Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೈಸೂರು ದಸರಾ ವೇಳೆ ನಡೆದ ಸಣ್ಣಪುಟ್ಟ...

ಮೈಸೂರು ದಸರಾ ವೇಳೆ ನಡೆದ ಸಣ್ಣಪುಟ್ಟ ಘಟನೆಗಳಿಗೆ ಜಾತಿ ಬಣ್ಣ ಹಚ್ಚುವುದು ಕೀಳುಮಟ್ಟದ ಆಲೋಚನೆ : ಡಾ. ಜಿ. ಪರಮೇಶ್ವರ

" ದೊಡ್ಡ ಕಾರ್ಯಕ್ರಮಗಳಲ್ಲಿ ಸಂಭವಿಸುವ ಸಣ್ಣಪುಟ್ಟ ಘಟನೆಗಳನ್ನು ಮುಂದಿಟ್ಟುಕೊಂಡು ಒಟ್ಟಾರೆ ವ್ಯವಸ್ಥೆಯನ್ನು ದೂಷಿಸುವುದು ಸರಿಯಲ್ಲ"

ವಾರ್ತಾಭಾರತಿವಾರ್ತಾಭಾರತಿ22 Oct 2026 2:47 PM IST
share
ಮೈಸೂರು ದಸರಾ ವೇಳೆ ನಡೆದ ಸಣ್ಣಪುಟ್ಟ ಘಟನೆಗಳಿಗೆ ಜಾತಿ ಬಣ್ಣ ಹಚ್ಚುವುದು ಕೀಳುಮಟ್ಟದ ಆಲೋಚನೆ : ಡಾ. ಜಿ. ಪರಮೇಶ್ವರ

ಮೈಸೂರು ದಸರಾ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಶಿಷ್ಟಾಚಾರ ಪಾಲಿಸುವ ವೇಳೆ ನಡೆದ ಘಟನೆಗಳಿಗೆ ಜಾತಿ ಬಣ್ಣ ಹಚ್ಚುವುದು ಕೀಳುಮಟ್ಟದ ಆಲೋಚನೆಯಾಗಿದೆ. ಇಂತಹ ವಿಚಾರಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಹೇಳಿದ್ದಾರೆ.

ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಸಂದರ್ಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ತೆರಳುತ್ತಿದ್ದ ಕೆಲವು ಸಚಿವರನ್ನು ಪೊಲೀಸರು ತಡೆದಿರುವ ವಿಡಿಯೋ ವೈರಲ್ ಆಗಿರುವ ಕುರಿತು ಹಾಗೂ ಈ ವಿಚಾರದಲ್ಲಿ ಬಿಜೆಪಿ ಮಾಡಿರುವ ಆರೋಪಗಳ ಕುರಿತು ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿಗಳಿಗೆ ಅವರದೇ ಆದ ಶಿಷ್ಟಾಚಾರವಿರುತ್ತದೆ. ಅದನ್ನು ಪೊಲೀಸರು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ. ವಿಶೇಷವಾಗಿ ಅಪಾರ ಜನಸಂದಣಿ ಇರುವ ಸಂದರ್ಭಗಳಲ್ಲಿ ಭದ್ರತೆ ಮತ್ತು ಶಿಷ್ಟಾಚಾರದ ನಿಯಮಗಳನ್ನು ಹೆಚ್ಚು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತದೆ. ಮುಖ್ಯಮಂತ್ರಿಗಳನ್ನು ಹೊರತುಪಡಿಸಿ ಬೇರೆ ಯಾರನ್ನೂ ಒಳಗೆ ಬಿಡಬಾರದು ಎಂಬ ಸೂಚನೆ ಪೊಲೀಸರಿಗೆ ಇದ್ದಿರಬಹುದು. ಈ ಬಗ್ಗೆ ನನಗೆ ನಿಖರ ಮಾಹಿತಿ ಇಲ್ಲ. ಆದರೆ, ಮೇಲಧಿಕಾರಿಗಳಿಂದ ಬಂದ ಸೂಚನೆಗಳನ್ನು ಪೊಲೀಸರು ಪಾಲಿಸಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳು ಮುಂದೆ ಸಾಗುತ್ತಿದ್ದ ಸಂದರ್ಭದಲ್ಲಿ ಸಚಿವರನ್ನು ಪೊಲೀಸರು ತಡೆದಿದ್ದರೂ, ನಂತರ ಮುಖ್ಯಮಂತ್ರಿಗಳೇ ಹಿಂದಿರುಗಿ ಅವರನ್ನು ಕರೆದುಕೊಂಡು ಹೋಗಿದ್ದಾರೆ. ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ಈ ವಿಚಾರದಲ್ಲಿ ಅನಗತ್ಯ ವಿವಾದ ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದರು.

