembly SessionT.B. JayachandrPro-Tem Speaker
share
ವಾರ್ತಾಭಾರತಿ
ವಾರ್ತಾಭಾರತಿ
Next Story
X