Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ...

ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಪ್ರಯತ್ನಗಳು ಪ್ರಜಾಪ್ರಭುತ್ವಕ್ಕೆ ಅಪಾಯ : ಎನ್.ಎ.ಹಾರಿಸ್

‘ವೋಟ್ ಬಚಾವೋ, ದೇಶ ಬಚಾವೋ’ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ2 Nov 2026 6:07 PM IST
share
ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಪ್ರಯತ್ನಗಳು ಪ್ರಜಾಪ್ರಭುತ್ವಕ್ಕೆ ಅಪಾಯ : ಎನ್.ಎ.ಹಾರಿಸ್

ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ದೇಶದ ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ‘ವೋಟ್ ಬಚಾವೋ, ದೇಶ ಬಚಾವೋ’ ಪ್ರತಿಭಟನೆಯ ಭಾಗವಾಗಿ, ಬೆಂಗಳೂರಿನ ಆಸ್ಟಿನ್ ಟೌನ್‌ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದೇಶಾದ್ಯಂತ ಕೇಳಿಬರುತ್ತಿರುವ ಮತಗಳ್ಳತನದ ಆರೋಪಗಳು, ಜನಾದೇಶವನ್ನು ತಿರುಚುವ ಪ್ರಯತ್ನಗಳು ಹಾಗೂ ಪ್ರಜಾಪ್ರಭುತ್ವದ ಸಾಂವಿಧಾನಿಕ ಮೌಲ್ಯಗಳಿಗೆ ಎದುರಾಗಿರುವ ಸವಾಲುಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎನ್.ಎ.ಹಾರಿಸ್, ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕಿನ ಪಾವಿತ್ರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಯಾವುದೇ ಪ್ರಯತ್ನಗಳು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿಯಾಗಿವೆ ಎಂದು ತಿಳಿಸಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅನುಸರಿಸಲಾಗುತ್ತಿರುವ ಕ್ರಮಗಳು ಹಾಗೂ ಅವುಗಳಿಂದ ಮತದಾರರಿಗೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಅವರು ಕಳವಳ ವ್ಯಕ್ತಪಡಿಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಚುನಾವಣಾ ಆಯೋಗದ ಉತ್ತರದಾಯಿತ್ವ ಅತ್ಯಂತ ಮುಖ್ಯ ಎಂದು ಒತ್ತಿಹೇಳಿದರು.

ಕಾರ್ಯಕ್ರಮದಲ್ಲಿ ‘ವೋಟ್ ಚೋರಿ ನಿಲ್ಲಿಸಿ’, ‘ಪ್ರಜಾಪ್ರಭುತ್ವ ಉಳಿಸಿ’, ‘ಸಂವಿಧಾನ ರಕ್ಷಿಸಿ’ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗೆ ಒಗ್ಗಟ್ಟಿನ ಸಂದೇಶ ಸಾರಲಾಯಿತು.

ದೇಶದ ಪ್ರತಿಯೊಬ್ಬ ನಾಗರಿಕನ ಮತಕ್ಕೂ ಸಮಾನ ಮೌಲ್ಯವಿದೆ. ಆ ಮತದಾನದ ಹಕ್ಕನ್ನು ರಕ್ಷಿಸುವುದು ಎಲ್ಲರ ಹೊಣೆಗಾರಿಕೆಯಾಗಿದೆ ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Tags

N.A.HarisDemocracyVoters
share
ವಾರ್ತಾಭಾರತಿ
ವಾರ್ತಾಭಾರತಿ
Next Story
X