ಈ ಘಟನೆಯನ್ನು ಮುಂದಿಟ್ಟುಕೊಂಡು 'ದಲಿತ ಸಚಿವರು' ಎಂಬ ಪದವನ್ನು ಪದೇಪದೆ ಬಳಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಸಚಿವರು ಎಂದು ಕರೆದರೆ ಸಾಕಲ್ಲವೇ? ಪ್ರತಿಯೊಬ್ಬರನ್ನೂ ಅವರ ಜಾತಿಯ ಹೆಸರಿನಿಂದಲೇ ಗುರುತಿಸಬೇಕೇ? ಬೇರೆ ಸಚಿವರನ್ನು ಅವರ ಜಾತಿಯ ಹೆಸರಿನಿಂದ ಕರೆಯಲಾಗುತ್ತದೆಯೇ ಎಂದು ಪ್ರಶ್ನಿಸಿದರು.

ಲಕ್ಷಾಂತರ ಜನರು ಸೇರುವ ದೊಡ್ಡ ಕಾರ್ಯಕ್ರಮಗಳಲ್ಲಿ ಸಣ್ಣಪುಟ್ಟ ಘಟನೆಗಳು ನಡೆಯುವ ಸಾಧ್ಯತೆಯಿರುತ್ತದೆ. ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಕೆಲವರಿಗೆ ಪ್ರವೇಶಪತ್ರ ತಲುಪದೇ ಇರಬಹುದು. ಪ್ರಮುಖ ವ್ಯಕ್ತಿಗಳಿಗೆ ಪಾಸ್ ನೀಡುವ ವಿಚಾರದಲ್ಲಿ ಸಂವಹನದ ಕೊರತೆ ಅಥವಾ ಗಮನಕ್ಕೆ ಬಾರದ ತಪ್ಪುಗಳು ಸಂಭವಿಸಬಹುದು. ಇಂತಹ ಲೋಪಗಳು ನಡೆದಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ, ಅವುಗಳನ್ನೇ ದೊಡ್ಡ ವಿವಾದವನ್ನಾಗಿ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ನನಗೆ ದೊರೆತ ಮಾಹಿತಿಯ ಪ್ರಕಾರ, ಹತ್ತು ದಿನಗಳ ದಸರಾ ಉತ್ಸವದ ಅವಧಿಯಲ್ಲಿ ಸುಮಾರು 15ರಿಂದ 20 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಇಷ್ಟೊಂದು ದೊಡ್ಡ ಸಂಖ್ಯೆಯ ಜನರನ್ನು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಸಮರ್ಥವಾಗಿ ನಿರ್ವಹಿಸಿವೆ. ದಸರಾ ವೀಕ್ಷಿಸಲು ಬಂದ ಜನರು ಸುರಕ್ಷಿತವಾಗಿ ತಮ್ಮ ಮನೆಗಳಿಗೆ ಮರಳಿದ್ದಾರೆ. ಈ ಸಾಧನೆಯನ್ನು ನಾವು ಮೆಚ್ಚಬೇಕಲ್ಲವೇ ಎಂದರು.

ತುಮಕೂರು ದಸರಾ ಉತ್ಸವದಲ್ಲಿಯೂ ನಿರೀಕ್ಷೆಗೂ ಮೀರಿ ಲಕ್ಷಾಂತರ ಜನರು ಭಾಗವಹಿಸಿದ್ದರು. ಇಂತಹ ಬೃಹತ್ ಕಾರ್ಯಕ್ರಮಗಳನ್ನು ಆಯೋಜಿಸಿ ಜನಸಂದಣಿಯನ್ನು ನಿರ್ವಹಿಸುವುದು ಸುಲಭದ ಕೆಲಸವಲ್ಲ. ದೊಡ್ಡ ಕಾರ್ಯಕ್ರಮಗಳಲ್ಲಿ ಸಂಭವಿಸುವ ಸಣ್ಣಪುಟ್ಟ ಘಟನೆಗಳನ್ನು ಮುಂದಿಟ್ಟುಕೊಂಡು ಒಟ್ಟಾರೆ ವ್ಯವಸ್ಥೆಯನ್ನು ದೂಷಿಸುವುದು ಸರಿಯಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X