Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನೇಹಾ ಹತ್ಯೆ ಪ್ರಕರಣ ಮುಚ್ಚಿಹಾಕುವ ಯತ್ನ:...

ನೇಹಾ ಹತ್ಯೆ ಪ್ರಕರಣ ಮುಚ್ಚಿಹಾಕುವ ಯತ್ನ: ಆರ್.ಅಶೋಕ್ ಆರೋಪ

ವಾರ್ತಾಭಾರತಿವಾರ್ತಾಭಾರತಿ30 April 2024 12:44 PM IST
share
ನೇಹಾ ಹತ್ಯೆ ಪ್ರಕರಣ ಮುಚ್ಚಿಹಾಕುವ ಯತ್ನ: ಆರ್.ಅಶೋಕ್ ಆರೋಪ

ಬೆಂಗಳೂರು, ಎ.30: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣವನ್ನು ಜನರು ಮೂರೋ ಆರೋ ತಿಂಗಳ ನಂತರ ಮರೆತ ಬಳಿಕ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಕಾಲೇಜ್ ಕ್ಯಾಂಪಸ್ ನಲ್ಲಿ ಇತ್ತೀಚೆಗೆ ಕೊಲೆಯಾದ ನೇಹಾ ಹಿರೇಮಠ ಅವರ ನಿವಾಸಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ಭೇಟಿ ನೀಡಿ, ನಿರಂಜನ ಹಿರೇಮಠ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.

ಸಮರ್ಥ ಸಾಕ್ಷಿ ಬೇಕು. ದಾಖಲೆಗಳನ್ನು ಸರಿಯಾಗಿ ಸಂಗ್ರಹ ಮಾಡಬೇಕಿತ್ತು. ಕಳೆದ ಹತ್ತಾರು ದಿನಗಳಿಂದ ಆರೋಪಿ ಜೊತೆ ಸಂಪರ್ಕದಲ್ಲಿದ್ದವರ ಫೋನ್ ಕರೆಗಳ ವಿವರ ಯಾಕೆ ಸಂಗ್ರಹಿಸಿಲ್ಲ? ಅವನು ಮಾದಕ ದ್ರವ್ಯ ಸೇವನೆ ಮಾಡಿದ್ದನೇ? ಬೇರೆ ಏನಾದರೂ ಲಿಂಕ್ ಇತ್ತೇ? ಕೆ.ಎಫ್.ಡಿ., ಪಿ.ಎಫ್.ಐ.ನಂಥ ಸಮಾಜವಿರೋಧಿ ಸಂಘಟನೆ ಜೊತೆ ಸಂಪರ್ಕ ಇತ್ತೇ ಎಂದು ಮಾಹಿತಿ ಪಡೆಯಬೇಕಿತ್ತು ಎಂದು ಅಶೋಕ್ ಆಗ್ರಹಿಸಿದ್ದಾರೆ.

ಗೃಹ ಸಚಿವರು, ಪೊಲೀಸ್ ಇಲಾಖೆಗೆ ಸಾಮಾನ್ಯ ಜ್ಞಾನ ಇರಬೇಕು. ಇಂಥ ಕೊಲೆ ಆದಾಗ ಡಬಲ್ ಅಲರ್ಟ್ ಇರಬೇಕು. ತನಿಖೆ ಮಾಡುವವರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಕೇಳಬೇಕಿತ್ತಲ್ಲವೇ? ಸಾಕ್ಷ್ಯಗಳನ್ನು ಸಂಗ್ರಹಿಸಬೇಕಿತ್ತಲ್ಲವೇ? ಕಾನೂನಿನಡಿ ಇರುವ ಕ್ರಮವನ್ನು ಯಾಕೆ ಕೈಗೊಂಡಿಲ್ಲ? ಆರೋಪಿಯನ್ನು ಜೈಲಿಗೆ (ಜುಡಿಷಿಯಲ್ ಕಸ್ಟಡಿ) ಕಳಿಸಿದ ಬಳಿಕ ಯಾರ್ಯಾರು ಭೇಟಿ ಮಾಡಿದ್ದರು? ಬಚಾವ್ ಮಾಡಲು ಸಲಹೆ ಕೊಟ್ಟಿರುವ ಸಾಧ್ಯತೆ ಇರಬಹುದಲ್ಲವೇ ಎಂದು ಕೇಳಿದರು.

ಇದೊಂದು ವಿಶೇಷ ಪ್ರಕರಣವಾಗಿದ್ದರೂ ಲವ್ ಜಿಹಾದ್ ಎಂದರೆ ತಮಗೆ ಕೆಟ್ಟ ಹೆಸರು ಬರಬಹುದೆಂದು, ಅದನ್ನು ತಪ್ಪಿಸಲು ಸರಕಾರವು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಿಲ್ಲ. ಹಾಗೂ ಆರೋಪಿಯನ್ನು ಕಸ್ಟಡಿಗೆ ಪಡೆದಿಲ್ಲ ಎಂದು ಅಶೋಕ್ ಆರೋಪಿಸಿದರು.

ಈ ಸಂದರ್ಭದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X